Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:2 - ಪರಿಶುದ್ದ ಬೈಬಲ್‌

2 ನಿಮ್ಮಲ್ಲಿ ಇವುಗಳು ಇರುವುದಾದರೆ, ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ. ಆಗ ನನ್ನ ಸಂತೋಷವು ಪರಿಪೂರ್ಣವಾಗುವುದು. ಒಬ್ಬರಿಗೊಬ್ಬರು ಒಂದೇ ಪ್ರೀತಿ ಉಳ್ಳವರಾಗಿರಿ. ಅನ್ಯೋನ್ಯಭಾವವುಳ್ಳವರಾಗಿದ್ದು ಒಂದೇ ಗುರಿಯಿಂದ ಜೀವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀವೆಲ್ಲರು ಒಂದೇ ಮನಸ್ಸುವುಳ್ಳವರಾಗಿ, ಒಂದೇ ಪ್ರೀತಿಯುಳ್ಳವರಾಗಿ, ಅನ್ಯೋನ್ಯಭಾವವುಳ್ಳವರಾಗಿ ಹಾಗೂ ಒಂದೇ ಗುರಿಯಿಟ್ಟುಕೊಂಡವರಾಗಿ ನನ್ನ ಸಂತೋಷವನ್ನು ಪರಿಪೂರ್ಣಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿಮ್ಮೆಲ್ಲರಲ್ಲಿ ಒಂದೇ ಮನಸ್ಸು, ಒಂದೇ ಪ್ರೀತಿ ಇರಲಿ. ನಿಮ್ಮ ಗುರಿ ಧ್ಯೇಯಗಳು ಒಂದೇ ಆಗಿರಲಿ. ಆಗ ನನ್ನ ಸಂತೋಷವು ಸಂಪೂರ್ಣಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಐಕಮತ್ಯವುಳ್ಳವರಾಗಿದ್ದು ನನ್ನ ಸಂತೋಷವನ್ನು ಪರಿಪೂರ್ಣಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋನ್ಯಭಾವವುಳ್ಳವರೂ ಒಂದೇ ಗುರಿಯಿಟ್ಟುಕೊಂಡವರೂ ಆಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀವು ಒಂದೇ ಮನಸ್ಸು, ಒಂದೇ ಪ್ರೀತಿ, ಆತ್ಮ, ಹಾಗೂ ಒಂದೇ ಗುರಿಯುಳ್ಳವರಾಗಿ, ನನ್ನ ಸಂತೋಷವನ್ನು ಪರಿಪೂರ್ಣಗೊಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತಸೆ ಹೊಲ್ಯಾರ್, ತುಮಿ ಎಕುಚ್ ಪ್ರೆಮಾನ್ ಎಕುಚ್ ಆತ್ಮ್ಯಾನ್ ಅನಿ ಎಕುಚ್ ಮನಾನ್ ಎಕ್ ಎಕ್ವಟ್ಟಾನ್ ರಾವ್ನ್ ಮಾಜಿ ಕುಶಿ ಫುರಾ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:2
28 ತಿಳಿವುಗಳ ಹೋಲಿಕೆ  

ನೀವು ಒಬ್ಬರಿಗೊಬ್ಬರು ಸಮಾಧಾನದಿಂದ ಒಟ್ಟಾಗಿ ಜೀವಿಸಿರಿ. ಗರ್ವಪಡಬೇಡಿರಿ. ಸಮಾಜದಲ್ಲಿ ಗಣನೆಗೆ ಬಾರದ ಜನರೊಂದಿಗೆ ಸ್ನೇಹದಿಂದಿರಲು ಅಪೇಕ್ಷಿಸಿರಿ. ನಿಮ್ಮನ್ನು ನೀವೆ, ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.


ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ವಾದವಿವಾದವಿಲ್ಲದೆ ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕ್ಯಮತ್ಯದಿಂದ ಬಾಳಿರಿ.


ಸಹೋದರ ಸಹೋದರಿಯರೇ, ನಿಮಗೆ ವಂದನೆಗಳು. ಪರಿಪೂರ್ಣರಾಗಿರಲು ಪ್ರಯತ್ನಿಸಿ. ನಾನು ಕೇಳಿಕೊಂಡ ಕಾರ್ಯಗಳನ್ನು ಮಾಡಿರಿ. ಒಂದೇ ಮನಸ್ಸು ಉಳ್ಳವರಾಗಿದ್ದು ಸಮಾಧಾನದಿಂದ ಜೀವಿಸಿರಿ. ಆಗ ಪ್ರೀತಿಸ್ವರೂಪನೂ ಶಾಂತಿದಾಯಕನೂ ಆದ ದೇವರು ನಿಮ್ಮೊಂದಿಗೆ ಇರುವನು.


ನನ್ನ ಮಕ್ಕಳು ಸತ್ಯಮಾರ್ಗದಲ್ಲಿ ನಡೆಯುತ್ತಿದ್ದಾರೆ ಎಂಬುದನ್ನು ಕೇಳುವಾಗಲೆಲ್ಲಾ ನನಗೆ ಬಹಳ ಸಂತೋಷವಾಗುತ್ತದೆ.


ಜೀವದಾಯಕವಾದ ವಾಕ್ಯವನ್ನು ನೀವು ಆ ಜನರಿಗೆ ಕೊಟ್ಟರೆ, ಕ್ರಿಸ್ತನು ಬಂದಾಗ ನಾನು ಹೆಮ್ಮೆಯಿಂದಿರಲು ಸಾಧ್ಯವಾಗುತ್ತದೆ, ಏಕೆಂದರೆ ನನ್ನ ಕೆಲಸವು ವ್ಯರ್ಥವಾಗಲಿಲ್ಲ. ನಾನು ಪಂದ್ಯದಲ್ಲಿ ಓಡಿ ಗೆದ್ದೆನು.


ಪ್ರತಿದಿನ ದೇವಾಲಯದಲ್ಲಿ ಸೇರಿಬರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅವರು ತಮ್ಮ ಮನೆಗಳಲ್ಲಿ ರೊಟ್ಟಿ ಮುರಿದು ಒಟ್ಟಾಗಿ ಊಟ ಮಾಡುತ್ತಿದ್ದರು. ಅವರ ಹೃದಯಗಳು ಆನಂದದಿಂದ ತುಂಬಿದ್ದವು.


ನಿಮ್ಮ ಮಕ್ಕಳಲ್ಲಿ ಕೆಲವರ ಬಗ್ಗೆ ನಾನು ಕೇಳಿದಾಗ ತುಂಬಾ ಸಂತೋಷವಾಯಿತು. ತಂದೆಯಾದ ದೇವರು ನಮಗೆ ಆಜ್ಞಾಪಿಸಿದ ಸತ್ಯಮಾರ್ಗವನ್ನು ಅವರು ಅನುಸರಿಸುತ್ತಿರುವುದರಿಂದ ನನಗೆ ಸಂತೋಷವಾಯಿತು.


ಸಹೋದರ ಸಹೋದರಿಯರೇ, ಪ್ರಭುವು ನಿಮ್ಮನ್ನು ಪ್ರೀತಿಸುತ್ತಾನೆ. ನಿಮ್ಮನ್ನು ರಕ್ಷಿಸಬೇಕೆಂದು ದೇವರು ನಿಮ್ಮನ್ನು ಆದಿಯಲ್ಲಿಯೇ ಆರಿಸಿಕೊಂಡನು. ಆದ್ದರಿಂದ ನಿಮ್ಮ ವಿಷಯದಲ್ಲಿ ದೇವರಿಗೆ ಯಾವಾಗಲೂ ಕೃತಜ್ಞತೆ ಸಲ್ಲಿಸಬೇಕು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವ ಪವಿತ್ರಾತ್ಮನಿಂದ ಮತ್ತು ಸತ್ಯದ ಮೇಲೆ ನಿಮಗಿರುವ ನಂಬಿಕೆಯಿಂದ ನೀವು ರಕ್ಷಣೆ ಹೊಂದಿದ್ದೀರಿ.


ಅಲ್ಲಿ ನಾನು ನಿಮ್ಮೊಡನೆ ಇರದಿದ್ದರೂ ನನ್ನ ಮನಸ್ಸು ನಿಮ್ಮೊಡನಿರುತ್ತದೆ. ನಿಮ್ಮ ಕ್ರಮಬದ್ಧವಾದ ನಡತೆಯನ್ನು ನೋಡಲು ಮತ್ತು ಕ್ರಿಸ್ತನಲ್ಲಿ ಇಟ್ಟಿರುವ ದೃಢನಂಬಿಕೆಯನ್ನು ಅರಿಯಲು ಬಹಳ ಸಂತೋಷಪಡುತ್ತೇನೆ.


ಪ್ರಭುವಿನಲ್ಲಿ ಒಂದೇ ಮನಸ್ಸನ್ನು ಹೊಂದಿರಬೇಕೆಂದು ನಾನು ಯವೋದ್ಯಳನ್ನೂ ಸಂತುಕೆಯನ್ನೂ ಕೇಳಿಕೊಳ್ಳುತ್ತೇನೆ.


ಅವನಂತೆ ನಿಮ್ಮ ವಿಷಯದಲ್ಲಿ ನಿಜವಾಗಿಯೂ ಚಿಂತಿಸುವವರು ನನ್ನ ಬಳಿ ಯಾರೂ ಇಲ್ಲ.


ಅವನ ಆಗಮನದಿಂದಲೂ ನೀವು ಅವನಿಗೆ ಕೊಟ್ಟ ಆದರಣೆಯಿಂದಲೂ ನಮಗೆ ಸಮಾಧಾನವಾಯಿತು. ನನ್ನನ್ನು ನೋಡಲು ನಿಮಗಿರುವ ಹಂಬಲದ ಕುರಿತಾಗಿಯೂ ನಿಮ್ಮ ಕಾರ್ಯಗಳಿಂದ ನಿಮಗಾಗಿರುವ ದುಃಖದ ಕುರಿತಾಗಿಯೂ ನನ್ನ ವಿಷಯವಾಗಿ ನಿಮಗಿರುವ ಮಹಾಹಿತಚಿಂತನೆಯ ಕುರಿತಾಗಿಯೂ ಅವನು ನನಗೆ ಹೇಳಿದಾಗ ನನಗೆ ಬಹಳ ಸಂತೋಷವಾಯಿತು.


ನಾನು ನಿಮ್ಮ ಬಳಿಗೆ ಬಂದಾಗ, ನನ್ನನ್ನು ಸಂತೋಷಗೊಳಿಸಬೇಕಾದ ಜನರಿಂದಲೇ ನನಗೆ ದುಃಖವಾಗಬಾರದೆಂಬ ಉದ್ದೇಶದಿಂದ ನಾನು ನಿಮಗೆ ಈ ಪತ್ರವನ್ನು ಬರೆದೆನು. ನೀವೆಲ್ಲರೂ ನನ್ನ ಆನಂದದಲ್ಲಿ ಪಾಲುಗಾರರಾಗುತ್ತೀರಿ ಎಂಬ ಭರವಸೆ ನನಗಿತ್ತು.


ಅಪೊಸ್ತಲರು ಅನೇಕ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿದರು. ಜನರೆಲ್ಲರೂ ಆ ಕಾರ್ಯಗಳನ್ನು ನೋಡಿದರು. ಅಪೊಸ್ತಲರು ಒಟ್ಟಾಗಿ ಸೊಲೊಮೋನನ ಮಂಟಪದಲ್ಲಿರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು.


ಅಪೊಸ್ತಲರೆಲ್ಲರೂ ಒಟ್ಟಾಗಿ ಸೇರಿದ್ದರು. ಅವರು ಒಂದೇ ಉದ್ದೇಶದಿಂದ ಎಡಬಿಡದೆ ಪ್ರಾರ್ಥಿಸುತ್ತಿದ್ದರು. ಕೆಲವು ಸ್ತ್ರೀಯರೂ ಯೇಸುವಿನ ತಾಯಿ ಮರಿಯಳೂ ಆತನ ಸಹೋದರರೂ ಅಪೊಸ್ತಲರ ಸಂಗಡವಿದ್ದರು.


ನಾನು ನಿಮ್ಮೆಲ್ಲರಿಗಾಗಿ ಯಾವಾಗಲೂ ಆನಂದದಿಂದ ಪ್ರಾರ್ಥಿಸುತ್ತೇನೆ.


ಮದುಮಗಳು ಮದುಮಗನಿಗೆ ಮಾತ್ರ ಸೇರಿದವಳಾಗಿದ್ದಾಳೆ. ಮದುಮಗನಿಗೆ ಸಹಾಯಮಾಡುವ ಸ್ನೇಹಿತನು ಮದುಮಗನ ಬರುವಿಕೆಗಾಗಿ ಕಾಯುತ್ತಿರುತ್ತಾನೆ ಮತ್ತು ಆತನ ಕರೆಗಾಗಿ ಆಲಿಸುತ್ತಿರುತ್ತಾನೆ. ಮದುಮಗನ ಸ್ವರವನ್ನು ಕೇಳುವಾಗ ಈ ಸ್ನೇಹಿತನು ಬಹು ಸಂತೋಷಪಡುವನು. ಅದೇ ಸಂತೋಷ ನನಗಿದೆ. ನನ್ನ ಪೂರ್ಣಾನಂದದ ಸಮಯವು ಇದೇ ಆಗಿದೆ.


ನೀನು ನನಗಾಗಿ ಕಣ್ಣೀರು ಸುರಿಸಿದ್ದು ನನ್ನ ನೆನಪಿನಲ್ಲಿದೆ. ನಿನ್ನನ್ನು ನೋಡಬೇಕೆಂದು ಬಹಳ ಆಸೆಯಾಗಿದೆ. ನಿನ್ನನ್ನು ನೋಡಿದಾಗ ನನ್ನಲ್ಲಿ ಆನಂದವು ತುಂಬಿಹೋಗುವುದು.


ಪಂಚಾಶತ್ತಮ ಹಬ್ಬದ ದಿನ ಬಂದಾಗ ಅವರೆಲ್ಲರು ಒಂದು ಸ್ಥಳದಲ್ಲಿ ಒಟ್ಟಾಗಿ ಸೇರಿದ್ದರು.


ನನ್ನ ಸಹೋದರನೇ, ಪ್ರಭುವಿನಲ್ಲಿ ನಾನು ನಿನ್ನಿಂದ ಒಂದು ಸಹಾಯವನ್ನು ಹೊಂದಿಕೊಳ್ಳಬಹುದೇ? ಅದೇನೆಂದರೆ ನೀನು ನನ್ನ ಹೃದಯವನ್ನು ಕ್ರಿಸ್ತನಲ್ಲಿ ಸಂತೈಸು.


ನನ್ನ ಸಹೋದರರ ಮತ್ತು ನೆರೆಯವರ ಒಳ್ಳೆಯದಕ್ಕಾಗಿ ಅಲ್ಲಿ ಶಾಂತಿ ನೆಲೆಸಿರಲೆಂದು ಪ್ರಾರ್ಥಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು