ಫಿಲಿಪ್ಪಿಯವರಿಗೆ 3:20 - ಪರಿಶುದ್ದ ಬೈಬಲ್20 ನಾವಾದರೋ ಪರಲೋಕ ಸಂಸ್ಥಾನದವರು. ನಮ್ಮ ರಕ್ಷಕನು ಅಲ್ಲಿಂದಲೇ ಬರುವುದನ್ನು ನಾವು ಎದುರುನೋಡುತ್ತಿದ್ದೇವೆ. ಪ್ರಭುವಾದ ಯೇಸು ಕ್ರಿಸ್ತನೇ ನಮ್ಮ ರಕ್ಷಕನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಾವಾದರೋ ಸ್ವರ್ಗಸಾಮ್ರಾಜ್ಯದ ಪ್ರಜೆಗಳು, ಉದ್ಧಾರಕರಾದ ಪ್ರಭು ಯೇಸುಕ್ರಿಸ್ತರು ಪುನರಾಗಮಿಸುವುದು ಅಲ್ಲಿಂದಲೇ ಎಂದು ಎದುರುನೋಡುತ್ತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವದನ್ನು ಎದುರುನೋಡುತ್ತಾ ಇದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ನಮ್ಮ ಪೌರತ್ವವು ಪರಲೋಕದಲ್ಲಿದೆ. ನಾವು ಪರಲೋಕದಿಂದಲೇ ರಕ್ಷಕರಾಗಿರುವ ಒಬ್ಬರ ಬರುವಿಕೆಗಾಗಿ ಆತುರದಿಂದ ಎದುರುನೋಡುತ್ತಿದ್ದೇವೆ. ಅವರೇ ಕರ್ತದೇವರು ಆಗಿರುವ ಕ್ರಿಸ್ತ ಯೇಸು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಅಮಿ ತರಿಬಿ ಸರ್‍ಗಾತ್ ರ್‍ಹಾತಲೆ ಥೈತ್ನಾ ರಾಕ್ವನ್‍ಕಾರಿ ಯೆತಲಿ ವಾಟ್ ಬಗುಲ್ಲಾಂವ್, ತೊಚ್ ಧನಿಯಾ ಜೆಜು ಕ್ರಿಸ್ತ್. ಅಧ್ಯಾಯವನ್ನು ನೋಡಿ |
ನಿಮಗೆ ನಿರೀಕ್ಷೆ ಇರುವುದರಿಂದಲೇ ಕ್ರಿಸ್ತನಲ್ಲಿ ನಂಬಿಕೆ ಇಟ್ಟಿದ್ದೀರಿ ಮತ್ತು ದೇವಜನರನ್ನು ಪ್ರೀತಿಸುತ್ತೀರಿ. ನೀವು ನಿರೀಕ್ಷಿಸುವಂಥವುಗಳು ನಿಮಗೋಸ್ಕರ ಪರಲೋಕದಲ್ಲಿ ಸಿದ್ಧ ಮಾಡಲ್ಪಟ್ಟಿವೆ ಎಂಬುದು ನಿಮಗೆ ತಿಳಿದಿದೆ. ನಿಮಗೆ ತಿಳಿಸಲಾದ ಸತ್ಯವಾಕ್ಯವನ್ನು ಅಂದರೆ ಸುವಾರ್ತೆಯನ್ನು ನೀವು ಕೇಳಿದಾಗ ಈ ನಿರೀಕ್ಷೆಯ ಬಗ್ಗೆ ತಿಳಿದುಕೊಂಡಿರಿ. ನೀವು ಸುವಾರ್ತೆಯನ್ನು ಕೇಳಿ ದೇವರ ಕೃಪೆಯ ಸತ್ಯಾರ್ಥವನ್ನು ತಿಳಿದುಕೊಂಡಂದಿನಿಂದ ಸುವಾರ್ತೆಯು ನಿಮ್ಮಲ್ಲಿ ವೃದ್ಧಿಯಾಗುತ್ತಿದೆ ಮತ್ತು ಜನರಿಗೆ ಆಶೀರ್ವಾದಕರವಾಗಿದೆ. ಅದೇ ರೀತಿ ಪ್ರಪಂಚದ ಎಲ್ಲಾ ಕಡೆಗಳಲ್ಲೂ ಸುವಾರ್ತೆಯು ವೃದ್ಧಿಯಾಗುತ್ತಿದೆ ಮತ್ತು ಆಶೀರ್ವಾದಕರವಾಗಿದೆ.