ಫಿಲಿಪ್ಪಿಯವರಿಗೆ 2:12 - ಪರಿಶುದ್ದ ಬೈಬಲ್12 ನನ್ನ ಪ್ರಿಯ ಸ್ನೇಹಿತರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ ನಾನು ದೂರವಿರುವಾಗಲೂ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿರಿ. ನೀವು ದೇವರಿಗೆ ಭಯಭಕ್ತಿಯಿಂದಿದ್ದು ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಪ್ರಿಯ ಸಹೋದರರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ, ನಾನು ದೂರವಿರುವಾಗ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿ. ನಿಮ್ಮ ಜೀವೋದ್ಧಾರಕ್ಕಾಗಿ ಭಯಭಕ್ತಿಯಿಂದ ಶ್ರಮಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಕೇಳಿದಂತೆ ಈಗಲೂ ಕೇಳಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ರಕ್ಷಣೆಯನ್ನು ಕಾರ್ಯರೂಪಕ್ಕೆ ತನ್ನಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಅಶೆ ರ್‍ಹಾತಾನಾ ಮಾಜ್ಯಾ ಪ್ರೆಮಾಚ್ಯಾ ವಾಂಗ್ಡಿಯಾನು, ತುಮಿ ಸಗ್ಳ್ಯಾ ಎಳಾರ್ ಖಾಲ್ತಿಹೊವ್ನ್ ಚಲ್ತಲ್ಯಾ ಸಾರ್ಕೆ ಅತ್ತಾಬಿ ಖಾಲ್ತಿ ಹೊವ್ನ್ ಚಲುನ್ಗೆತ್ ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹಾತಾನಾ ತವ್ಡೆಚ್ ನ್ಹಯ್, ಮಿಯಾ ನಸಲ್ಲ್ಯಾ ತನ್ನಾಬಿ ಲೈ ಭಿಂಯಾನ್ ಥರ್ತರುನ್ಗೆತ್ ತುಮ್ಚೆ ರಾಕ್ವನ್ ಪಾವುನ್ ಘೆವಾ. ಅಧ್ಯಾಯವನ್ನು ನೋಡಿ |
ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.
ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”