Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:21 - ಪರಿಶುದ್ದ ಬೈಬಲ್‌

21 ಆತನು ತನ್ನ ಶಕ್ತಿಯಿಂದ ಸಮಸ್ತವನ್ನು ಆಳುತ್ತಾನೆ ಮತ್ತು ನಮ್ಮ ದೀನಾವಸ್ಥೆಯ ಈ ಶರೀರವನ್ನು ರೂಪಾಂತರಪಡಿಸಿ ತನ್ನ ಸ್ವಂತ ಮಹಿಮಾಶರೀರದಂತೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವರು ಸಮಸ್ತವನ್ನು ಸ್ವಾಧೀನಪಡಿಸಿಕೊಳ್ಳುವರು; ನಶ್ವರವಾದ ನಮ್ಮ ದೀನದೇಹಗಳನ್ನು ತಮ್ಮ ಶಕ್ತಿಯಿಂದ ರೂಪಾಂತರಗೊಳಿಸಿ ತಮ್ಮ ತೇಜೋಮಯ ಶರೀರದಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸಿ ಪ್ರಭಾವವುಳ್ಳ ತನ್ನ ದೇಹದ ಸಾರೂಪ್ಯವಾಗುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹೀಗೆ ಕ್ರಿಸ್ತ ಯೇಸು ಎಲ್ಲವನ್ನೂ ತಮಗೆ ಅಧೀನ ಮಾಡಿಕೊಳ್ಳುವ ತಮ್ಮ ಶಕ್ತಿಯ ಪ್ರಕಾರ, ಮಹಿಮೆಯುಳ್ಳ ತಮ್ಮ ದೇಹಕ್ಕೆ ಸಮವಾಗಿ ಸಾರೂಪ್ಯವಾಗುವಂತೆ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತೊ ಸಗ್ಳೆಬಿ ಅಪ್ನಾಕ್ ಮಾನಿ ಸಾರ್ಕೆ ಕರುನ್ ಘೆತಲಿ ಬಳ್ ಘೆವ್ನ್ ಗರಿಬ್ಪಾನಾತ್ ಹೊತ್ತೆ ಅಮ್ಚೆ ಆಂಗ್ ಬಳ್ ಹೊತ್ತ್ಯಾ ಅಪ್ಲೆ ಆಂಗ್ ಸಾರ್ಕೆ ರುಪ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:21
18 ತಿಳಿವುಗಳ ಹೋಲಿಕೆ  

ಕ್ರಿಸ್ತನೇ ನಿಮ್ಮ ಜೀವ, ಆತನು ಮರಳಿ ಪ್ರತ್ಯಕ್ಷನಾದಾಗ, ನೀವೂ ಆತನ ಪ್ರಭಾವದೊಂದಿಗೆ ಪ್ರತ್ಯಕ್ಷರಾಗುವಿರಿ.


ಪ್ರಿಯ ಸ್ನೇಹಿತರೇ, ಈಗ ನಾವು ದೇವರ ಮಕ್ಕಳಾಗಿದ್ದೇವೆ. ನಾವು ಮುಂದೆ ಏನಾಗುವೆವೆಂಬುದನ್ನು ನಮಗಿನ್ನೂ ತೋರ್ಪಡಿಸಿಲ್ಲ. ಆದರೆ ಕ್ರಿಸ್ತನು ಮರಳಿ ಬಂದಾಗ ಅದನ್ನು ತಿಳಿದುಕೊಳ್ಳುತ್ತೇವೆ. ನಾವು ಆತನಂತಾಗುವೆವು. ನಾವು ಆತನ ನಿಜಸ್ವರೂಪವನ್ನೇ ನೋಡುವೆವು.


ದೇವರು ತಾನು ಜಗತ್ತನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಆ ಜನರನ್ನು ಬಲ್ಲವನಾಗಿದ್ದನು ಮತ್ತು ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂದು ನಿರ್ಧರಿಸಿದನು. ಹೀಗಿರಲಾಗಿ, ಅನೇಕ ಸಹೋದರ ಸಹೋದರಿಯರಲ್ಲಿ ಯೇಸುವೇ ಹಿರಿಯವನಾಗಿದ್ದಾನೆ.


ಆದರೆ ಯೆಹೋವನು ಹೇಳುವುದೇನೆಂದರೆ, “ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”


ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.


ಈ ಶಿಷ್ಯರ ಕಣ್ಣೆದುರಿನಲ್ಲಿಯೇ ಆತನು ರೂಪಾಂತರ ಹೊಂದಿದನು. ಆತನ ಮುಖವು ಸೂರ್ಯನಂತೆ ಪ್ರಕಾಶಮಾನವಾಯಿತು. ಆತನ ಉಡುಪುಗಳು ಬೆಳಕಿನಂತೆ ಬೆಳ್ಳಗಾದವು.


ಪ್ರಭುವಾದ ದೇವರು ಹೇಳುವುದೇನೆಂದರೆ: “ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನು ವರ್ತಮಾನ, ಭೂತ ಮತ್ತು ಭವಿಷ್ಯತ್ ಕಾಲಗಳಲ್ಲಿರುವಾತನು. ನಾನೇ ಸರ್ವಶಕ್ತನು.”


ಯೇಸು, “ನೀವು ತಪ್ಪಾಗಿ ತಿಳಿದುಕೊಂಡಿರಲು ಕಾರಣವೇನೆಂದರೆ, ಪವಿತ್ರ ಗ್ರಂಥವು ಏನು ಹೇಳುತ್ತದೆ ಎಂಬುದು ನಿಮಗೆ ತಿಳಿದಿಲ್ಲ ಮತ್ತು ದೇವರ ಶಕ್ತಿಯ ಬಗ್ಗೆಯೂ ನಿಮಗೆ ಗೊತ್ತಿಲ್ಲ.


“ಸಮಾಧಿಯಿಂದ ಅವರನ್ನು ರಕ್ಷಿಸುವೆನು; ಮರಣದಿಂದ ಅವರನ್ನು ಪಾರುಮಾಡುವೆನು. ಮರಣವೇ, ನಿನ್ನ ವ್ಯಾಧಿಗಳೆಲ್ಲಿ? ಸಮಾಧಿಯೇ, ನಿನ್ನ ಶಕ್ತಿ ಎಲ್ಲಿ? ನಾನು ಪ್ರತಿಕಾರ ಸಲ್ಲಿಸುವದಿಲ್ಲ.


ಆದರೆ ಮರಣವು ಎಂದೆಂದಿಗೂ ನಾಶಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರೆಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ಆ ದುಃಖವನ್ನು ಈ ಭೂಮಿಯಿಂದಲೇ ತೆಗೆದುಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.


ಬೆಳ್ಳಿಯ ತಿರುಪಿನಿಂದ ಕೂಡಿದ ಚಿನ್ನದ ಆಭರಣಗಳನ್ನು ನಾವು ನಿನಗೋಸ್ಕರ ಮಾಡಿಸುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು