ಫಿಲಿಪ್ಪಿಯವರಿಗೆ 1:10 - ಪರಿಶುದ್ದ ಬೈಬಲ್10 ಒಳಿತುಕೆಡಕುಗಳಿಗಿರುವ ವ್ಯತ್ಯಾಸವನ್ನು ಅರಿತುಕೊಂಡು ಒಳ್ಳೆಯದನ್ನೇ ಆರಿಸಿಕೊಳ್ಳುವಂಥವರಾಗಬೇಕು; ಕ್ರಿಸ್ತನ ಬರುವಿಕೆಯಲ್ಲಿ ನೀವು ಪರಿಶುದ್ಧರಾಗಿಯೂ ನಿರ್ದೋಷಿಗಳಾಗಿಯೂ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹೀಗೆ ನೀವು ಉತ್ತಮೋತ್ತಮವಾದುವುಗಳನ್ನೇ ಆರಿಸಿಕೊಂಡು, ಪ್ರಭು ಕ್ರಿಸ್ತರ ದಿನದಂದು ನಿರ್ದೋಷಿಗಳೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ಪೂರ್ಣ ಜ್ಞಾನವಿವೇಕಗಳಿಂದ ಕೂಡಿ ಉತ್ತಮ ಕಾರ್ಯಗಳು ಯಾವವೆಂದು ನೀವು ವಿವೇಚಿಸುವವರಾಗಬೇಕೆಂತಲೂ ಕ್ರಿಸ್ತನು ಬರುವ ದಿನದಲ್ಲಿ ನೀವು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ, ಅತ್ಯುತ್ತಮ ಕಾರ್ಯಗಳನ್ನು ನೀವು ವಿವೇಚಿಸಿಕೊಳ್ಳುವಿರಿ. ಕ್ರಿಸ್ತನ ಪುನರಾಗಮನ ದಿನದವರೆಗೆ ನೀವು ಪರಿಶುದ್ಧರಾಗಿಯೂ ನಿರ್ದೋಷಿಗಳಾಗಿಯೂ ಇರಬೇಕೆಂತಲೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಅಸೆಚ್ ಬರಿ ಕಾಮಾ ಖಲಿ ಮನ್ತಲೆ ತುಮಿ ಕಳ್ವುನ್ ಘೆತಲೆ ಹೊವ್ಚೆ, ಅನಿ ಕ್ರಿಸ್ತ್ ಯೆತಲ್ಯಾ ದಿಸಾತ್ ತುಮಿ ಸರಳ್ ಅನಿ ನಿತಳ್ ರ್‍ಹಾವ್ಚೆ ಮನುನ್, ಅಧ್ಯಾಯವನ್ನು ನೋಡಿ |
ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.