ಫಿಲಿಪ್ಪಿಯವರಿಗೆ 3:19 - ಪರಿಶುದ್ದ ಬೈಬಲ್19 ಅವರ ನಡತೆಯು ಅವರನ್ನು ನಾಶದೆಡೆಗೆ ನಡೆಸುತ್ತಿದೆ. ಅವರು ದೇವರ ಸೇವೆ ಮಾಡುತ್ತಿಲ್ಲ. ಆ ಜನರು ಕೇವಲ ತಮ್ಮ ಸಂತೋಷಕ್ಕಾಗಿ ಜೀವಿಸುತ್ತಿದ್ದಾರೆ. ಅವರು ನಾಚಿಕೆಕರವಾದ ಕೆಲಸಗಳನ್ನು ಮಾಡಿ, ಅವುಗಳ ಬಗ್ಗೆ ಹೆಮ್ಮೆಪಡುತ್ತಾರೆ. ಅವರು ಕೇವಲ ಈ ಲೋಕದ ವಿಷಯಗಳ ಬಗ್ಗೆ ಆಲೋಚಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು, ಅವರು ಪ್ರಪಂಚದ ಕಾರ್ಯಗಳ ಮೇಲೆ ಮನಸ್ಸಿಡುವವರು. ನಾವಾದರೋ ಪರಲೋಕಸಂಸ್ಥಾನದವರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ವಿನಾಶನವೇ ಅವರ ಅಂತ್ಯವು. ಹೊಟ್ಟೆಯೇ ಅವರ ದೇವರು. ನಾಚಿಕೆ ಕಾರ್ಯಗಳಲ್ಲಿಯೇ ಅವರ ಪ್ರಭಾವ. ಅವರು ಲೌಕಿಕವಾದವುಗಳ ಮೇಲೆ ಮನಸ್ಸಿಡುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತೆಂಕಾ ಆಕ್ರಿಕ್ ಗಾವ್ತಲೆ ನಾಶುಚ್, ತೆಂಚೆ ಪೊಟುಚ್ ತೆಂಚೊ ದೆವ್, ಮರ್ಯ್ಯಾದ್ ಗೆಡಿ ಕಾಮಚ್ ತೆಂಕಾ ಗೌರವ್ ದಿತ್ಯಾತ್, ತೆನಿ ಹ್ಯಾ ಜಗಾಕ್ ಸಮಂದ್ ಪಡಲ್ಯಾ ವಿಶಯಾತ್ನಿ ಮನ್ ಥವ್ತಾತ್. ಅಧ್ಯಾಯವನ್ನು ನೋಡಿ |
ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.
ಅವರಿಂದ ಅನೇಕ ಜನರು ಸಂಕಟಕ್ಕೆ ಒಳಗಾಗುವರು. ಅವರು ಮಾಡಿದ್ದಕ್ಕೆ ಅದೇ ಪ್ರತಿಫಲವಾಗಿರುವುದು. ಈ ಸುಳ್ಳುಬೋಧಕರು ಜನರೆಲ್ಲರ ಎದುರಿನಲ್ಲಿ ಕೆಟ್ಟದ್ದನ್ನು ಮಾಡಲು ಸಂತೋಷಿಸುತ್ತಾರೆ. ತಮ್ಮನ್ನು ಸಂತಸಗೊಳಿಸುವ ಕೆಟ್ಟಕಾರ್ಯಗಳಿಂದ ಅವರು ಆನಂದಿಸುತ್ತಾರೆ. ಅವರು ನಿಮ್ಮ ಮಧ್ಯದಲ್ಲಿ ಕೊಳಕಾದ ಕಲೆಗಳಂತಿದ್ದಾರೆ. ನೀವು ಒಟ್ಟಾಗಿ ಊಟ ಮಾಡುವಾಗ ಅವರು ನಿಮಗೆ ಅಪಮಾನಕರವಾಗಿದ್ದಾರೆ.
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.
ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಅರ್ಪಿಸುವದಾಗಿ ಹರಕೆ ಮಾಡಿದ್ದೇವೆ ಮತ್ತು ನಮ್ಮ ಹರಕೆಗಳನ್ನೆಲ್ಲ ಪೂರೈಸುತ್ತೇವೆ. ನಾವು ನೈವೇದ್ಯವನ್ನು ಕೊಡುತ್ತೇವೆ ಮತ್ತು ಅವಳ ಪೂಜೆಗಾಗಿ ಪಾನನೈವೇದ್ಯವನ್ನು ಅರ್ಪಿಸುತ್ತೇವೆ. ನಾವು ಮೊದಲು ಹಾಗೆಯೇ ಮಾಡಿದ್ದೇವೆ. ನಮ್ಮ ಪೂರ್ವಿಕರು, ನಮ್ಮ ರಾಜರು, ನಮ್ಮ ಅಧಿಕಾರಿಗಳು ಮೊದಲು ಮಾಡಿದಂತೆಯೇ ನಾವೆಲ್ಲರೂ ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಪಟ್ಟಣಗಳಲ್ಲಿ ಮಾಡಿದ್ದೆವು. ನಾವು ಸ್ವರ್ಗದ ರಾಣಿಯನ್ನು ಪೂಜಿಸುವ ಕಾಲದಲ್ಲಿ ನಮ್ಮಲ್ಲಿ ಸಾಕಷ್ಟು ಆಹಾರವಿತ್ತು. ನಾವು ಜಯಶೀಲರಾಗಿದ್ದೆವು. ನಮಗೆ ಕೆಟ್ಟದ್ದೇನೂ ಆಗಿರಲಿಲ್ಲ.