ಪ್ರಸಂಗಿ 9:6 - ಪರಿಶುದ್ದ ಬೈಬಲ್6 ಅವರು ಸತ್ತಾಗಲೇ, ಅವರ ಪ್ರೀತಿ, ದ್ವೇಷ ಮತ್ತು ಹೊಟ್ಟೆಕಿಚ್ಚು ಅಳಿದುಹೋದವು; ಸತ್ತವರು ಭೂಲೋಕದ ಕಾರ್ಯಗಳಲ್ಲಿ ಇನ್ನೆಂದಿಗೂ ಪಾಲುಗಾರರಾಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರು ಸತ್ತಾಗಲೇ ಅವರ ಪ್ರೀತಿಯೂ, ಹಗೆಯೂ, ಹೊಟ್ಟೆಕಿಚ್ಚು ಅಳಿದುಹೋಗಿವೆ. ಲೋಕದೊಳಗೆ ನಡೆಯುವ ಯಾವ ಕೆಲಸದಲ್ಲಿಯೂ ಅವರಿಗೆ ಇನ್ನೆಂದಿಗೂ ಪಾಲು ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವರ ಪ್ರೀತಿ, ದ್ವೇಷ, ಮತ್ಸರ, ಅವರು ಸತ್ತಾಗಲೇ ಅಳಿದುಹೋಗುತ್ತವೆ. ಇಹಲೋಕದಲ್ಲಿ ನಡೆಯುವ ಯಾವುದರಲ್ಲೂ ಅವರಿಗೆ ಇನ್ನೆಂದಿಗೂ ಪಾಲಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವರು ಸತ್ತಾಗಲೇ ಅವರ ಪ್ರೀತಿಯೂ ಹಗೆಯೂ ಹೊಟ್ಟೇಕಿಚ್ಚೂ ಅಳಿದುಹೋದವು; ಲೋಕದೊಳಗೆ ನಡೆಯುವ ಯಾವ ಕೆಲಸದಲ್ಲಿಯೂ ಅವರಿಗೆ ಇನ್ನೆಂದಿಗೂ ಪಾಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರ ಪ್ರೀತಿಯೂ ಅವರ ದ್ವೇಷವೂ ಅವರ ಅಸೂಯೆ ಕೂಡ, ಅವರು ಸತ್ತಾಗಲೇ ಅಳಿದುಹೋಗುತ್ತವೆ. ಸೂರ್ಯನ ಕೆಳಗೆ ನಡೆಯುವ ಯಾವ ಸಂಗತಿಗಳಲ್ಲಿಯೂ ಸತ್ತವರಿಗೆ ಇನ್ನೆಂದಿಗೂ ಪಾಲು ಇಲ್ಲ. ಅಧ್ಯಾಯವನ್ನು ನೋಡಿ |