Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:12 - ಪರಿಶುದ್ದ ಬೈಬಲ್‌

12 ಈಗಾಗಲೇ ನಾನು ಇದೆಲ್ಲವನ್ನು ಸಾಧಿಸಿ ಪರಿಪೂರ್ಣತೆಯನ್ನು ಗಳಿಸಿದ್ದೇನೆ ಎಂದು ಹೇಳುತ್ತಿಲ್ಲ. ನಾನು ಆ ಗುರಿಯನ್ನು ಇನ್ನೂ ಮುಟ್ಟಿಲ್ಲ. ಆದರೆ ಆ ಗುರಿಯನ್ನು ಮುಟ್ಟಿ ಅದನ್ನು ನನ್ನದಾಗಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಇದು ಕ್ರಿಸ್ತನ ಅಪೇಕ್ಷೆ. ಆದಕಾರಣವೇ, ಕ್ರಿಸ್ತನು ನನ್ನನ್ನು ತನ್ನವನನ್ನಾಗಿ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಷ್ಟರೊಳಗೆ ನಾನಿದೆಲ್ಲವನ್ನೂ ಪಡಕೊಂಡು ಪರಿಪೂರ್ಣತೆಗೆ ಬಂದವನೆಂದು ಹೇಳುವುದಿಲ್ಲ. ಆದರೆ ನಾನು ಯಾವುದನ್ನು ಹೊಂದುವುದಕ್ಕಾಗಿ ಕ್ರಿಸ್ತ ಯೇಸುವು ನನ್ನನ್ನು ಹಿಡಿದುಕೊಂಡನೋ ಅದನ್ನು ಹೊಂದುವುದಕ್ಕೋಸ್ಕರ ಪ್ರಯತ್ನಿಸುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಈಗಾಗಲೇ ನಾನಿದೆಲ್ಲವನ್ನೂ ಸಾಧಿಸಿದ್ದೇನೆ, ಪರಿಪೂರ್ಣತೆಯನ್ನು ಗಳಿಸಿದ್ದೇನೆ ಎಂದು ನೀವು ಭಾವಿಸಬಾರದು. ಕ್ರಿಸ್ತಯೇಸು ನನ್ನನ್ನು ಯಾವುದಕ್ಕಾಗಿ ತಮ್ಮವನನ್ನಾಗಿ ಮಾಡಿಕೊಂಡರೋ, ಅದನ್ನು ನನ್ನದಾಗಿಸಿಕೊಳ್ಳಲು ನಾನು ಪ್ರಯತ್ನಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಷ್ಟರೊಳಗೆ ನಾನು ಬಿರುದನ್ನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೋ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಓಡುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದನ್ನೆಲ್ಲಾ ನಾನು ಸಾಧಿಸಿದ್ದೇನೆಂದಲ್ಲ ಅಥವಾ ಈಗಲೇ ನಾನು ಪರಿಪೂರ್ಣನಾಗಿದ್ದೇನೆಂದೂ ನಾನು ಹೇಳುತ್ತಾ ಇಲ್ಲ. ಆದರೆ ಕ್ರಿಸ್ತ ಯೇಸು ನನ್ನನ್ನು ಅನುಸರಿಸಬೇಕೆಂದು ಯಾವುದಕ್ಕಾಗಿ ಆರಿಸಿಕೊಂಡರೋ, ಆ ಪೂರ್ಣತೆಯೆಡೆಗೆ ತಲುಪುವಂತೆ ನಾನು ಪರಿಶ್ರಮಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಎವ್ಡ್ಯಾ ಪತರ್ ಮಿಯಾ ಹೆ ಸಗ್ಳ್ಯೆ ಪಡ್ದುನ್ ಘೆವ್ನ್ ಪುರಾ ಹೊಲ್ಲೊ ಮನುನ್ ಸಾಂಗಿನಾ, ಖರೆ ಮಿಯಾ ಖಲೆ ಘೆವ್ಕ್ ಸಾಟ್ನಿ ಕ್ರಿಸ್ತ್ ಜೆಜುನ್ ಮಾಕಾ ಧರುನ್ ಘೆಟ್ಲಾ ತೆಚ್ ಘೆವ್ಚೆ ಮನುನ್ ಕಟ್ಪಟ್‍ ಕರುಲ್ಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:12
44 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ವಾಗ್ದಾನಗಳನ್ನು ನೆರವೇರಿಸು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು. ನಮ್ಮನ್ನು ಸೃಷ್ಟಿಸಿದಾತನು ನೀನೇ. ನಮ್ಮನ್ನು ಕೈಬಿಡಬೇಡ!


ಯೆಹೋವನ ವಿಷಯವಾಗಿ ನಾವು ಕಲಿಯೋಣ. ಆತನನ್ನು ಅರಿತುಕೊಳ್ಳಲು ಅತಿಯಾಗಿ ಪ್ರಯತ್ನಿಸೋಣ. ಸೂರ್ಯೋದಯ ಆಗುತ್ತದೆಯೆಂಬುದು ನಮಗೆ ಗೊತ್ತಿರುವಂತೆಯೇ ಆತನು ಬರುವುದೂ ನಮಗೆ ಗೊತ್ತಿದೆ. ವಸಂತಕಾಲದ ಮಳೆಯಂತೆ ಯೆಹೋವನು ಬರುವನು.”


ಪ್ರಿಯ ಸ್ನೇಹಿತರೇ, ನಾವು ದೇವರಿಂದ ಈ ವಾಗ್ದಾನಗಳನ್ನು ಹೊಂದಿದ್ದೇವೆ. ಆದ್ದರಿಂದ ನಮ್ಮನ್ನು ಶುದ್ಧರನ್ನಾಗಿ ಮಾಡಿಕೊಳ್ಳಬೇಕು. ನಮ್ಮ ದೇಹವನ್ನಾಗಲಿ ನಮ್ಮ ಆತ್ಮವನ್ನಾಗಲಿ ಅಶುದ್ಧಗೊಳಿಸುವ ಎಲ್ಲಾ ವಿಧದ ಮಲಿನತೆಯಿಂದ ನಾವು ದೂರವಿರೋಣ. ನಾವು ದೇವರನ್ನು ಗೌರವಿಸುವುದರಿಂದ ಪರಿಶುದ್ಧವಾದ ಬಾಳ್ವೆಯನ್ನು ನಡೆಸಲು ನಾವು ಪ್ರಯತ್ನಿಸಬೇಕು.


“ಒಳ್ಳೆಯವರಾಗಿ ಜೀವಿಸಲು ಬಹಳವಾಗಿ ಪ್ರಯತ್ನಿಸುತ್ತಿರುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ. ನಿಮ್ಮ ಪಿತೃವಾದ ಅಬ್ರಹಾಮನನ್ನೇ ದೃಷ್ಟಿಸಿ ನೋಡಿರಿ; ಆ ಬಂಡೆಯೊಳಗಿಂದಲೇ ನೀವು ತೆಗೆಯಲ್ಪಟ್ಟಿದ್ದೀರಿ.


ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡನು. ತನ್ನ ಸನ್ನಿಧಿಯಲ್ಲಿ ನಾವು ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂಬುದು ಆತನ ಉದ್ದೇಶವಾಗಿತ್ತು.


ಆದರೆ ನಾವು ಈಗಾಗಲೇ ಹೊಂದಿರುವ ಸತ್ಯವನ್ನು ಅನುಸರಿಸುತ್ತಾ ನಡೆಯೋಣ.


ನಿಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಲ್ಲಿಯೂ ತಿಳುವಳಿಕೆಯಲ್ಲಿಯೂ ಬೆಳೆಯುತ್ತಲೇ ಇರಿ. ಆತನಿಗೆ ಈಗಲೂ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್.


ನಾವೆಲ್ಲರೂ ಅನೇಕ ವಿಷಯಗಳಲ್ಲಿ ತಪ್ಪುವುದುಂಟು. ಆದರೆ ಮಾತಿನಲ್ಲಿ ಎಂದೂ ತಪ್ಪುಮಾಡಿಲ್ಲದ ವ್ಯಕ್ತಿಯು ಪರಿಪೂರ್ಣನೂ ತನ್ನ ದೇಹವನ್ನು ಸ್ವಾಧೀನದಲ್ಲಿಟ್ಟುಕೊಳ್ಳಲು ಸಮರ್ಥನೂ ಆಗಿದ್ದಾನೆ.


ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.


ನಮ್ಮ ಶರೀರಭಾವವು ದೇವರಾತ್ಮನಿಗೆ ವಿರುದ್ಧವಾದ ಸಂಗತಿಗಳನ್ನು ಬಯಸುತ್ತದೆ. ದೇವರಾತ್ಮನು ನಮ್ಮ ಶರೀರಭಾವಕ್ಕೆ ವಿರುದ್ಧವಾದ ಸಂಗತಿಗಳನ್ನು ಬಯಸುತ್ತಾನೆ. ಆದ್ದರಿಂದ ನೀವು ನಿಜವಾಗಿಯೂ ಬಯಸುವಂಥವುಗಳನ್ನು ಮಾಡಲಾಗದಂತೆ ಅವು ಒಂದಕ್ಕೊಂದು ಹೋರಾಡುತ್ತವೆ.


ನೀತಿವಂತರು ಸನ್ಮಾರ್ಗದಲ್ಲಿ ಜೀವಿಸುವರು. ನಿರಪರಾಧಿಗಳು ಸದ್ಗುಣದಲ್ಲಿ ಬಲವಾಗುತ್ತಲೇ ಇರುವರು.


ಹೌದು, ನೀವು ಸ್ವಲ್ಪಕಾಲ ಮಾತ್ರ ಸಂಕಟವನ್ನು ಅನುಭವಿಸುವಿರಿ. ಆದರೆ ಅನಂತರ ದೇವರು ಎಲ್ಲವನ್ನು ಸರಿಪಡಿಸುತ್ತಾನೆ. ಆತನು ನಿಮ್ಮನ್ನು ಬಲಪಡಿಸುತ್ತಾನೆ. ನೀವು ಕೆಳಕ್ಕೆ ಬೀಳದಂತೆ ಆತನು ನಿಮಗೆ ಆಧಾರವಾಗುವನು. ಎಲ್ಲರಿಗೂ ಕೃಪೆಯನ್ನು ತೋರುವ ದೇವರು ಆತನೇ. ತನ್ನ ಪ್ರಭಾವದಲ್ಲಿ ಪಾಲುಗಾರರಾಗಲು ಕ್ರಿಸ್ತನೇ ನಿಮ್ಮನ್ನು ಕರೆದನು. ಆ ಪ್ರಭಾವವು ಶಾಶ್ವತವಾದದ್ದು.


ಸಹೋದರ ಸಹೋದರಿಯರೇ, ಪ್ರಭುವು ನಿಮ್ಮನ್ನು ಪ್ರೀತಿಸುತ್ತಾನೆ. ನಿಮ್ಮನ್ನು ರಕ್ಷಿಸಬೇಕೆಂದು ದೇವರು ನಿಮ್ಮನ್ನು ಆದಿಯಲ್ಲಿಯೇ ಆರಿಸಿಕೊಂಡನು. ಆದ್ದರಿಂದ ನಿಮ್ಮ ವಿಷಯದಲ್ಲಿ ದೇವರಿಗೆ ಯಾವಾಗಲೂ ಕೃತಜ್ಞತೆ ಸಲ್ಲಿಸಬೇಕು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವ ಪವಿತ್ರಾತ್ಮನಿಂದ ಮತ್ತು ಸತ್ಯದ ಮೇಲೆ ನಿಮಗಿರುವ ನಂಬಿಕೆಯಿಂದ ನೀವು ರಕ್ಷಣೆ ಹೊಂದಿದ್ದೀರಿ.


ಸಭೆಯ ಸೇವೆಗೋಸ್ಕರ ದೇವರ ಪರಿಶುದ್ಧ ಜನರನ್ನು ಸಿದ್ಧಪಡಿಸುವುದಕ್ಕಾಗಿ ಆತನು ಅವರನ್ನು ನೇಮಿಸಿದನು.


ನೀವು ಶಕ್ತರಾಗಿರುವುದಾದರೆ, ನಾವು ಬಲಹೀನರಾಗಿರಲು ಸಂತೋಷಿಸುತ್ತೇವೆ. ನೀವು ನಂಬಿಕೆಯಲ್ಲಿ ಪರಿಪೂರ್ಣರಾಗಬೇಕೆಂಬುದೇ ನಮ್ಮ ಉದ್ದೇಶ.


ಆದರೆ ಸಂಪೂರ್ಣತೆಯು ಬಂದಾಗ ಸಂಪೂರ್ಣವಲ್ಲದವುಗಳು ಕೊನೆಗೊಳ್ಳುತ್ತವೆ.


ನೀತಿವಂತರ ಜೀವಿತವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಮುಂಜಾನೆಯ ಬೆಳಕಿನಂತಿರುವುದು.


ನಿನ್ನ ಕಟ್ಟಳೆಗಳಿಗೆ ನಾನು ಯಾವಾಗಲೂ ವಿಧೇಯನಾಗಿದ್ದರೆ,


ಯೆಹೋವನೇ, ನಿನ್ನ ಆಲಯದೊಳಗೆ ಪ್ರವೇಶಿಸಲು ಕಾತುರಗೊಂಡಿರುವೆ. ನನ್ನ ಅಂಗಾಂಗಗಳೆಲ್ಲಾ ಚೈತನ್ಯಸ್ವರೂಪನಾದ ದೇವರೊಂದಿಗೆ ಇರಲು ಬಯಸುತ್ತಿವೆ.


ನನ್ನ ಆತ್ಮವು ನಿನ್ನನ್ನು ಅಂಟಿಕೊಂಡಿರುವುದು. ನಿನ್ನ ಬಲಗೈ ನನ್ನ ಕೈಹಿಡಿದು ನಡೆಸುವುದು.


ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ; ಒಬ್ಬರಿಗೊಬ್ಬರಿಗೆ ಮತ್ತು ಎಲ್ಲರಿಗೆ ಯಾವಾಗಲೂ ಒಳ್ಳೆಯದನ್ನು ಮಾಡಲು ಪ್ರಯತ್ನಿಸಿರಿ.


ಆಗ ಪರಲೋಕದಲ್ಲಿ ಒಂದು ನಿಧಿಯನ್ನು ಅವರು ಕೂಡಿಟ್ಟು ಕೊಂಡಂತಾಗುತ್ತದೆ. ಆ ನಿಧಿಯೇ ಅವರ ಮುಂದಿನ ಜೀವಿತಕ್ಕೆ ಭದ್ರವಾದ ಅಸ್ತಿವಾರವಾಗಿದೆ. ಹೀಗೆ ಅವರು ನಿಜವಾದ ಜೀವಿತವನ್ನು ಹೊಂದಿಕೊಳ್ಳುವರು.


ಆದರೆ ಪ್ರಭುವು ಅನನೀಯನಿಗೆ, “ಹೋಗು! ಮುಖ್ಯವಾದ ಕೆಲಸಕ್ಕಾಗಿ ನಾನು ಸೌಲನನ್ನು ಆರಿಸಿಕೊಂಡಿದ್ದೇನೆ. ಅವನು ನನ್ನ ಬಗ್ಗೆ ರಾಜರುಗಳಿಗೂ ಯೆಹೂದ್ಯರಿಗೂ ಮತ್ತು ಇತರ ಜನಾಂಗಗಳಿಗೂ ತಿಳಿಸಬೇಕಾಗಿದೆ.


ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದವಳೆಂದೂ ಹೆಸರನ್ನು ಪಡೆದಿರಬೇಕು. ಅಂದರೆ, ಅವಳು ತನ್ನ ಮಕ್ಕಳನ್ನು ಸಾಕಿಸಲಹಿದವಳೂ, ಅತಿಥಿಗಳನ್ನು ಸತ್ಕರಿಸಿದವಳೂ, ದೇವಜನರ ಪಾದಗಳನ್ನು ತೊಳೆದವಳೂ, ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಿದವಳೂ ಮತ್ತು ತನ್ನಿಂದಾದಷ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದವಳೂ ಆಗಿರಬೇಕು.


ನ್ಯಾಯವು ನೀತಿಯೊಂದಿಗೆ ಮರಳಿ ಬರುವುದು. ಆಗ ಜನರು ಒಳ್ಳೆಯವರೂ ಯಥಾರ್ಥವಂತರೂ ಆಗುವರು.


ದೇವರ ಚೊಚ್ಚಲು ಮಕ್ಕಳ ಸಭೆಗೆ ನೀವು ಬಂದಿರುವಿರಿ. ಅವರ ಹೆಸರುಗಳನ್ನು ಪರಲೋಕದಲ್ಲಿ ಬರೆಯಲಾಗಿದೆ. ನೀವು ಜನರಿಗೆಲ್ಲ ತೀರ್ಪು ನೀಡುವ ದೇವರ ಬಳಿಗೂ ಪರಿಪೂರ್ಣರನ್ನಾಗಿ ಮಾಡಲ್ಪಟ್ಟ ಒಳ್ಳೆಯ ಜನರ ಆತ್ಮಗಳ ಬಳಿಗೂ ಬಂದಿರುವಿರಿ.


ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಬಯಸುವಂತೆಯೇ ನನ್ನ ಆತ್ಮವು ನಿನ್ನನ್ನು ಬಯಸುತ್ತದೆ.


ಆದ್ದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರಬೇಕು.


ಓಟದ ಸ್ಪರ್ಧೆಯಲ್ಲಿ ಎಲ್ಲಾ ಓಟಗಾರರು ಓಡುತ್ತಾರೆಂಬುದು ನಿಮಗೆ ಗೊತ್ತಿದೆ. ಆದರೆ ಅವರಲ್ಲಿ ಒಬ್ಬನು ಮಾತ್ರ ಬಹುಮಾನವನ್ನು ಪಡೆದುಕೊಳ್ಳುತ್ತಾನೆ. ಆದ್ದರಿಂದ ಆ ರೀತಿಯಲ್ಲಿ ಓಡಿರಿ; ಗೆಲ್ಲುವುದಕ್ಕಾಗಿ ಓಡಿರಿ.


ನಮಗೂ ಸಹ ಇದು ಅನ್ವಯಿಸುತ್ತದೆ. ಕನ್ನಡಿಯಲ್ಲಿ ಕೇವಲ ಪ್ರತಿಬಿಂಬ ಕಾಣುವಂತೆ ಈಗ ನಾವು ನೋಡುತ್ತಿದ್ದೇವೆ. ಆದರೆ ಮುಂದಿನ ಕಾಲದಲ್ಲಿ ನಾವು ಮುಖಾಮುಖಿಯಾಗಿ ಕಾಣುತ್ತೇವೆ. ಈಗ ನನಗೆ ತಿಳಿದಿರುವುದು ಕೇವಲ ಒಂದು ಭಾಗವಷ್ಟೆ, ಆದರೆ ಆ ಕಾಲದಲ್ಲಿ ದೇವರು ನನ್ನನ್ನು ತಿಳಿದಿರುವಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.


ಯೇಸು ಕ್ರಿಸ್ತನ ದಾಸರಾದ ಪೌಲನು ತಿಮೊಥೆಯನು ಫಿಲಿಪ್ಪಿಯವರಿಗೆ ಬರೆಯುವ ಪತ್ರ. ಯೇಸು ಕ್ರಿಸ್ತನ ಮೂಲಕ ದೇವರ ಪರಿಶುದ್ಧ ಜನರಾಗಿರುವವರಿಗೂ ಎಲ್ಲಾ ಹಿರಿಯರಿಗೂ ಸಭಾಸೇವಕರಿಗೂ ನಾವು ಈ ಪತ್ರವನ್ನು ಬರೆಯತ್ತಿದ್ದೇವೆ.


ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.


ಅಷ್ಟೇ ಅಲ್ಲ, ನನ್ನ ಪ್ರಭುವಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ಎಲ್ಲಾ ಸಂಗತಿಗಳಿಗಿಂತಲೂ ಅತಿಶ್ರೇಷ್ಠವಾದದ್ದೆಂದು ನನಗೆ ಮನದಟ್ಟಾಗಿದೆ. ನಾನು ಯಾವುದನ್ನು ಮುಖ್ಯವಾದವುಗಳೆಂದು ಪರಿಗಣಿಸಿದ್ದೆನೋ ಅವುಗಳನ್ನೆಲ್ಲ ಕ್ರಿಸ್ತನ ನಿಮಿತ್ತ ಕಳೆದುಕೊಂಡೆನು. ಅವುಗಳೆಲ್ಲ ನಿಷ್ಪ್ರಯೋಜಕವಾದವುಗಳೆಂದು ನನಗೆ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು