ಫಿಲಿಪ್ಪಿಯವರಿಗೆ 1:25 - ಪರಿಶುದ್ದ ಬೈಬಲ್25 ಆದ್ದರಿಂದ ನಾನು ಜೀವದಿಂದುಳಿದು ನಿಮ್ಮೊಂದಿಗೆ ಇರುತ್ತೇನೆಂದು ನನಗೆ ಗೊತ್ತಿದೆ. ನೀವು ನಂಬಿಕೆಯಲ್ಲಿ ವೃದ್ಧಿಯಾಗಿರಲು ಆನಂದವಾಗಿರಲು ನಿಮಗೆ ನೆರವಾಗಬೇಕೆಂತಲೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆದ್ದರಿಂದ ನಿಮಗೆ ಕ್ರಿಸ್ತನಂಬಿಕೆಯಲ್ಲಿ ಅಭಿವೃದ್ಧಿಯೂ ಆನಂದವೂ ಉಂಟಾಗುವುದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಇದರಲ್ಲಿ ನನಗೆ ಎಳ್ಳಷ್ಟೂ ಸಂದೇಹವಿಲ್ಲ. ಈ ಕಾರಣ, ನಾನು ಇಹದಲ್ಲಿ ಉಳಿಯುವೆನೆಂದು ಬಲ್ಲೆ. ನಿಮ್ಮೆಲ್ಲರೊಡನಿದ್ದು, ಕ್ರೈಸ್ತವಿಶ್ವಾಸದಲ್ಲಿ ನೀವು ವೃದ್ಧಿಯಾಗಿ ಆನಂದಿಸುವಂತೆ ನಿಮಗೆ ನೆರವಾಗುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆದದರಿಂದ ನಿಮಗೆ ಕ್ರಿಸ್ತ ನಂಬಿಕೆಯಲ್ಲಿ ಅಭಿವೃದ್ಧಿಯೂ ಆನಂದವೂ ಉಂಟಾಗುವದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನಿಮಗೆ ನಂಬಿಕೆಯಲ್ಲಿ ಅಭಿವೃದ್ಧಿಯೂ ಸಂತೋಷವೂ ಉಂಟಾಗುವುದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರೊಡನೆ ಇರುವೆನೆಂದು ನಿಶ್ಚಯವಾಗಿ ತಿಳಿದಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತಸೆಹೊವ್ನ್ ತುಮ್ಕಾ ವಿಶ್ವಾಸಾತ್ ವಾಡಾವಳಿಕ್ ಅನಿ ಕುಶಿ ಹೊವ್‍ಸಾಟ್ನಿ ಮಿಯಾ ತುಮ್ಚ್ಯಾ ವಾಂಗ್ಡಾ ಝಿತ್ತೊ ರ್‍ಹಾತಾ ಮನುನ್ ಮಿಯಾ ಲೈ ವಿಶ್ವಾಸ್ ಥವ್ಲಾ ಅನಿ ಮಾಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |
ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.