ಫಿಲಿಪ್ಪಿಯವರಿಗೆ 2:29 - ಪರಿಶುದ್ದ ಬೈಬಲ್29 ಮಹಾ ಆನಂದದಿಂದ ಪ್ರಭುವಿನಲ್ಲಿ ಅವನನ್ನು ಸ್ವಾಗತಿಸಿರಿ. ಎಪಫ್ರೊದೀತನಂಥ ಜನರನ್ನು ಗೌರವಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929-30 ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕೊರತೆಯಾದದ್ದನ್ನು ತುಂಬುವುದಕ್ಕಾಗಿ ಅವನು ಜೀವದ ಆಸೆಯನ್ನು ತೊರೆದು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಸ್ಥಿತಿಯಲ್ಲಿದುದ್ದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನ ಹೆಸರಿನಲ್ಲಿ ಸೇರಿಸಿಕೊಳ್ಳಿರಿ. ಅಂಥವರನ್ನು ಮಾನ್ಯರೆಂದೆಣಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಪ್ರಭುವಿನ ಹೆಸರಿನಲ್ಲಿ ನೀವು ಅವನನ್ನು ತುಂಬು ಹೃದಯದಿಂದ ಸ್ವಾಗತಿಸಿರಿ. ಅವನಂಥವರಿಗೆ ಸೂಕ್ತ ಗೌರವ ಸಲ್ಲಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29-30 ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯಮಾಡದೆ ಕ್ರಿಸ್ತನ ಕೆಲಸದ ನಿವಿುತ್ತ ಸಾಯುವ ಹಾಗಿದ್ದನೆಂದು ನೀವು ತಿಳಿದು ಅವನನ್ನು ಪೂರ್ಣ ಸಂತೋಷದಿಂದ ಕರ್ತನ ಹೆಸರಿನಲ್ಲಿ ಸೇರಿಸಿಕೊಳ್ಳಿರಿ. ಅಂಥವರನ್ನು ಮಾನ್ಯರೆಂದೆಣಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ನೀವು ಅವನನ್ನು ಪೂರ್ಣ ಆನಂದದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ತಸೆ ಹೊವ್ನ್, ತುಮಿ ತೆಕಾ ಎಕ್ ಭಾವಾ ಸಾರ್ಕೆ ಫುರಾ ಕುಶಿನ್ ಧನಿಯಾಕ್ ಮಿಳ್ವುನ್ ಘೆವಾ, ಅನಿ ತಸ್ಲ್ಯಾಕ್ನಿ ಸನ್ಮಾನ್ ಕರಾ. ಅಧ್ಯಾಯವನ್ನು ನೋಡಿ |
ನಾನು ಬಂದಾಗ, ದಿಯೊತ್ರೇಫನು ಮಾಡುತ್ತಿರುವುದರ ಬಗ್ಗೆ ತಿಳಿಸುತ್ತೇನೆ. ಅವನು ನಮ್ಮನ್ನು ಕುರಿತು ಸುಳ್ಳನ್ನೂ ಕೆಟ್ಟ ಸಂಗತಿಗಳನ್ನೂ ಹೇಳುತ್ತಾನೆ. ಆದರೆ ಅಷ್ಟೇ ಅಲ್ಲ! ಕ್ರಿಸ್ತನ ಸೇವೆಮಾಡುತ್ತಿರುವ ಆ ಸಹೋದರರಿಗೆ ಸಹಾಯಮಾಡಲು ಅವನು ಒಪ್ಪುವುದಿಲ್ಲ. ಅಲ್ಲದೆ ಆ ಸಹೋದರರಿಗೆ ಸಹಾಯ ಮಾಡಲಿಚ್ಛಿಸುವ ಜನರನ್ನೂ ಅವನು ತಡೆಯುತ್ತಾನೆ. ಆ ಜನರು ಸಭೆಯನ್ನು ಬಿಟ್ಟುಹೋಗುವಂತೆ ಅವನು ಮಾಡುತ್ತಾನೆ.
ಆ ದ್ವೀಪ ನಿವಾಸಿಗಳು ನಮ್ಮನ್ನು ಬಹಳವಾಗಿ ಸನ್ಮಾನಿಸಿದರು. ನಾವು ಅಲ್ಲಿ ಮೂರು ತಿಂಗಳಿದ್ದೆವು. ನಾವು ಅಲ್ಲಿಂದ ಹೊರಡಲು ಸಿದ್ಧರಾದಾಗ ಅವರು ನಮಗೆ ಬೇಕಾದ ವಸ್ತುಗಳನ್ನು ಕೊಟ್ಟರು. ಅಲೆಕ್ಸಾಂಡ್ರಿಯ ಪಟ್ಟಣದಿಂದ ಬಂದ ಹಡಗೊಂದನ್ನು ನಾವು ಹತ್ತಿದೆವು. ಆ ಹಡಗು ಚಳಿಗಾಲದ ನಿಮಿತ್ತ ಮಾಲ್ಟ ದ್ವೀಪದಲ್ಲೇ ತಂಗಿತ್ತು. ಆ ಹಡಗಿನ ಮುಂಭಾಗದಲ್ಲಿ ಎರಡು ಗ್ರೀಕ್ ದೇವತೆಗಳ ಚಿಹ್ನೆಯಿತ್ತು.