ಫಿಲಿಪ್ಪಿಯವರಿಗೆ 3:11 - ಪರಿಶುದ್ದ ಬೈಬಲ್11 ಹೀಗಾದರೆ, ನಾನು ಸತ್ತವರೊಳಗಿಂದ ಎಬ್ಬಿಸಲ್ಪಡುತ್ತೇನೆ ಎಂಬ ನಿರೀಕ್ಷೆ ನನಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹೀಗಾದರೆ ಸತ್ತವರಲ್ಲಿ ಕೆಲವರಿಗೆ ಆಗುವ ಪುನರುತ್ಥಾನದ ಅನುಭವ ನನಗೂ ಆದೀತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹೀಗೆ ನಾನೂ ಸಹ ಮೃತ್ಯುಂಜಯನಾಗುತ್ತೇನೆ ಎಂಬುದೇ ನನ್ನ ನಂಬಿಕೆ-ನಿರೀಕ್ಷೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಹೀಗಾದರೆ ಸತ್ತವರಲ್ಲಿ ಕೆಲವರಿಗೆ ಆಗುವ ಪುನರುತ್ಥಾನವು ನನಗೆ ಒದಗಿ ಬಂದೀತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹೇಗಾದರೂ, ನಾನೂ ಸಹ ಸತ್ತವರೊಳಗಿಂದ ಪುನರುತ್ಥಾನ ಹೊಂದುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಅಶೆ ಹೊಲ್ಯಾರುಚ್ ಮರಲ್ಯಾಕ್ನಿ ಪರ್ತುನ್ ಝಿತ್ತೊ ಹೊತಲ್ಯಾ ಸಾರ್ಕೆಚ್ ಅನುಭವ್ ಮಾಕಾಬಿ ಹೊಯ್ಲ್ ಮನ್ತಲೊ ಮಾಜೊ ಬರೊಸೊ. ಅಧ್ಯಾಯವನ್ನು ನೋಡಿ |
ನಿಮ್ಮ ನಂಬಿಕೆಯ ಬಗ್ಗೆ ತಿಳಿದುಕೊಳ್ಳಬೇಕೆಂಬ ಕಾರಣದಿಂದಲೇ ನಾನು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆನು. ಇನ್ನೂ ಹೆಚ್ಚುಕಾಲ ಕಾಯಲು ಸಾಧ್ಯವಿಲ್ಲವೆನಿಸಿದ್ದರಿಂದಲೇ ನಾನು ಅವನನ್ನು ಕಳುಹಿಸಿದೆನು. ಜನರನ್ನು ಶೋಧನೆಗೆ ಒಳಪಡಿಸುವ ಸೈತಾನನು ನಿಮ್ಮನ್ನು ಈಗಾಗಲೇ ಶೋಧನೆಗಳಿಂದ ಸೋಲಿಸಿರಬಹುದೆಂಬ ಭಯ ನನಗಿತ್ತು. ಒಂದುವೇಳೆ, ಹಾಗೇನಾದರೂ ಆಗಿದ್ದರೆ ನಮ್ಮ ಪ್ರಯಾಸವೆಲ್ಲಾ ನಿರರ್ಥಕವಾಗುತ್ತಿತ್ತು.
ಆ ರೇವು (ಸುರಕ್ಷಿತ ರೇವು) ಚಳಿಗಾಲದಲ್ಲಿ ಹಡಗು ನಿಲ್ಲುವುದಕ್ಕೆ ಒಳ್ಳೆಯ ಸ್ಥಳವಾಗಿರಲಿಲ್ಲ. ಆದ್ದರಿಂದ ಹಡಗು ಅಲ್ಲಿಂದ ಹೊರಡಲೇಬೇಕೆಂದು ಹೆಚ್ಚುಮಂದಿ ನಿರ್ಧರಿಸಿದರು. ನಾವು ಫೆನಿಕ್ಸ್‌ಗೆ ತಲುಪಬಹುದೆಂದು ಅವರ ನಿರೀಕ್ಷೆಯಾಗಿತ್ತು. ಚಳಿಗಾಲದಲ್ಲಿ ಹಡಗು ಅಲ್ಲಿ ತಂಗಬಹುದಾಗಿತ್ತು. ಫೆನಿಕ್ಸ್ ಕ್ರೇಟ್ ದ್ವೀಪದ ಒಂದು ಪಟ್ಟಣ. ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದ್ದ ಬಂದರನ್ನು ಅದು ಹೊಂದಿತ್ತು.