Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:3 - ಪರಿಶುದ್ದ ಬೈಬಲ್‌

3 ನೀವು ಯಾವುದನ್ನೇ ಮಾಡುವಾಗ, ಸ್ವಾರ್ಥವಾಗಲಿ ಅಹಂಕಾರವಾಗಲಿ ನಿಮಗೆ ಮಾರ್ಗದರ್ಶಕವಾಗದಂತೆ ನೋಡಿಕೊಳ್ಳಿರಿ. ದೀನಭಾವವುಳ್ಳವರಾಗಿದ್ದು ನಿಮಗಿಂತಲೂ ಹೆಚ್ಚಾಗಿ ಬೇರೆಯವರಿಗೆ ಗೌರವವನ್ನು ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸ್ವಾರ್ಥಸಾಧನೆಗಾಗಲಿ, ಡಂಭಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಪಕ್ಷಪಾತದಿಂದಾಗಲಿ ಒಣಹೆಮ್ಮೆಯಿಂದಾಗಲಿ ಯಾವದನ್ನೂ ಮಾಡದೆ ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸ್ವಾರ್ಥ ಉದ್ದೇಶದಿಂದಾಗಲಿ, ವ್ಯರ್ಥ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ ಪ್ರತಿಯೊಬ್ಬನೂ ದೀನತ್ವದಿಂದ ಮತ್ತೊಬ್ಬನನ್ನು ತನಗಿಂತಲೂ ಶ್ರೇಷ್ಠನೆಂದು ಎಣಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅಪ್ಲ್ಯಾ ಸ್ವತಾಚ್ಯಾ ಸಾಟ್ನಿ ಹೊಂವ್ದಿ ನಾ ತರ್ ಬಡಾಯಿನ್ ಹೊಂವ್ದಿ ಖಚ್ಚೆ ಕರಿಸ್ತಾನಾ ಹರ್ ಎಕ್ಲೊಬಿ ಎಕಾಮೆಕಾಕ್ ಖಾಲ್ತಿಹೊವ್ನ್ ಚಲ್ತಲ್ಯಾ ಮನಾನ್ ದುಸ್ರ್ಯಾಕ್ನಿ ಅಪ್ನಾಕಿಂತಾಬಿ ಮೊಟೆ ಮನುನ್ ಚಿಂತುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:3
24 ತಿಳಿವುಗಳ ಹೋಲಿಕೆ  

ಸಹೋದರ ಸಹೋದರಿಯರೆಂಬ ಅನ್ಯೋನ್ಯಭಾವದಿಂದ ಒಬ್ಬರನ್ನೊಬ್ಬರು ಪ್ರೀತಿಸಿರಿ. ನೀವು ನಿಮಗೋಸ್ಕರ ಬಯಸುವ ಮರ್ಯಾದೆಗಿಂತಲೂ ಹೆಚ್ಚು ಮರ್ಯಾದೆಯನ್ನು ನಿಮ್ಮ ಸಹೋದರ ಸಹೋದರಿಯರಿಗೆ ಕೊಡಿರಿ.


ನಾವು ಅಹಂಕಾರಿಗಳಾಗಬಾರದು, ಒಬ್ಬರನ್ನೊಬ್ಬರು ಕೆಣಕುವವರಾಗಬಾರದು, ಒಬ್ಬರಮೇಲೊಬ್ಬರು ಮತ್ಸರ ಉಳ್ಳವರಾಗಬಾರದು.


ನೀವು ಒಬ್ಬರಿಗೊಬ್ಬರು ವಿಧೇಯರಾಗಿರಬೇಕು. ಏಕೆಂದರೆ ನೀವು ಕ್ರಿಸ್ತನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು.


ಯಾವಾಗಲೂ ದೀನತೆಯಿಂದ, ಸಾತ್ವಿಕತೆಯಿಂದ ಮತ್ತು ತಾಳ್ಮೆಯಿಂದ ಕೂಡಿದವರಾಗಿದ್ದು ಒಬ್ಬರನ್ನೊಬ್ಬರು ಪ್ರೀತಿಯಿಂದ ಸಹಿಸಿಕೊಳ್ಳಿರಿ.


ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”


ನೀವು ಮಾಡುವ ಪ್ರತಿಯೊಂದನ್ನು ಗುಣಗುಟ್ಟದೆಯೂ ವಿವಾದವಿಲ್ಲದೆಯೂ ಮಾಡಿರಿ.


ನೀವು ಒಬ್ಬರನ್ನೊಬ್ಬರು ಕಚ್ಚಿ ಹರಿದುಹಾಕಿ ನುಂಗುವುದಾದರೆ ಒಬ್ಬರಿಂದೊಬ್ಬರು ನಾಶವಾಗುತ್ತೀರಿ. ಆದ್ದರಿಂದ ಎಚ್ಚರಿಕೆಯಿಂದಿರಿ!


ದುರ್ಬೋಧಕನು ಗರ್ವದಿಂದ ತುಂಬಿದವನಾಗಿರುತ್ತಾನೆ ಮತ್ತು ಅವನಿಗೆ ಏನೂ ಅರ್ಥವಾಗುವುದಿಲ್ಲ. ಅವನು ಕುತರ್ಕ ವಾಗ್ವಾದ ಮಾಡುವುದರಲ್ಲಿ ಆಸಕ್ತನಾಗಿದ್ದಾನೆ. ಇದರಿಂದ ಹೊಟ್ಟೆಕಿಚ್ಚು, ಜಗಳ, ನಿಂದನೆ ಮತ್ತು ದುಸ್ಸಂಶಯಗಳು ಉಂಟಾಗುತ್ತವೆ.


ಅವನು ಪ್ರಾರ್ಥಿಸಿದ ಬಳಿಕ ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ಮನೆಗೆ ಹೋದನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಆ ಫರಿಸಾಯನು ನೀತಿವಂತನೆಂದು ನಿರ್ಣಯಿಸಲ್ಪಡಲಿಲ್ಲ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”


ದುರಾಭಿಮಾನವು ಕೇವಲ ಜಗಳಕ್ಕೆ ಕಾರಣ. ಬುದ್ಧಿವಾದವನ್ನು ಕೇಳುವವರು ವಿವೇಕಿಗಳಾಗಿದ್ದಾರೆ.


ಈಗಲಾದರೋ ಕೋಪ, ಕ್ರೋಧ, ಮತ್ಸರ, ಚುಚ್ಚು ಮಾತು ಮತ್ತು ದುರ್ಭಾಷೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ.


ಕಾರಣವೇನೆಂದರೆ, ನಾನು ಬಂದಾಗ ನನ್ನ ಅಪೇಕ್ಷೆಗೆ ತಕ್ಕಂತೆ ನೀವು ಇರುವುದಿಲ್ಲವೆಂಬ ಭಯ ನನಗಿದೆ. ನಿಮ್ಮ ಸಭೆಯಲ್ಲಿ ವಾದ, ಹೊಟ್ಟೆಕಿಚ್ಚು, ಕೋಪ, ಸ್ವಾರ್ಥಪರವಾದ ಹೋರಾಟ, ಕೆಟ್ಟಮಾತು, ಸುಳ್ಳುಸುದ್ದಿ, ಗರ್ವ ಮತ್ತು ಗಲಿಬಿಲಿ ಇರಬಹುದೆಂಬ ಭಯ ನನಗಿದೆ.


ನೀವಿನ್ನೂ ಆತ್ಮಿಕರಾಗಿಲ್ಲ. ನಿಮ್ಮ ನಡುವೆ ಹೊಟ್ಟೆಕಿಚ್ಚಿದೆ; ವಾಗ್ವಾದಗಳಿವೆ; ಜಗಳಗಳಿವೆ. ನೀವು ಆತ್ಮಿಕರಲ್ಲವೆಂಬುದನ್ನು ಇವು ಸೂಚಿಸುತ್ತವೆ. ನೀವು ಲೋಕದ ಜನರಂತೆಯೇ ವರ್ತಿಸುತ್ತಿದ್ದೀರಿ.


ಉಳಿದೆಲ್ಲಾ ಅಪೊಸ್ತಲರು ನನಗಿಂತಲೂ ಶ್ರೇಷ್ಠರಾಗಿದ್ದಾರೆ. ಇದಕ್ಕೆ ಕಾರಣವೇನೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು. ಆದ್ದರಿಂದ ಅಪೊಸ್ತಲನೆಂದು ಕರೆಸಿಕೊಳ್ಳುವುದಕ್ಕೂ ನಾನು ಯೋಗ್ಯನಲ್ಲ.


ಹಗಲಿಗೆ ಸೇರಿದ ಜನರಂತೆ ಸರಿಯಾದ ರೀತಿಯಲ್ಲಿ ಜೀವಿಸೋಣ. ಕೆಟ್ಟದಾದ ಮತ್ತು ವ್ಯರ್ಥವಾದ ಔತಣಕೂಟಗಳನ್ನು ನಾವು ಏರ್ಪಡಿಸಕೂಡದು; ಕುಡಿದು ಮತ್ತರಾಗಕೂಡದು; ನಾವು ಲೈಂಗಿಕ ಪಾಪವನ್ನಾಗಲಿ ನಮ್ಮ ದೇಹದಿಂದ ಯಾವುದೇ ಬಗೆಯ ಪಾಪವನ್ನಾಗಲಿ ಮಾಡಕೂಡದು; ವಾಗ್ವಾದಗಳನ್ನಾಗಲಿ ಜಗಳಗಳನ್ನಾಗಲಿ ಎಬ್ಬಿಸಬಾರದು; ಅಲ್ಲದೆ ಹೊಟ್ಟೆಕಿಚ್ಚುಪಡಬಾರದು.


ಆದರೆ ಉಳಿದ ಜನರು ಸ್ವಾರ್ಥಿಗಳಾಗಿದ್ದು, ಸತ್ಯವನ್ನು ಅನುಸರಿಸದೆ ದುಷ್ಟತ್ವವನ್ನು ಅನುಸರಿಸುವವರಾಗಿದ್ದಾರೆ. ಅವರ ಮೇಲೆ ದೇವರ ದಂಡನೆಯೂ ಕೋಪವೂ ಬರುತ್ತದೆ.


ದೇವರು ನಿಮ್ಮನ್ನು ಆರಿಸಿಕೊಂಡಿದ್ದಾನೆ ಮತ್ತು ನಿಮ್ಮನ್ನು ತನ್ನ ಪವಿತ್ರ ಜನರನ್ನಾಗಿಸಿದ್ದಾನೆ. ಆತನು ನಿಮ್ಮನ್ನು ಪ್ರೀತಿಸುತ್ತಾನೆ. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


ಆದ್ದರಿಂದ ನೀವೆಲ್ಲರೂ ಒಟ್ಟಾಗಿ ಶಾಂತಿಯಿಂದ ಬಾಳಿರಿ; ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿರಿ. ಒಬ್ಬರನ್ನೊಬ್ಬರು ಸಹೋದರರಂತೆ ಪ್ರೀತಿಸಿರಿ. ದಯೆ ತೋರುವವರೂ ಮತ್ತು ದೀನತೆ ಉಳ್ಳವರೂ ಆಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು