Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:6 - ಪರಿಶುದ್ದ ಬೈಬಲ್‌

6 ಆತನು ದೇವಸ್ವರೂಪನಾಗಿದ್ದರೂ ದೇವರಿಗೆ ಸರಿಸಮನಾಗಿದ್ದರೂ ಆ ಪದವಿಯನ್ನು ಬಿಡಲಾರೆ ಎನ್ನಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೇವಸ್ವರೂಪಿ ತಾನಾಗಿದ್ದರೂ ನಿರುತ ದೇವರಿಗೆ ಸಮನಾದ ಆ ಸಿರಿ ಪದವಿಯನಾತ ಹಿಡಿದಿಟ್ಟುಕೊಳ್ಳಲಿಲ್ಲ ಬಿಡಲೊಲ್ಲೆನೆನುತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ದೇವಸ್ವರೂಪನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವದೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ದೇವರ ಸ್ವರೂಪವಾಗಿದ್ದರೂ, ದೇವರಿಗೆ ಸಮಾನರಾಗಿರುವುದನ್ನು ಬಿಡಲೊಲ್ಲೆನೆಂದು ಎಣಿಸದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೊ ದೆವಾಚೊ ರುಪ್ ಹೊವ್ನ್ ಹೊತ್ತೊ ಹೊಲ್ಯಾರ್ಬಿ, ದೆವಾಚ್ಯಾ ಸಮಾ ಹೊತ್ತಿ ಬರೆ ಪದ್ವಿ ಹೊತ್ತಿ ಸೊಡಿನಾ ಮನುನ್ ಚಿಂತಿನಸ್ತಾನಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:6
37 ತಿಳಿವುಗಳ ಹೋಲಿಕೆ  

ಯೇಸು ಸಬ್ಬತ್ತನ್ನು ಉಲ್ಲಂಘಿಸಿದ್ದಲ್ಲದೆ ದೇವರನ್ನು ತನ್ನ ತಂದೆಯೆಂದು ಹೇಳಿಕೊಂಡು ತನ್ನನ್ನು ದೇವರಿಗೆ ಸರಿಸಮಾನನನ್ನಾಗಿ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಆತನನ್ನು ಕೊಲ್ಲಲು ಮತ್ತಷ್ಟು ಪ್ರಯತ್ನಿಸಿದರು.


ಈ ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ.


ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಈಗ, ತಂದೆಯೇ, ನೀನು ನಿನ್ನ ಸನ್ನಿಧಿಯಲ್ಲಿ ನನ್ನನ್ನು ಮಹಿಮೆಪಡಿಸು. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು ನಾನು ನಿನ್ನೊಂದಿಗೆ ಹೊಂದಿದ್ದ ಮಹಿಮೆಯನ್ನು ನನಗೆ ಕೊಡು.


ಸಿಂಹಾಸನದ ಮೇಲೆ ಕುಳಿತಿದ್ದಾತನು ನನಗೆ ಹೀಗೆ ಹೇಳಿದನು: “ಎಲ್ಲವೂ ನೆರವೇರಿತು! ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಬಾಯಾರಿದವರಿಗೆ ನಾನು ಜೀವಜಲದ ಬುಗ್ಗೆಯಿಂದ ನೀರನ್ನು ಉಚಿತವಾಗಿ ಕೊಡುತ್ತೇನೆ.


ತಂದೆಯು ಮತ್ತು ನಾನು ಒಂದೇ ಆಗಿದ್ದೇವೆ” ಎಂದು ಉತ್ತರಕೊಟ್ಟನು.


ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.


ಯೇಸು ಕ್ರಿಸ್ತನು ನಿನ್ನೆ ಇದ್ದಂತೆ ಇಂದಿಗೂ ಇದ್ದಾನೆ. ಸದಾಕಾಲ ಹಾಗೆಯೇ ಇರುವನು.


ಯೆಹೂದ್ಯರು, “ನಾವು ನಿನ್ನನ್ನು ಕೊಲ್ಲುತ್ತಿರುವುದು ನೀನು ಮಾಡಿದ ಯಾವುದೇ ಒಳ್ಳೆಯ ಕಾರ್ಯದ ನಿಮಿತ್ತದಿಂದಲ್ಲ. ನೀನು ಮಾಡುತ್ತಿರುವ ದೇವದೂಷಣೆಗಾಗಿ. ನೀನು ಕೇವಲ ಒಬ್ಬ ಮನುಷ್ಯ. ನೀನು ನಿನ್ನನ್ನೇ ದೇವರೆಂದು ಹೇಳಿಕೊಳ್ಳುತ್ತಿರುವೆ! ಆದಕಾರಣ ಕಲ್ಲುಗಳಿಂದ ನಿನ್ನನ್ನು ಕೊಲ್ಲಬೇಕೆಂದಿದ್ದೇವೆ!” ಎಂದು ಉತ್ತರಕೊಟ್ಟರು.


ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.


ಅವರು ನಮ್ಮ ಪಿತೃಗಳ ಸಂತಾನಗಳಿಗೆ ಸೇರಿದವರಾಗಿದ್ದಾರೆ; ಕ್ರಿಸ್ತನು ಶಾರೀರಿಕವಾಗಿ ಇವರ ವಂಶದಲ್ಲಿಯೇ ಹುಟ್ಟಿದನು. ಕ್ರಿಸ್ತನು ಸಕಲಕ್ಕೂ ಒಡೆಯನಾಗಿದ್ದಾನೆ. ಆತನಿಗೆ ಎಂದೆಂದಿಗೂ ಸ್ತೋತ್ರವಾಗಲಿ! ಆಮೆನ್.


ನನ್ನ ಒಡೆಯನಾದ ದೇವರು ನಿಮಗೊಂದು ಗುರುತನ್ನು ಕೊಡುವನು: ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನಿಗೆ ಜನ್ಮ ನೀಡುವಳು. ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ತೋಮನು ಯೇಸುವಿಗೆ, “ನನ್ನ ಪ್ರಭುವೇ, ನನ್ನ ದೇವರೇ!” ಎಂದು ಹೇಳಿದನು.


ಆದರೆ ನನ್ನ ತಂದೆಯು ಮಾಡುವ ಕಾರ್ಯಗಳನ್ನೇ ನಾನು ಮಾಡಿದರೆ, ಆ ಕಾರ್ಯಗಳಲ್ಲಿ ನೀವು ನಂಬಿಕೆ ಇಡಬೇಕು. ನೀವು ನನ್ನಲ್ಲಿ ನಂಬಿಕೆ ಇಡದಿದ್ದರೂ ನನ್ನ ಕಾರ್ಯಗಳಲ್ಲಾದರೂ ನಂಬಿಕೆ ಇಡಿರಿ. ತಂದೆಯು ನನ್ನಲ್ಲಿದ್ದಾನೆ ಮತ್ತು ನಾನು ತಂದೆಯಲ್ಲಿದ್ದೇನೆ ಎಂಬುದನ್ನು ಆಗ ನೀವು ತಿಳಿದುಕೊಳ್ಳುವಿರಿ ಮತ್ತು ಅರ್ಥಮಾಡಿಕೊಳ್ಳುವಿರಿ” ಎಂದು ಹೇಳಿದನು.


ದೇವರು ತನ್ನ ಚೊಚ್ಚಲ ಮಗನನ್ನು ಈ ಲೋಕಕ್ಕೆ ಬರಮಾಡುವಾಗ, ಆತನು ಹೇಳುವುದೇನೆಂದರೆ, “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ.”


ನಮ್ಮ ಮಹಾದೇವರು ಮತ್ತು ರಕ್ಷಕನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಿರುವ ನಾವು ಆ ರೀತಿಯಲ್ಲಿಯೇ ಬಾಳಬೇಕು. ಆತನೇ ನಮ್ಮ ಮಹಾ ನಿರೀಕ್ಷೆಯಾಗಿದ್ದಾನೆ. ಆತನು ತನ್ನ ಮಹಿಮೆಯೊಂದಿಗೆ ಬರುತ್ತಾನೆ.


ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)


ಯೇಸು, “ಫಿಲಿಪ್ಪನೇ, ನಾನು ಇಷ್ಟು ಕಾಲದಿಂದ ನಿನ್ನೊಂದಿಗಿದ್ದರೂ ನೀನು ನನ್ನನ್ನು ತಿಳಿದುಕೊಳ್ಳಲಿಲ್ಲವೇ? ನನ್ನನ್ನು ನೋಡಿದವನು ತಂದೆಯನ್ನು ಸಹ ನೋಡಿದವನಾಗಿದ್ದಾನೆ. ಆದ್ದರಿಂದ, ‘ತಂದೆಯನ್ನು ನಮಗೆ ತೋರಿಸು’ ಎಂದು ಏಕೆ ಕೇಳುವಿರಿ?


ಸದ್ಧರ್ಮದ ‘ಸಸಿಯ’ ಸಮಯದಲ್ಲಿ ಯೆಹೂದದ ಜನರು ರಕ್ಷಿಸಲ್ಪಡುವರು ಮತ್ತು ಇಸ್ರೇಲ್ ಸುರಕ್ಷಿತವಾಗಿರುವುದು. ಯೆಹೋವನೇ, ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು.”


ಆ ನೀರು ಹೊಳೆಯಿಂದಾಚೆ ಬಂದು ಯೆಹೂದದ ಮೇಲೆ ಹರಿಯುವುದು. ಆ ನೀರು ಏರುತ್ತಾಬಂದು ಯೆಹೂದವನ್ನು ಕುತ್ತಿಗೆಯ ತನಕ ಮುಳುಗಿಸುವದು ಮಾತ್ರವಲ್ಲ ಅದನ್ನು ಸಂಪೂರ್ಣವಾಗಿ ಮುಳುಗಿಸಿಬಿಡುವದು. “ಇಮ್ಮಾನುವೇಲನೇ, ಈ ಜಲಪ್ರವಾಹವು ಎಲ್ಲಾ ಕಡೆಗಳಿಗೆ ಹಬ್ಬುತ್ತಾ ನಿಮ್ಮ ದೇಶವನ್ನು ಪೂರ್ತಿಯಾಗಿ ಮುಚ್ಚಿಬಿಡುವದು.”


ಆದರೆ ದೇವರು ತನ್ನ ಮಗನನ್ನು ಕುರಿತು ಹೀಗೆ ಹೇಳಿದನು: “ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲೂ ಇರುವುದು. ನೀನು ನಿನ್ನ ರಾಜ್ಯವನ್ನು ಸಮರ್ಪಕವಾದ ತೀರ್ಪುಗಳೊಡನೆ ಆಳುವೆ.


ಜನರು ತಂದೆಯನ್ನು ಗೌರವಿಸುವಂತೆ ಮಗನನ್ನು ಗೌರವಿಸಬೇಕೆಂದು ದೇವರು ಹೀಗೆ ಮಾಡಿದನು. ಮಗನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿರುವ ತಂದೆಯನ್ನೂ ಸನ್ಮಾನಿಸದವನಾಗಿದ್ದಾನೆ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.


‘ನಾನು ಹೊರಟುಹೋಗುತ್ತೇನೆ. ಆದರೆ ನಿಮ್ಮ ಬಳಿಗೆ ಹಿಂತಿರುಗಿ ಬರುತ್ತೇನೆ’ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ, ನಾನು ತಂದೆಯ ಬಳಿಗೆ ಮರಳಿಹೋಗುವುದರ ಬಗ್ಗೆ ಸಂತೋಷಪಡುತ್ತಿದ್ದಿರಿ. ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.


ದೇವರನ್ನು ಯಾರೂ ಎಂದೂ ಕಂಡಿಲ್ಲ. ಆದರೆ ಒಬ್ಬನೇ ಮಗನು (ಯೇಸು) ದೇವರಾಗಿದ್ದಾನೆ ಮತ್ತು ಆತನು ತಂದೆಯ (ದೇವರ) ಎದೆಯಲ್ಲಿದ್ದಾನೆ. ಆತನೇ ತಂದೆಯನ್ನು ತಿಳಿಯಪಡಿಸಿದ್ದಾನೆ.


ಸದಾಕಾಲ ಆಳುವ ಅರಸನಿಗೆ ಗೌರವವೂ ಮಹಿಮೆಯೂ ಇರಲಿ. ಆತನಿಗೆ ಲಯವೆಂಬುದೇ ಇಲ್ಲ. ಆತನು ಅದೃಶ್ಯನಾಗಿರುವನು. ಒಬ್ಬನೇ ದೇವರಾದ ಆತನಿಗೆ ಗೌರವವೂ ಮಹಿಮೆಯೂ ಉಂಟಾಗಲಿ. ಆಮೆನ್.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಿದೆ. ಕ್ರಿಸ್ತನು ದೇವರೊಂದಿಗೆ ಶ್ರೀಮಂತಿಕೆಯಲ್ಲಿದ್ದರೂ ನಿಮಗೋಸ್ಕರವಾಗಿ ಬಡವನಾದದ್ದು ನಿಮಗೆ ಗೊತ್ತಿದೆ. ನೀವು ಶ್ರೀಮಂತರಾಗಬೇಕೆಂದು ಕ್ರಿಸ್ತನು ಬಡವನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು