ಫಿಲಿಪ್ಪಿಯವರಿಗೆ 2:16 - ಪರಿಶುದ್ದ ಬೈಬಲ್16 ಜೀವದಾಯಕವಾದ ವಾಕ್ಯವನ್ನು ನೀವು ಆ ಜನರಿಗೆ ಕೊಟ್ಟರೆ, ಕ್ರಿಸ್ತನು ಬಂದಾಗ ನಾನು ಹೆಮ್ಮೆಯಿಂದಿರಲು ಸಾಧ್ಯವಾಗುತ್ತದೆ, ಏಕೆಂದರೆ ನನ್ನ ಕೆಲಸವು ವ್ಯರ್ಥವಾಗಲಿಲ್ಲ. ನಾನು ಪಂದ್ಯದಲ್ಲಿ ಓಡಿ ಗೆದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹೀಗೆ ನೀವು ನಡೆದುಕೊಂಡರೆ ನನ್ನ ಸೇವೆ ವ್ಯರ್ಥವಾಗದೆ, ಶ್ರಮೆ ನಿಷ್ಫಲವಾಗದೆ, ಫಲಪ್ರದವಾಯಿತೆಂದು ಕ್ರಿಸ್ತರ ದಿನದಂದು ನಾನು ಹೆಮ್ಮೆಪಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು ಲೋಕದೊಳಗೆ ಹೊಳೆಯುವ ಜೋತಿರ್ಮಂಡಲಗಳಂತೆ ಕಾಣಿಸುವವರಾಗಿದ್ದೀರಲ್ಲಾ. ನೀವು ಹೀಗೆ ನಡೆದರೆ ನಾನು ಕೆಲಸ ಸಾಧಿಸಿದ್ದೂ ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಉತ್ಸಾಹವು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನೀವು ಜೀವವಾಕ್ಯವನ್ನು ಹಿಡಿದವರಾಗಿದ್ದರೆ, ಹೀಗೆ ನಾನು ಓಡಿದ ಓಟವೂ ಪ್ರಯಾಸವೂ ವ್ಯರ್ಥವಾಗಲಿಲ್ಲವೆಂದು ತಿಳಿದು ಕ್ರಿಸ್ತನ ಪುನರಾಗಮನ ದಿನದಲ್ಲಿ ಅಭಿಮಾನ ಪಡುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಹೆಚ್ಯಾ ಮದ್ದಿ ಸಗ್ಳ್ಯಾಕ್ನಿಬಿ ಜಿವ್ ಹೊವ್ನ್ ಹೊತ್ತಿ ಬರಿ ಖಬರ್ ದಾಕ್ವುನ್ ದಿತಲೆ ಹೊವ್ನ್, ಜಗಾತ್ ಹೊಳಾವ್ತಲಿ ಚುಕ್ಕಿಯಾ ಸಾರ್ಕೆ ದಿಸ್ತ್ಯಾಶಿ. ತುಮಿ ಅಶೆ ಚಲಲ್ಲೆ ಹೊಲ್ಯಾರ್ ಮಿಯಾ ಬರ್‍ಯಾ ಖಬ್ರೆಸಾಟ್ನಿ ಪಳಲೆ ಫುಕೊಟ್ ಹೊಯ್ನಾ, ಮಿಯಾ ಕಟ್ಪಟ್ ಕರಲೆಬಿ ಫುಕೊಟ್ ಹೊಯ್ನಾ ಮನ್ತಲೆ ಹೊಗ್ಳಾಪ್ ಕ್ರಿಸ್ತಾಚ್ಯಾ ದಿಸಾತ್ ಮಾಕಾ ಗಾವ್ತಾ. ಅಧ್ಯಾಯವನ್ನು ನೋಡಿ |
ನಿಮ್ಮ ನಂಬಿಕೆಯ ಬಗ್ಗೆ ತಿಳಿದುಕೊಳ್ಳಬೇಕೆಂಬ ಕಾರಣದಿಂದಲೇ ನಾನು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆನು. ಇನ್ನೂ ಹೆಚ್ಚುಕಾಲ ಕಾಯಲು ಸಾಧ್ಯವಿಲ್ಲವೆನಿಸಿದ್ದರಿಂದಲೇ ನಾನು ಅವನನ್ನು ಕಳುಹಿಸಿದೆನು. ಜನರನ್ನು ಶೋಧನೆಗೆ ಒಳಪಡಿಸುವ ಸೈತಾನನು ನಿಮ್ಮನ್ನು ಈಗಾಗಲೇ ಶೋಧನೆಗಳಿಂದ ಸೋಲಿಸಿರಬಹುದೆಂಬ ಭಯ ನನಗಿತ್ತು. ಒಂದುವೇಳೆ, ಹಾಗೇನಾದರೂ ಆಗಿದ್ದರೆ ನಮ್ಮ ಪ್ರಯಾಸವೆಲ್ಲಾ ನಿರರ್ಥಕವಾಗುತ್ತಿತ್ತು.