Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:13 - ಪರಿಶುದ್ದ ಬೈಬಲ್‌

13 ಹೌದು, ಆತನಿಗೆ ಮೆಚ್ಚಿಕೆಕರವಾದ ಕಾರ್ಯಗಳನ್ನು ಮಾಡಬೇಕೆಂಬ ಅಪೇಕ್ಷೆಯನ್ನು ಆತನೇ ನಿಮ್ಮಲ್ಲಿ ಹುಟ್ಟಿಸುತ್ತಾನೆ ಅಲ್ಲದೆ ಅವುಗಳನ್ನು ಮಾಡಲು ಆತನೇ ನಿಮಗೆ ಶಕ್ತಿಯನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯಾಕೆಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಮತ್ತು ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯಾಕಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಏಕೆಂದರೆ, ತಮ್ಮ ಸದುದ್ದೇಶವನ್ನು ನೆರವೇರಿಸುವಂತೆ ನಿಮ್ಮಲ್ಲಿ ಬಯಕೆಯನ್ನೂ ಕಾರ್ಯಸಾಧನೆಯನ್ನೂ ನಿರ್ಮಿಸುವವರು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಕಶ್ಯಾಕ್ ಮಟ್ಲ್ಯಾರ್, ದೆವಾನುಚ್ ಅಪ್ಲಿ ಬರಿ ಇಚ್ಛ್ಯಾ ಪುರಾ ಕರುಚೆ ಮನುನ್ ತುಮ್ಚ್ಯಾತ್ ಉದ್ದೆಶ್ ಅನಿ ಕಟ್ಪಟ್ ತಯಾರ್ ಕರ್‍ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:13
39 ತಿಳಿವುಗಳ ಹೋಲಿಕೆ  

ನಮ್ಮ ಸ್ವಂತ ಶಕ್ತಿಯಿಂದಲೇ ನಾವು ಯಾವ ಒಳ್ಳೆಯದನ್ನಾದರೂ ಮಾಡಬಲ್ಲೆವೆಂದು ನಾನು ಹೇಳುತ್ತಿಲ್ಲ. ನಾವು ಮಾಡುವ ಕಾರ್ಯಗಳನ್ನು ದೇವರು ಒದಗಿಸಿದ ಸಾಮರ್ಥ್ಯದಿಂದಲೇ ಮಾಡುತ್ತೇವೆ.


ಆತನು ನಮ್ಮನ್ನು ರಕ್ಷಿಸಿ, ತನ್ನ ಪವಿತ್ರ ಜನರಾಗಿರುವುದಕ್ಕಾಗಿ ನಮ್ಮನ್ನು ಕರೆದನು. ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದ ಹೀಗಾಯಿತು ಎಂದಲ್ಲ. ಆತನು ತನ್ನ ಸಂಕಲ್ಪಕ್ಕನುಸಾರವಾಗಿ ಮತ್ತು ಕೃಪೆಗನುಸಾರವಾಗಿ ನಮ್ಮನ್ನು ರಕ್ಷಿಸಿ ತನ್ನವರನ್ನಾಗಿ ಮಾಡಿದನು. ಅನಾದಿಕಾಲದಲ್ಲಿಯೇ ಈ ಕೃಪೆಯು ಕ್ರಿಸ್ತ ಯೇಸುವಿನ ಮೂಲಕ ನಮಗೆ ದೊರೆಯಿತು.


ಆದ್ದರಿಂದ ದೇವರು ತಾನು ಯಾರಿಗೆ ಕರುಣೆ ತೋರಬಯಸುತ್ತಾನೊ ಅವನನ್ನೇ ಆರಿಸಿಕೊಳ್ಳುತ್ತಾನೆ. ಆತನ ಆಯ್ಕೆಯು ಜನರು ಏನು ಮಾಡಬಯಸುತ್ತಾರೆ ಅಥವಾ ಏನು ಮಾಡಲು ಪ್ರಯತ್ನಿಸುತ್ತಾರೆಂಬುದರ ಮೇಲೆ ಆಧಾರಗೊಂಡಿಲ್ಲ.


ಆದರೆ, ದೇವರ ಕೃಪೆಯಿಂದ ನಾನು ಅಪೊಸ್ತಲನಾಗಿದ್ದೇನೆ. ಆತನು ನನಗೆ ತೋರಿದ ಕೃಪೆಯು ನಿಷ್ಛಲವಾಗಲಿಲ್ಲ. ಉಳಿದೆಲ್ಲ ಅಪೊಸ್ತಲರಿಗಿಂತ ನಾನು ಹೆಚ್ಚು ಕಷ್ಟಪಟ್ಟು ಸೇವೆ ಮಾಡಿದ್ದೇನೆ. (ಆದರೆ ಸೇವೆ ಮಾಡುತ್ತಿದ್ದವನು ನಿಜವಾಗಿಯೂ ನಾನಲ್ಲ ದೇವರ ಕೃಪೆಯೇ ನನ್ನೊಂದಿಗಿತ್ತು.)


ಯೋಹಾನನು, “ದೇವರು ಏನು ಕೊಡುತ್ತಾನೋ ಅದನ್ನು ಮಾತ್ರ ಒಬ್ಬನು ಪಡೆದುಕೊಳ್ಳಬಲ್ಲನು.


ನಾವು ದೇವರ ಮಕ್ಕಳಾಗಿರಬೇಕೆಂದು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಳ್ಳಲಾಯಿತು. ನಾವು ತನ್ನ ಮಕ್ಕಳಾಗಿರಬೇಕೆಂದು ದೇವರು ತನ್ನ ಚಿತ್ತಾನುಸಾರವಾಗಿ ಮೊದಲೇ ಯೋಜನೆ ಮಾಡಿದ್ದನು. ತನ್ನ ನಿರ್ಧಾರ ಮತ್ತು ಇಷ್ಟಗಳಿಗನುಸಾರವಾಗಿ ಪ್ರತಿಯೊಂದನ್ನು ನೆರವೇರಿಸುವಾತನು ದೇವರೇ.


ದೇವರು ಜನರಲ್ಲಿ ಮಾಡುವ ಕಾರ್ಯಗಳಿಗೂ ವಿವಿಧ ಮಾರ್ಗಗಳಿವೆ. ಆದರೆ ಅವುಗಳೆಲ್ಲಾ ಒಬ್ಬನೇ ದೇವರಿಂದ ಬಂದಂಥವುಗಳಾಗಿವೆ.


ಆದಕಾರಣವೇ ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತೇವೆ. ಯಾವ ಒಳ್ಳೆಯ ಮಾರ್ಗದಲ್ಲಿ ನೀವು ಜೀವಿಸಬೇಕೆಂದು ದೇವರು ನಿಮ್ಮನ್ನು ಕರೆದನೋ, ಆ ಮಾರ್ಗದಲ್ಲೇ ನೀವು ಜೀವಿಸಲಿಕ್ಕಾಗುವಂತೆ ಪ್ರಾರ್ಥಿಸುತ್ತೇವೆ. ನಿಮ್ಮಲ್ಲಿರುವ ಒಳ್ಳೆಯ ತನವು ಒಳ್ಳೆಯದನ್ನು ಮಾಡುವಂತೆ ನಿಮ್ಮನ್ನು ಪ್ರೇರೇಪಿಸುತ್ತದೆ. ನಿಮ್ಮಲ್ಲಿರುವ ನಂಬಿಕೆಯು ನಿಮ್ಮಿಂದ ಕಾರ್ಯ ಸಾಧಿಸುತ್ತದೆ. ಈ ಕಾರ್ಯಗಳನ್ನು ನೀವು ಹೆಚ್ಚುಹೆಚ್ಚಾಗಿ ಮಾಡಲು ದೇವರು ತನ್ನ ಶಕ್ತಿಯಿಂದ ನಿಮಗೆ ಸಹಾಯ ಮಾಡಲೆಂದು ಬೇಡಿಕೊಳ್ಳುತ್ತೇವೆ.


ನಮ್ಮ ಮೇಲಿನ ಪ್ರೀತಿಯಿಂದ ಕ್ರಿಸ್ತ ಯೇಸುವಿನ ಮೂಲಕ ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ಆತನು ಆಗಲೇ ನಿರ್ಧರಿಸಿದ್ದನು. ಅದು ಆತನ ಚಿತ್ತವಾಗಿತ್ತು ಮತ್ತು ಆತನಿಗೆ ಮೆಚ್ಚಿಕೆಕರವಾಗಿತ್ತು.


ಆದ್ದರಿಂದ ನೀವು ನಂಬಿಕೆಯ ಮೂಲಕ ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಅದು ದೇವರ ವರ.


ಈ ರೀತಿಯಲ್ಲಿ ನಾವು ಆತನ ಕಡೆಗೆ ತಿರುಗಿ, ಆತನನ್ನು ಅನುಸರಿಸುವಂತೆ ಆತನು ಮಾಡಲಿ. ಆತನು ನಮ್ಮ ಪೂರ್ವಿಕರಿಗೆ ನೀಡಿದ ಎಲ್ಲ ಕಟ್ಟಳೆಗಳಿಗೆ, ತೀರ್ಪುಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯರಾಗಿರಲು ಆಗ ನಮಗೆ ಸಾಧ್ಯವಾಗುತ್ತದೆ.


ಐಶ್ವರ್ಯದ ಮೇಲೆ ಮನಸ್ಸಿಡದೆ ನಿನ್ನ ಒಡಂಬಡಿಕೆಯ ಬಗ್ಗೆ ಧ್ಯಾನಿಸಲು ನನಗೆ ಸಹಾಯಮಾಡು.


“ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ.


ಇದು ದೇವರ ಚಿತ್ತವಾಗಿತ್ತು. ಕ್ರಿಸ್ತನ ಮೂಲಕ ಇದನ್ನು ನೆರವೇರಿಸಲು ಆತನು ಯೋಜನೆ ಮಾಡಿದನು.


ಇದಲ್ಲದೆ ಯೇಸು, “ತಂದೆಯ ಅನುಮತಿ ಇಲ್ಲದೆ ಯಾವನೂ ನನ್ನ ಬಳಿಗೆ ಬರಲಾರನು ಎಂದು ನಾನು ನಿಮಗೆ ಹೇಳಿದ್ದಕ್ಕೆ ಅದೇ ಕಾರಣ” ಎಂದನು.


ಇಸ್ರೇಲರು ಮತ್ತು ಯೆಹೂದ್ಯರು ನನ್ನ ಭಕ್ತರಾಗಿರುವರು, ನಾನು ಅವರ ದೇವರಾಗಿರುವೆನು.


ಆದರೆ ಆ ಇಬ್ಬರು ಗಂಡುಮಕ್ಕಳು ಹುಟ್ಟುವ ಮೊದಲೇ, ದೇವರು ರೆಬೆಕ್ಕಳಿಗೆ, “ಹಿರಿಯವನು ಕಿರಿಯವನ ಸೇವೆ ಮಾಡುವನು” ಎಂದು ಹೇಳಿದನು. ಆ ಬಾಲಕರು ಯಾವ ಒಳ್ಳೆಯದಾಗಲಿ ಕೆಟ್ಟದ್ದಾಗಲಿ ಮಾಡುವ ಮೊದಲೇ ಇದಾಯಿತು. ದೇವರು ಆ ಬಾಲಕನನ್ನು ತನ್ನ ಸ್ವಂತ ಯೋಜನೆಗನುಸಾರವಾಗಿ ಆರಿಸಿಕೊಂಡಿದ್ದರಿಂದ ಆ ಬಾಲಕರು ಹುಟ್ಟುವದಕ್ಕಿಂತ ಮೊದಲೇ ಹೀಗೆ ಹೇಳಿದನು. ದೇವರು ಅವನನ್ನು ಆರಿಸಿಕೊಂಡಿದ್ದರಿಂದ ಅವನನ್ನೇ ಕರೆಯಬೇಕೆಂದಿದ್ದನು. ಆದರೆ ಅದು ಆ ಬಾಲಕರ ಯಾವುದೇ ಕಾರ್ಯಗಳ ಮೇಲೆ ಆಧಾರಗೊಂಡಿರಲಿಲ್ಲ.


ಯೆಹೋವನು ಹೀಗೆನ್ನುತ್ತಾನೆ: “ಭವಿಷ್ಯದಲ್ಲಿ ಇಸ್ರೇಲಿನ ಜನರೊಂದಿಗೆ ನಾನು ಈ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. ನಾನು ನನ್ನ ಉಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು; ಅವುಗಳನ್ನು ಅವರ ಹೃದಯಗಳ ಮೇಲೆ ಬರೆಯುವೆನು. ನಾನು ಅವರ ದೇವರಾಗಿರುವೆನು, ಅವರು ನನ್ನ ಜನರಾಗಿರುವರು.


ಯೆಹೋವನು ರಾಜನ ಮನಸ್ಸನ್ನು ನೀರಿನ ಕಾಲುವೆಯಂತೆ ಹತೋಟಿಯಲ್ಲಿಡುವನು. ಆತನು ತನ್ನ ಇಷ್ಟಾನುಸಾರ ಅದಕ್ಕೆ ಮಾರ್ಗದರ್ಶನ ನೀಡುವನು.


ಪರ್ಶಿಯಾದ ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಒಂದು ಪ್ರಕಟನೆಯನ್ನು ಹೊರಡಿಸಲು ಯೆಹೋವನು ಅವನನ್ನು ಪ್ರೇರೇಪಿಸಿದನು. ಆ ಪ್ರಕಟನೆಯನ್ನು ಬರೆಯಿಸಿ ತನ್ನ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಅವನು ಅದನ್ನು ಓದಿಸಿದನು. ಯೆರೆಮೀಯನ ಮೂಲಕ ಯೆಹೋವನು ಹೇಳಿದ ವಿಷಯಗಳು ನೆರವೇರುವಂತೆ ಇದಾಯಿತು. ಆ ಪ್ರಕಟನೆ ಇಂತಿದೆ:


ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಗೌರವಿಸುವ ಮನಸ್ಸನ್ನು ರಾಜನ ಹೃದಯದಲ್ಲಿರಿಸಿದ್ದಕ್ಕೆ ಆತನಿಗೆ ಸ್ತೋತ್ರ!


ಆಗ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಪ್ರಧಾನರೂ ನಾಯಕರೂ ಜೆರುಸಲೇಮಿಗೆ ಹೊರಟರು. ದೇವಾಲಯವನ್ನು ಕಟ್ಟಲು ಅವರು ಹೊರಟಾಗ ದೇವರಿಂದ ಪ್ರೋತ್ಸಾಹಿಸಲ್ಪಟ್ಟ ಇತರ ಜನರೂ ಅವರೊಂದಿಗೆ ಜೆರುಸಲೇಮಿಗೆ ಹೊರಟರು.


ಇದಲ್ಲದೆ, ದೇವರ ಶಕ್ತಿಯು ಯೆಹೂದದ ಜನರನ್ನು ಒಂದಾಗಿ ಮಾಡಿತು. ಆದ್ದರಿಂದ ಅವರು ಅರಸನಿಗೆ ಮತ್ತು ಅಧಿಕಾರಿಗಳಿಗೆ ವಿಧೇಯರಾದರು. ಹೀಗೆ ಜನರು ಯೆಹೋವನ ಕಟ್ಟಳೆಗಳಿಗೆ ವಿಧೇಯರಾದರು.


‘ದೇವರು ಎಲ್ಲಾ ಜನರಿಗೆ ಉಪದೇಶಿಸುವನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಜನರು ತಂದೆಗೆ ಕಿವಿಗೊಟ್ಟು ಆತನಿಂದ ಕಲಿತುಕೊಳ್ಳುವರು. ಆ ಜನರು ನನ್ನ ಬಳಿಗೆ ಬರುವರು.


ಯೆಹೋವನೇ, ನೀನು ಮಾಡಬಯಸಿದ ಎಲ್ಲವುಗಳಲ್ಲಿ ಯಶಸ್ವಿಯಾಗಿರುವೆ. ಆದ್ದರಿಂದ ನಮಗೆ ಶಾಂತಿಯನ್ನು ಅನುಗ್ರಹಿಸು.


ಕೆಟ್ಟದ್ದನ್ನು ಮಾಡಲು ನನಗೆ ಅವಕಾಶಕೊಡಬೇಡ. ಕೆಟ್ಟವರೊಂದಿಗೆ ಸೇರಿ ಕೆಟ್ಟದ್ದನ್ನು ಮಾಡದಂತೆ ನನ್ನನ್ನು ಕಾಪಾಡು. ಅವರು ಹರ್ಷಿಸುವಂಥವುಗಳಲ್ಲಿ ನಾನು ಪಾಲುಗಾರನಾಗದಂತೆ ನೋಡಿಕೋ.


ಆಗ ಅರಸನು, “ನಾನು ನಿನಗೆ ಏನುಮಾಡಬೇಕೆಂದು ಅಪೇಕ್ಷಿಸುವೆ?” ಎಂದು ಕೇಳಿದಾಗ ಅವನಿಗೆ ಉತ್ತರಿಸುವ ಮೊದಲು ನಾನು ಪರಲೋಕದ ದೇವರಿಗೆ ಪ್ರಾರ್ಥಿಸಿದೆನು.


ನಮ್ಮ ಪ್ರಭುವಾಗಿರುವ ಯೇಸು ಕ್ರಿಸ್ತನ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ದೇವರು ಮಹಾ ಕರುಣಾಳುವಾಗಿದ್ದಾನೆ. ಆತನು ತನ್ನ ಕರುಣೆಯಿಂದಲೇ ನಮಗೆ ಹೊಸ ಜೀವವನ್ನು ನೀಡಿದನು. ಸತ್ತವರೊಳಗಿಂದ ಎದ್ದುಬಂದ ಯೇಸು ಕ್ರಿಸ್ತನ ಮೂಲಕ ಅದು ನಮಗೆ ಒಂದು ಜೀವಂತ ನಿರೀಕ್ಷೆಯನ್ನು ತರುತ್ತದೆ.


ಪ್ರಭುವು ವಿಶ್ವಾಸಿಗಳಿಗೆ ಸಹಾಯ ಮಾಡುತ್ತಿದ್ದನು. ಜನರು ಬಹು ಸಂಖ್ಯೆಯಲ್ಲಿ ಪ್ರಭುವನ್ನು ನಂಬಿಕೊಂಡು ಅನುಸರಿಸತೊಡಗಿದರು.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ಜನರು ತಾವಾಗಿಯೇ ನಿನ್ನ ಸೈನ್ಯವನ್ನು ಸೇರಿಕೊಳ್ಳುವರು. ಅವರು ಸಮವಸ್ತ್ರಗಳನ್ನು ಧರಿಸಿಕೊಂಡು ಪ್ರತಿ ಮುಂಜಾನೆ ಸೇರಿಬರುವರು. ಆ ಯುವಕರು ನಿನಗೆ ಉದಯಕಾಲದ ಇಬ್ಬನಿಯಂತಿರುವರು.


“ಅವನನ್ನು ಎಚ್ಚರಿಸಿ ಅವನ ಆತ್ಮವನ್ನು ಪಾತಾಳದಿಂದ ರಕ್ಷಿಸಬೇಕೆಂದೂ ಜೀವನದ ಸುಖವನ್ನು ಅವನು ಮತ್ತೆ ಅನುಭವಿಸಲೆಂದೂ ದೇವರು ಈ ಕಾರ್ಯಗಳನ್ನು ಪದೇಪದೇ ಮಾಡುವನು.


“ಮೇಲಿನಲೋಕಗಳಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದವರಿಗೆ ಸಮಾಧಾನ” ಎಂದು ಹೇಳುತ್ತಾ ದೇವರನ್ನು ಸ್ತುತಿಸಿದರು.


ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೋ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು