Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:11 - ಪರಿಶುದ್ದ ಬೈಬಲ್‌

11 ಕ್ರಿಸ್ತನ ಸಹಾಯದಿಂದ ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಉಂಟುಮಾಡುವುದಕ್ಕಾಗಿ ನೀವು ಅನೇಕ ಕಾರ್ಯಗಳನ್ನು ಮಾಡುವಂಥವರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸರಳರಾಗಿಯೂ ನಿರ್ಮಲರಾಗಿಯೂ ಯೇಸು ಕ್ರಿಸ್ತನ ಮೂಲಕವಾಗಿರುವ ಸುನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಕಾಣಿಸಿಕೊಂಡು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ತರಬೇಕೆಂತಲೂ ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರ ಮಹಿಮೆ ಹಾಗೂ ಸ್ತೋತ್ರಕ್ಕಾಗಿ ಕ್ರಿಸ್ತ ಯೇಸುವಿನ ಮೂಲಕ ಬರುವ ನೀತಿಯ ಫಲಗಳಿಂದ ತುಂಬಿದವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ದೆವಾಚ್ಯಾ ಮಹಿಮಾ ಅನಿ ಸ್ತುತಿಸಾಟ್ನಿ ಜೆಜು ಕ್ರಿಸ್ತಾಚ್ಯಾ ವೈನಾ ಗಾವ್ತಲ್ಯಾ ಖರ್‍ಯಾ ನಿತಿಚ್ಯಾ ಫಳಾನ್ ತುಮ್ಚಿ ಜಿವನಾ ಭರುನ್ ರ್‍ಹಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:11
34 ತಿಳಿವುಗಳ ಹೋಲಿಕೆ  

ಯಾವುದೇ ದಂಡನೆಯಾಗಲಿ ತತ್ಕಾಲಕ್ಕೆ ಸಂತೋಷಕರವಾಗಿರದೆ ದುಃಖಕರವಾಗಿರುತ್ತದೆ. ಆದರೆ ಆ ತರುವಾಯ ದಂಡನೆಯಿಂದ ನಾವು ಕಲಿತುಕೊಂಡು ಯೋಗ್ಯವಾದ ಜೀವಿತವನ್ನು ಆರಂಭಿಸುವುದರ ಮೂಲಕ ನಮಗೆ ಸಮಾಧಾನ ಉಂಟಾಗುತ್ತದೆ.


ನೀವು ಬಹಳ ಫಲಕೊಟ್ಟು, ನೀವೇ ನನ್ನ ಶಿಷ್ಯರೆಂಬುದನ್ನು ತೋರಿಸಬೇಕು. ಇದರಿಂದ ನನ್ನ ತಂದೆಗೆ ಮಹಿಮೆ ಆಗುವುದು.


ಪ್ರಭುವಿಗೆ ಯೋಗ್ಯರಾಗಿ ನಡೆದು ಪ್ರತಿಯೊಂದು ವಿಷಯದಲ್ಲಿ ಆತನನ್ನು ಸಂತೋಷಪಡಿಸಬೇಕೆಂತಲೂ ನೀವು ಎಲ್ಲಾ ವಿಧವಾದ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ದೇವಜ್ಞಾನದಲ್ಲಿ ಬೆಳಯಬೇಕೆಂತಲೂ


ನಿಜವಾಗಿಯೂ, ನಿಮ್ಮಿಂದ ಕೊಡುಗೆಗಳನ್ನು ಪಡೆದುಕೊಳ್ಳಬೇಕೆಂಬುದು ನನ್ನ ಅಪೇಕ್ಷೆಯಲ್ಲ. ಆದರೆ ಕೊಡುವುದರ ಮೂಲಕ ಮುಂದೆ ಹೇರಳವಾಗಿ ದೊರೆಯುವ ಆಶೀರ್ವಾದಗಳನ್ನು ನೀವು ಹೊಂದಿಕೊಳ್ಳಬೇಕೆಂಬುದೇ ನನ್ನ ಅಪೇಕ್ಷೆ.


ಆದರೆ ಈಗ ನೀವು ಪಾಪದಿಂದ ಬಿಡುಗಡೆಯಾಗಿ ದೇವರ ಗುಲಾಮರಾಗಿದ್ದೀರಿ. ಇದರಿಂದ ನಿಮಗೆ ಪರಿಶುದ್ಧ ಜೀವನವೂ ನಿತ್ಯಜೀವವೂ ದೊರೆಯುತ್ತವೆ.


ಭೂಮಿಯು ಸಸಿಗಳನ್ನು ಬೆಳೆಸುತ್ತದೆ. ಜನರು ತೋಟದಲ್ಲಿ ಬೀಜ ಬಿತ್ತುವರು. ತೋಟವು ಬೀಜವನ್ನು ಬೆಳೆಸುತ್ತದೆ. ಅದೇ ರೀತಿಯಲ್ಲಿ ಯೆಹೋವನು ಎಲ್ಲಾ ಜನಾಂಗಗಳಲ್ಲಿ ನೀತಿಯನ್ನೂ ಸ್ತೋತ್ರವನ್ನೂ ಬೆಳೆಸುತ್ತಾನೆ.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದಲೆಂದು ಮತ್ತು ನೀವೂ ಆತನಲ್ಲಿ ಮಹಿಮೆ ಹೊಂದಲೆಂದು ನಾವು ಪ್ರಾರ್ಥಿಸುತ್ತೇವೆ. ಆ ಮಹಿಮೆಯು ನಮ್ಮ ದೇವರ ಮತ್ತು ಪ್ರಭು ಯೇಸು ಕ್ರಿಸ್ತನ ಕೃಪೆಯಿಂದ ಬರುತ್ತದೆ.


ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಂಡುಬರುತ್ತದೆ.


ದೇವರು ತನ್ನ ಜನರಿಗೆ ವಾಗ್ದಾನ ಮಾಡಿದವುಗಳನ್ನು ನಾವು ಹೊಂದಿಕೊಳ್ಳುತ್ತೇವೆ ಎಂಬುದಕ್ಕೆ ಆ ಪವಿತ್ರಾತ್ಮನೇ ಪ್ರಮಾಣವಾಗಿದ್ದಾನೆ. ದೇವರು ಸಂಪಾದಿಸಿಕೊಂಡ ಜನರಿಗೆ ಇದು ಸಂಪೂರ್ಣ ವಿಮೋಚನೆಯನ್ನು ಉಂಟುಮಾಡುತ್ತದೆ. ದೇವರ ಮಹಿಮೆಗೆ ಸ್ತೋತ್ರವಾಗ ಬೇಕೆಂಬುದೇ ಇದೆಲ್ಲದರ ಉದ್ದೇಶವಾಗಿದೆ.


ಆದ್ದರಿಂದ ನೀವು ತಿಂದರೂ ಕುಡಿದರೂ ಏನೇ ಮಾಡಿದರೂ ದೇವರ ಮಹಿಮೆಗಾಗಿ ಅದನ್ನು ಮಾಡಿರಿ.


ಅದೇ ರೀತಿಯಲ್ಲಿ ನೀವು ಜನರಿಗೆ ಬೆಳಕಾಗಿರಬೇಕು. ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.


ನೀವು ಕ್ರಿಸ್ತನನ್ನು ಅನುಸರಿಸುತ್ತಿರುವುದರ ನಿಮಿತ್ತವಾಗಿ ನಿಮ್ಮ ಬಗ್ಗೆ ಜನರು ಕೆಟ್ಟದ್ದನ್ನು ನುಡಿದರೆ ನೀವು ಭಾಗ್ಯವಂತರಾಗಿದ್ದೀರಿ. ತೇಜೋಮಯವಾದ ಆತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನೆ. ಆತನು ದೇವರಾತ್ಮನಾಗಿದ್ದಾನೆ.


ನಂಬಿಕೆಯಿಲ್ಲದ ಜನರು ನಿಮ್ಮ ಸುತ್ತಮುತ್ತಲೆಲ್ಲಾ ವಾಸಿಸುತ್ತಿದ್ದಾರೆ. ನೀವು ತಪ್ಪು ಮಾಡುತ್ತಿರುವಿರೆಂದು ಅವರು ಹೇಳುವ ಸಾಧ್ಯತೆಯಿದೆ. ಆದ್ದರಿಂದ ಒಳ್ಳೆಯವರಾಗಿ ಬಾಳಿರಿ. ನೀವು ಮಾಡುವ ಒಳ್ಳೆಯ ಕಾರ್ಯಗಳನ್ನು ಅವರು ನೋಡುವರು ಮತ್ತು ದೇವರು ಪ್ರತ್ಯಕ್ಷನಾದ ದಿನದಂದು ಆತನನ್ನು ಕೊಂಡಾಡುವರು.


ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ.


ನಾವು ದೇವರ ನಿರ್ಮಾಣ. ನಾವು ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ದೇವರು ನಮ್ಮನ್ನು ಕ್ರಿಸ್ತಯೇಸುವಿನಲ್ಲಿ ಹೊಸ ಜನರನ್ನಾಗಿ ಮಾಡಿದನು. ದೇವರು ನಮಗೋಸ್ಕರವಾಗಿ ಆ ಒಳ್ಳೆಯ ಕಾರ್ಯಗಳನ್ನು ಮೊದಲೇ ಯೋಜನೆ ಮಾಡಿದನು. ನಾವು ಆ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಜೀವಿಸಬೇಕೆಂಬುದು ದೇವರ ಯೋಜನೆಯಾಗಿತ್ತು.


ಕ್ರಿಸ್ತನನ್ನು ನಿರೀಕ್ಷಿಸಿಕೊಂಡಿರುವವರಲ್ಲಿ ನಾವೇ ಮೊದಲಿಗರು. ದೇವರ ಮಹಿಮೆಗೆ ಸ್ತೋತ್ರವನ್ನು ಉಂಟುಮಾಡಬೇಕೆಂದೇ ನಮ್ಮನ್ನು ಆರಿಸಿಕೊಳ್ಳಲಾಯಿತು.


ಬಿತ್ತುವವನಿಗೆ ಬೀಜವನ್ನು ಕೊಡುವವನು ದೇವರೇ. ಆತನು ಆಹಾರಕ್ಕಾಗಿ ರೊಟ್ಟಿಯನ್ನು ಕೊಡುವನು. ಅಂತೆಯೇ, ದೇವರು ಆತ್ಮಿಕ ಬೀಜವನ್ನು ಕೊಡುವನು ಮತ್ತು ನಿಮ್ಮ ಬೀಜವನ್ನು ಬೆಳೆಯಮಾಡುವನು. ನಿಮ್ಮ ಒಳ್ಳೆಯ ಕ್ರಿಯೆಯಿಂದ ಆತನು ಮಹಾ ಸುಗ್ಗಿಯನ್ನು ಉಂಟುಮಾಡುವನು.


“ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ; ನಾನು ನಿಮ್ಮನ್ನು ಆರಿಸಿಕೊಂಡೆನು. ನೀವು ಹೊರಟುಹೋಗಿ ಫಲಕೊಡಬೇಕು. ಇದೇ ನಾನು ನಿಮಗೆ ಕೊಟ್ಟಿರುವ ಕೆಲಸ. ಈ ಫಲವು ನಿಮ್ಮ ಜೀವನದಲ್ಲಿ ಶಾಶ್ವತವಾಗಿರಲಿ ಎಂಬುದೇ ನನ್ನ ಬಯಕೆ. ಹೀಗಿರಲಾಗಿ, ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.


ಫಲಕೊಡದಿರುವ ಪ್ರತಿಯೊಂದು ಕವಲನ್ನು ಆತನು ಕತ್ತರಿಸಿಹಾಕುವನು. ಫಲಕೊಡುವ ಕವಲು ಇನ್ನೂ ಹೆಚ್ಚು ಫಲಕೊಡುವಂತೆ ಅದನ್ನು ಶುದ್ಧಗೊಳಿಸುವನು.


ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”


“ನಿನ್ನ ಜನರೆಲ್ಲಾ ನೀತಿಯಲ್ಲಿ ಜೀವಿಸುವರು. ಅವರು ಭೂಮಿಗೆ ಶಾಶ್ವತವಾದ ಬಾಧ್ಯಸ್ತರಾಗುವರು. ಆ ಜನರನ್ನು ನಾನೇ ನಿರ್ಮಿಸಿದೆನು. ನಾನು ನನ್ನ ಸ್ವಂತ ಕೈಗಳಿಂದ ನಿರ್ಮಿಸಿದ ಆಶ್ಚರ್ಯಕರವಾದ ಸಸಿಗಳಂತೆ ಅವರಿರುವರು.


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.


ಆತನು ಭೂಮಿಯನ್ನು ಅಗೆದು ಹಸನು ಮಾಡಿದನು; ಅದರಲ್ಲಿ ಉತ್ತಮವಾದ ದ್ರಾಕ್ಷಿಯ ಸಸಿಗಳನ್ನು ನೆಟ್ಟನು. ತೋಟದ ಮಧ್ಯದಲ್ಲಿ ಒಂದು ಗೋಪುರವನ್ನು ಕಟ್ಟಿಸಿ ದ್ರಾಕ್ಷಿಯ ತೊಟ್ಟಿಯನ್ನು ಮಾಡಿಸಿದನು. ತೋಟವು ಒಳ್ಳೆಯ ದ್ರಾಕ್ಷಿಹಣ್ಣನ್ನು ಕೊಡುವುದೆಂದು ಎದುರುನೋಡತೊಡಗಿದನು. ಆದರೆ ಅದು ಹೊಲಸು ಹಣ್ಣನ್ನು ಬಿಟ್ಟಿತು.


ಜೆರುಸಲೇಮಿನ ಬಡಜನರಿಗೋಸ್ಕರ ಕೊಟ್ಟಿರುವ ಈ ಹಣವನ್ನೆಲ್ಲಾ ಸುರಕ್ಷಿತವಾಗಿ ಅವರಿಗೆ ತಲುಪಿಸಿದ ಮೇಲೆ ನಾನು ಸ್ಪೇನಿಗೆ ಹೊರಡುವೆನು. ನಾನು ಸ್ಪೇನಿಗೆ ಪ್ರಯಾಣ ಮಾಡುವಾಗ (ರೋಮಿನಲ್ಲಿ) ಇಳಿದು ನಿಮ್ಮನ್ನು ಸಂದರ್ಶಿಸುವೆನು.


ನಮ್ಮ ಜನರು ತಮ್ಮ ಜೀವನವು ನಿಷ್ಪ್ರಯೋಜಕವಾಗದಂತೆ ಪರೋಪಕಾರವನ್ನು ಕಲಿತುಕೊಂಡು ಕೊರತೆಯಲ್ಲಿರುವವರಿಗೆ ಉಪಕಾರ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು