Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:6 - ಪರಿಶುದ್ದ ಬೈಬಲ್‌

6 ದೇವರು ನಿಮ್ಮಲ್ಲಿ ಒಳ್ಳೆಯ ಕಾರ್ಯವನ್ನು ಆರಂಭಿಸಿ ನಡೆಸಿಕೊಂಡು ಬರುತ್ತಿದ್ದಾನೆ. ಯೇಸು ಕ್ರಿಸ್ತನು ಮತ್ತೆ ಬಂದಾಗ ದೇವರು ಆ ಕಾರ್ಯವನ್ನು ಸಂಪೂರ್ಣಗೊಳಿಸುವನೆಂದು ನನಗೆ ಭರವಸೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈ ಸತ್ಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಮುಂದುವರೆಸುತ್ತಾ, ಯೇಸುಕ್ರಿಸ್ತರು ಪುನರಾಗಮಿಸುವಷ್ಟರಲ್ಲಿ ಪೂರೈಸುವರು ಎಂಬುದೇ ನನ್ನ ದೃಢ ನಂಬಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಈ ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಸಿದ್ಧಿಗೆ ತರುವನೆಂದು ನನಗೆ ಭರವಸವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಒಳ್ಳೆಯ ಕೆಲಸಗಳನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಕ್ರಿಸ್ತ ಯೇಸುವಿನ ಪುನರಾಗಮನ ದಿನದವರೆಗೆ ಪೂರೈಸುವರು ಎಂಬುದೇ ನನ್ನ ದೃಢ ವಿಶ್ವಾಸವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹೆ ಬರೆ ಕಾಮ್ ತುಮ್ಚ್ಯಾ ಮದ್ದಿ ಶುರು ಕರಲ್ಲೆ ತೆ, ಚಾಲ್ವುನ್ ಘೆವ್ನ್ ಜೆಜು ಕ್ರಿಸ್ತ್ ಯೆಯ್ ಪತರ್ ಪುರಾ ಕರುನ್ ಸಾರ್‍ತಾ ಮನ್ತಲೊ ಬರೊಸೊ ಮಾಕಾ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:6
33 ತಿಳಿವುಗಳ ಹೋಲಿಕೆ  

ಹೌದು, ಆತನಿಗೆ ಮೆಚ್ಚಿಕೆಕರವಾದ ಕಾರ್ಯಗಳನ್ನು ಮಾಡಬೇಕೆಂಬ ಅಪೇಕ್ಷೆಯನ್ನು ಆತನೇ ನಿಮ್ಮಲ್ಲಿ ಹುಟ್ಟಿಸುತ್ತಾನೆ ಅಲ್ಲದೆ ಅವುಗಳನ್ನು ಮಾಡಲು ಆತನೇ ನಿಮಗೆ ಶಕ್ತಿಯನ್ನು ಕೊಡುತ್ತಾನೆ.


ಸಭೆಯ ಸೇವೆಗೋಸ್ಕರ ದೇವರ ಪರಿಶುದ್ಧ ಜನರನ್ನು ಸಿದ್ಧಪಡಿಸುವುದಕ್ಕಾಗಿ ಆತನು ಅವರನ್ನು ನೇಮಿಸಿದನು.


ಹೌದು, ನೀವು ಸ್ವಲ್ಪಕಾಲ ಮಾತ್ರ ಸಂಕಟವನ್ನು ಅನುಭವಿಸುವಿರಿ. ಆದರೆ ಅನಂತರ ದೇವರು ಎಲ್ಲವನ್ನು ಸರಿಪಡಿಸುತ್ತಾನೆ. ಆತನು ನಿಮ್ಮನ್ನು ಬಲಪಡಿಸುತ್ತಾನೆ. ನೀವು ಕೆಳಕ್ಕೆ ಬೀಳದಂತೆ ಆತನು ನಿಮಗೆ ಆಧಾರವಾಗುವನು. ಎಲ್ಲರಿಗೂ ಕೃಪೆಯನ್ನು ತೋರುವ ದೇವರು ಆತನೇ. ತನ್ನ ಪ್ರಭಾವದಲ್ಲಿ ಪಾಲುಗಾರರಾಗಲು ಕ್ರಿಸ್ತನೇ ನಿಮ್ಮನ್ನು ಕರೆದನು. ಆ ಪ್ರಭಾವವು ಶಾಶ್ವತವಾದದ್ದು.


ಯೆಹೋವನೇ, ನಿನ್ನ ವಾಗ್ದಾನಗಳನ್ನು ನೆರವೇರಿಸು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು. ನಮ್ಮನ್ನು ಸೃಷ್ಟಿಸಿದಾತನು ನೀನೇ. ನಮ್ಮನ್ನು ಕೈಬಿಡಬೇಡ!


ಯೇಸುವು ನಿಮ್ಮನ್ನು ಕೊನೆಯವರೆಗೂ ದೃಢಪಡಿಸಿ ಕಾಪಾಡುವನು. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನೀವು ನಿರ್ದೋಷಿಗಳಾಗಿರುವಿರಿ.


ಆದಕಾರಣವೇ ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತೇವೆ. ಯಾವ ಒಳ್ಳೆಯ ಮಾರ್ಗದಲ್ಲಿ ನೀವು ಜೀವಿಸಬೇಕೆಂದು ದೇವರು ನಿಮ್ಮನ್ನು ಕರೆದನೋ, ಆ ಮಾರ್ಗದಲ್ಲೇ ನೀವು ಜೀವಿಸಲಿಕ್ಕಾಗುವಂತೆ ಪ್ರಾರ್ಥಿಸುತ್ತೇವೆ. ನಿಮ್ಮಲ್ಲಿರುವ ಒಳ್ಳೆಯ ತನವು ಒಳ್ಳೆಯದನ್ನು ಮಾಡುವಂತೆ ನಿಮ್ಮನ್ನು ಪ್ರೇರೇಪಿಸುತ್ತದೆ. ನಿಮ್ಮಲ್ಲಿರುವ ನಂಬಿಕೆಯು ನಿಮ್ಮಿಂದ ಕಾರ್ಯ ಸಾಧಿಸುತ್ತದೆ. ಈ ಕಾರ್ಯಗಳನ್ನು ನೀವು ಹೆಚ್ಚುಹೆಚ್ಚಾಗಿ ಮಾಡಲು ದೇವರು ತನ್ನ ಶಕ್ತಿಯಿಂದ ನಿಮಗೆ ಸಹಾಯ ಮಾಡಲೆಂದು ಬೇಡಿಕೊಳ್ಳುತ್ತೇವೆ.


ಹಿಂದೆ ಹೊಂದಿದ್ದ ಧೈರ್ಯವನ್ನು ಬಿಟ್ಟುಬಿಡಬೇಡಿ. ನಿಮ್ಮ ಧೈರ್ಯಕ್ಕೆ ತಕ್ಕ ಪ್ರತಿಫಲವು ಸಿಗುತ್ತದೆ.


ಯೇಸು, “ದೇವರು ಕಳುಹಿಸಿದಾತನನ್ನು ನೀವು ನಂಬಬೇಕು. ಈ ಕಾರ್ಯವನ್ನೇ ದೇವರು ನಿಮ್ಮಿಂದ ಅಪೇಕ್ಷಿಸುತ್ತಾನೆ” ಎಂದು ಉತ್ತರಕೊಟ್ಟನು.


ಒಳಿತುಕೆಡಕುಗಳಿಗಿರುವ ವ್ಯತ್ಯಾಸವನ್ನು ಅರಿತುಕೊಂಡು ಒಳ್ಳೆಯದನ್ನೇ ಆರಿಸಿಕೊಳ್ಳುವಂಥವರಾಗಬೇಕು; ಕ್ರಿಸ್ತನ ಬರುವಿಕೆಯಲ್ಲಿ ನೀವು ಪರಿಶುದ್ಧರಾಗಿಯೂ ನಿರ್ದೋಷಿಗಳಾಗಿಯೂ ಇರಬೇಕು.


ನಾವು ಯಾವಗಲೂ ಯೇಸುವನ್ನು ಮಾದರಿಯಾಗಿ ಇಟ್ಟುಕೊಂಡಿರಬೇಕು. ನಮ್ಮ ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆತನೇ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡನು. ಈಗ ಆತನು ದೇವರ ಸಿಂಹಾಸನದ ಬಲಭಾಗದಲ್ಲಿ ಕುಳಿತಿರುವನು.


ನಮ್ಮ ತಂದೆಯಾದ ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಫಲವಾಗಿ ಮಾಡಿದ ಕಾರ್ಯಗಳಿಗಾಗಿಯೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಿಮಗಿರುವ ನಿರೀಕ್ಷೆಯಿಂದ ನೀವು ದೃಢವಾಗಿರುವುದಕ್ಕಾಗಿಯೂ ನಾವು ಆತನಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.


ನಾನು ಕೇಳಿಕೊಂಡದ್ದನ್ನು ನೀನು ಮಾಡುವೆ ಎಂದು ನನಗೆ ಗೊತ್ತಿರುವುದರಿಂದಲೇ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ನಾನು ಕೇಳಿದ್ದಕ್ಕಿಂತಲೂ ಹೆಚ್ಚಿಗೆ ನೀನು ಮಾಡುವೆ ಎಂದು ನನಗೆ ತಿಳಿದಿದೆ.


ನೀವು ಕ್ರಿಸ್ತನಲ್ಲಿ ನಂಬಿಕೆಯಿಟ್ಟದ್ದು ದೇವರ ಅನುಗ್ರಹದಿಂದಲೇ. ಅಷ್ಟು ಮಾತ್ರವೇ ಅಲ್ಲ, ಕ್ರಿಸ್ತನಿಗೋಸ್ಕರ ಕಷ್ಟಪಡುವುದೂ ಸಹ ನಿಮಗೆ ಅನುಗ್ರಹವಾಗಿ ದೊರೆಯಿತು. ಇವೆರಡೂ ಕ್ರಿಸ್ತನಿಗೆ ಮಹಿಮೆಯನ್ನು ಉಂಟುಮಾಡುತ್ತವೆ.


ನಾವು ನಿಮಗೆ ತಿಳಿಸಿದ ಸಂಗತಿಗಳನ್ನು ನೀವು ಮಾಡುತ್ತಿದ್ದೀರೆಂಬ ಭರವಸೆಯನ್ನು ಪ್ರಭುವೇ ನಮಗೆ ಕೊಟ್ಟಿದ್ದಾನೆ. ನೀವು ಇನ್ನು ಮುಂದೆಯೂ ಇವುಗಳನ್ನು ಮಾಡುವಿರೆಂದು ನಮಗೆ ತಿಳಿದದೆ.


ನೀವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಕ್ರಿಸ್ತನೊಂದಿಗೆ ಹೂಳಲ್ಪಟ್ಟಿರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸುವುದರ ಮೂಲಕ ತೋರಿದ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ನೀವು ಆ ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಮೇಲಕ್ಕೆ ಎದ್ದುಬಂದಿರಿ.


ನನಗೆ ನಿಮ್ಮ ವಿಷಯದಲ್ಲಿ ಪೂರ್ಣ ಭರವಸೆ ಇರುವುದರಿಂದ ಬಹು ಸಂತೋಷಪಡುತ್ತೇನೆ.


ಯೆಹೂದ್ಯವಿಶ್ವಾಸಿಗಳು ಈ ಸಂಗತಿಗಳನ್ನು ಕೇಳಿದಾಗ ವಾದವನ್ನು ನಿಲ್ಲಿಸಿ, ದೇವರನ್ನು ಸ್ತುತಿಸುತ್ತಾ, “ಹಾಗಾದರೆ ನಮ್ಮಂತೆಯೇ ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ಜೀವವನ್ನು ಹೊಂದಿಕೊಳ್ಳಲು ದೇವರು ಯೆಹೂದ್ಯರಲ್ಲದವರಿಗೂ ಅವಕಾಶ ಕೊಟ್ಟಿದ್ದಾನೆ!” ಎಂದು ಹೇಳಿದರು.


ಅಲ್ಲಿ ಲಿಡಿಯಾ ಎಂಬ ಒಬ್ಬ ಹೆಂಗಸಿದ್ದಳು. ಆಕೆಯು ಥುವತೈರ ಪಟ್ಟಣದವಳು. ಕೆನ್ನೇರಳೆ ಬಣ್ಣದ ಬಟ್ಟೆಗಳನ್ನು ಮಾರುವುದು ಆಕೆಯ ಕಸುಬಾಗಿತ್ತು. ಆಕೆಯು ನಿಜ ದೇವರನ್ನು ಆರಾಧಿಸುತ್ತಿದ್ದಳು. ಪೌಲನ ಮಾತನ್ನು ಲಿಡಿಯಾ ಆಲಿಸುತ್ತಿದ್ದಳು. ಪ್ರಭುವು ಆಕೆಯ ಹೃದಯವನ್ನು ತೆರೆದನು. ಪೌಲನು ಹೇಳಿದ ಸಂಗತಿಗಳನ್ನು ಆಕೆ ನಂಬಿಕೊಂಡಳು.


ಆ ಬೇರೆ ಅಭಿಪ್ರಾಯಗಳನ್ನು ನೀವು ನಂಬುವುದಿಲ್ಲವೆಂದು ಪ್ರಭುವಿನಲ್ಲಿ ನಿಮ್ಮನ್ನು ಕುರಿತು ಭರವಸೆಯಿಂದಿದ್ದೇನೆ. ಯಾರೊ ಒಬ್ಬನು ಆ ಅಭಿಪ್ರಾಯಗಳಿಂದ ನಿಮ್ಮನ್ನು ಗಲಿಬಿಲಿಗೊಳಿಸುತ್ತಿದ್ದಾನೆ. ಅವನು ಯಾರೇ ಆಗಿದ್ದರೂ ದಂಡನೆ ಹೊಂದುವನು.


ಆದರೆ ಪ್ರಭುವು ಮತ್ತೆ ಪ್ರತ್ಯಕ್ಷನಾಗುವ ದಿನವು ಕಳ್ಳನು ಬರುವಂತೆ ಅನಿರೀಕ್ಷಿತವಾಗಿ ಬರುತ್ತದೆ. ಆಕಾಶವು ಮಹಾ ಘೋಷದೊಂದಿಗೆ ಅದೃಶ್ಯವಾಗುತ್ತದೆ. ಆಕಾಶಮಂಡಲದಲ್ಲಿರುವ ಎಲ್ಲಾ ಸೃಷ್ಟಿಗಳು ಬೆಂಕಿಯಿಂದ ನಾಶವಾಗುತ್ತವೆ. ಈ ಲೋಕವೂ ಅದರಲ್ಲಿರುವ ಸಮಸ್ತವೂ ಸುಟ್ಟುಹೋಗುತ್ತದೆ.


ಒಂದುವೇಳೆ ಮಕೆದೋನಿಯದ ಜನರಲ್ಲಿ ಯಾರಾದರೂ ನನ್ನೊಂದಿಗೆ ಬಂದಾಗ ನೀವು ಸಿದ್ಧರಾಗಿಲ್ಲದಿದ್ದರೆ ನಾವು ನಾಚಿಕೆಗೆ ಗುರಿಯಾಗುತ್ತೇವೆ. ನಿಮ್ಮ ವಿಷಯದಲ್ಲಿ ನಾವು ಬಹಳ ಭರವಸೆ ಇಟ್ಟಿದ್ದರಿಂದ ನಾವು ನಾಚಿಕೆಗೆ ಗುರಿಯಾಗುವೆವು (ಮತ್ತು ನೀವೂ ಸಹ ನಾಚಿಕೆಗೆ ಗುರಿಯಾಗುವಿರಿ.)


ನಾನು ನಿಮ್ಮ ಬಳಿಗೆ ಬಂದಾಗ, ನನ್ನನ್ನು ಸಂತೋಷಗೊಳಿಸಬೇಕಾದ ಜನರಿಂದಲೇ ನನಗೆ ದುಃಖವಾಗಬಾರದೆಂಬ ಉದ್ದೇಶದಿಂದ ನಾನು ನಿಮಗೆ ಈ ಪತ್ರವನ್ನು ಬರೆದೆನು. ನೀವೆಲ್ಲರೂ ನನ್ನ ಆನಂದದಲ್ಲಿ ಪಾಲುಗಾರರಾಗುತ್ತೀರಿ ಎಂಬ ಭರವಸೆ ನನಗಿತ್ತು.


ನಾನು ಈ ಎಲ್ಲಾ ವಿಷಯಗಳಲ್ಲಿ ಬಹು ಭರವಸೆ ಉಳ್ಳವನಾಗಿದ್ದೆನು. ಆದ್ದರಿಂದ ನಿಮ್ಮನ್ನು ಮೊದಲು ಸಂದರ್ಶಿಸಲು ನಾನು ಯೋಜನೆಗಳನ್ನು ಮಾಡಿದೆನು. ಆಗ ನಿಮಗೆ ಎರಡು ಸಲ ಆಶೀರ್ವಾದವಾಗಬಹುದಿತ್ತು.


ನನ್ನ ಪ್ರಿಯ ಸ್ನೇಹಿತರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ ನಾನು ದೂರವಿರುವಾಗಲೂ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿರಿ. ನೀವು ದೇವರಿಗೆ ಭಯಭಕ್ತಿಯಿಂದಿದ್ದು ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.


ಜೀವದಾಯಕವಾದ ವಾಕ್ಯವನ್ನು ನೀವು ಆ ಜನರಿಗೆ ಕೊಟ್ಟರೆ, ಕ್ರಿಸ್ತನು ಬಂದಾಗ ನಾನು ಹೆಮ್ಮೆಯಿಂದಿರಲು ಸಾಧ್ಯವಾಗುತ್ತದೆ, ಏಕೆಂದರೆ ನನ್ನ ಕೆಲಸವು ವ್ಯರ್ಥವಾಗಲಿಲ್ಲ. ನಾನು ಪಂದ್ಯದಲ್ಲಿ ಓಡಿ ಗೆದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು