ಫಿಲಿಪ್ಪಿಯವರಿಗೆ 1:14 - ಪರಿಶುದ್ದ ಬೈಬಲ್14 ನಾನಿನ್ನೂ ಸೆರೆಮನೆಯಲ್ಲಿದ್ದೇನೆ. ಆದರೆ ನನ್ನ ಈ ಸ್ಥಿತಿಯಿಂದ ಅನೇಕ ವಿಶ್ವಾಸಿಗಳು ಪ್ರೋತ್ಸಾಹಿತರಾಗಿ ಕ್ರಿಸ್ತನ ವಿಷಯವಾದ ಸಂದೇಶವನ್ನು ಮತ್ತಷ್ಟು ಧೈರ್ಯದಿಂದ ಜನರಿಗೆ ಹೇಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನನ್ನ ಬಂಧನದಿಂದಾಗಿ ನಮ್ಮ ಸಹೋದರರಲ್ಲಿ ಅನೇಕರು ದೇವರಲ್ಲಿ ಭರವಸೆಯಿಟ್ಟಿರುವರು. ಅಳುಕಿಲ್ಲದೆ, ಅಂಜಿಕೆಯಿಲ್ಲದೆ ದಿಟ್ಟತನದಿಂದ ಶುಭಸಂದೇಶವನ್ನು ಅವರು ಸಾರುತ್ತಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬೇಡಿಗಳಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯಹೊಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಾನು ಸೆರೆಯಲ್ಲಿರುವುದರಿಂದಲೇ ಕರ್ತ ದೇವರಲ್ಲಿರುವ ಅನೇಕ ಸಹೋದರರು ಭಯವಿಲ್ಲದೆಯೂ ಭರವಸೆಯಿಂದಲೂ ಸುವಾರ್ತೆಯ ವಾಕ್ಯವನ್ನು ಮಾತನಾಡುವುದಕ್ಕೆ ಪ್ರೋತ್ಸಾಹ ಹೊಂದಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಅನಿ ಮಾಜ್ಯಾ ಭಾವಾನಿ ಅನಿ ಭೆನಿಯಾನಿ ಲೈ ಲೊಕಾನಿ ಮಾಕಾ ಬಂಧಿಖಾನ್ಯಾತ್ ಥವಲ್ಲ್ಯಾ ಸಾಟಿಚ್ ಕ್ರಿಸ್ತಾಚ್ಯಾ ವರ್‍ತಿ ಬರೊಸೊ ಥವ್ನ್ ಘೆವ್ನ್ ದೆವಾಚಿ ಬರಿ ಖಬರ್ ಭಿಂಯೆನಸ್ತಾನಾ ಸಾಂಗುಕ್ ಅನಿಬಿ ಧೈರ್ಯ್ ಕರುನ್ ಘೆಟ್ಲ್ಯಾತ್. ಅಧ್ಯಾಯವನ್ನು ನೋಡಿ |
ನಿಮ್ಮೆಲ್ಲರ ವಿಷಯದಲ್ಲಿ ಈ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.