ಫಿಲಿಪ್ಪಿಯವರಿಗೆ 1:19 - ಪರಿಶುದ್ದ ಬೈಬಲ್19 ನೀವು ನನಗೋಸ್ಕರ ಪ್ರಾರ್ಥಿಸುತ್ತಿದ್ದೀರಿ ಮತ್ತು ಯೇಸು ಕ್ರಿಸ್ತನ ಆತ್ಮನು ನನಗೆ ಸಹಾಯ ಮಾಡುತ್ತಿದ್ದಾನೆ. ಆದ್ದರಿಂದ ನನ್ನ ಈ ಕಷ್ಟವು ನನಗೆ ರಕ್ಷಣೆಯನ್ನು ಉಂಟು ಮಾಡುವುದೆಂದು ನನಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯಾಕೆಂದರೆ ನಿಮ್ಮ ವಿಜ್ಞಾಪನೆಯಿಂದಲೂ ಮತ್ತು ಯೇಸು ಕ್ರಿಸ್ತನ ಆತ್ಮನ ಸಹಾಯದಿಂದಲೂ ಇದು ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹೌದು, ನನಗದು ತುಂಬಾ ಸಂತೋಷದ ವಿಷಯ. ನಿಮ್ಮ ಪ್ರಾರ್ಥನಾ ಫಲದಿಂದಲೂ ಯೇಸುಕ್ರಿಸ್ತರು ಕೊಡುವ ಆತ್ಮದ ನೆರವಿನಿಂದಲೂ ನನಗೆ ಬಿಡುಗಡೆ ಖಚಿತವೆಂದು ಬಲ್ಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯಾಕಂದರೆ ನನಗೆ ಸಂಭವಿಸಿರುವದು ನೀವು ದೇವರಿಗೆ ಮಾಡುವ ವಿಜ್ಞಾಪನೆಯಿಂದಲೂ ಕ್ರಿಸ್ತನು ಹೇರಳವಾಗಿ ದಯಪಾಲಿಸುವ ಆತ್ಮನ ಸಹಾಯದಿಂದಲೂ ನನ್ನ ಪರಮಹಿತಕ್ಕೆ ಅನುಕೂಲಿಸುವದೆಂದು ಬಲ್ಲೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಿಮ್ಮ ಪ್ರಾರ್ಥನೆಯಿಂದಲೂ ಕ್ರಿಸ್ತ ಯೇಸು ಕೊಡುವ ಪವಿತ್ರಾತ್ಮರ ಸಹಾಯದಿಂದ ನನಗೆ ಸಂಭವಿಸಿದವುಗಳು ನನ್ನ ಬಿಡುಗಡೆಗಾಗಿಯೇ ಎಂದು ನಾನು ಬಲ್ಲೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಕಶ್ಯಾಕ್ ಮಟ್ಲ್ಯಾರ್, ತುಮ್ಚ್ಯಾ ಮಾಗ್ನಿನಿ, ಅನಿ ಜೆಜು ಕ್ರಿಸ್ತಾಚ್ಯಾ ಆತ್ಮ್ಯಾಚ್ಯಾ ಮಜತಿ ವೈನಾ ಮಾಕಾ ಸುಟ್ಕಾ ಹೊವ್ಕ್ ಅನುಕುಲ್ ಹೊತಾ ಮನುನ್ ಮಾಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |
ಆದಕಾರಣವೇ, ನಾನು ನಿಮ್ಮ ಬಳಿಗೆ ತಿಮೊಥೆಯನನ್ನು ಕಳುಹಿಸುತ್ತಿದ್ದೇನೆ, ಅವನು ಪ್ರಭುವಿನಲ್ಲಿ ನನ್ನ ಮಗನಾಗಿದ್ದಾನೆ. ನಾನು ಅವನನ್ನು ಪ್ರೀತಿಸುತ್ತೇನೆ. ಅವನು ನಂಬಿಗಸ್ತನಾಗಿದ್ದಾನೆ. ನಾನು ಕ್ರಿಸ್ತ ಯೇಸುವಿನಲ್ಲಿ ಜೀವಿಸುವ ರೀತಿಯನ್ನು ಅವನು ನಿಮ್ಮ ಜ್ಞಾಪಕಕ್ಕೆ ತರುವನು. ಪ್ರತಿಯೊಂದು ಕಡೆಯಲ್ಲಿಯೂ ಎಲ್ಲಾ ಸಭೆಗಳಲ್ಲಿಯೂ ನಾನು ಅದೇ ರೀತಿಯ ಜೀವನವನ್ನು ಉಪದೇಶಿಸುತ್ತೇನೆ.
ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.