Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:10 - ಪರಿಶುದ್ದ ಬೈಬಲ್‌

10 ನನ್ನ ಮೇಲೆ ನಿಮಗಿರುವ ಚಿಂತೆಯನ್ನು ನೀವು ಮತ್ತೆ ತೋರಿಸಿದ್ದಕ್ಕಾಗಿ ನಾನು ಪ್ರಭುವಿನಲ್ಲಿ ಬಹು ಸಂತೋಷಪಡುತ್ತೇನೆ. ನೀವು ನನ್ನ ಬಗ್ಗೆ ಚಿಂತಿಸುತ್ತಲೇ ಇದ್ದೀರಿ. ಆದರೆ ಅದನ್ನು ತೋರಿಸಲು ನಿಮಗೆ ಅವಕಾಶವೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ವಿಷಯದಲ್ಲಿ ನಿಮಗಿರುವ ಕಾಳಜಿಯು ಇಷ್ಟು ದಿನಗಳಾದ ಮೇಲೆ ಪುನಃ ಚಿಗುರಿದಕ್ಕೆ ನಾನು ಕರ್ತನಲ್ಲಿ ಹೆಚ್ಚಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ಈ ಮೊದಲೇ ಇದ್ದಿದ್ದರೂ, ಸಹಾಯ ಮಾಡುವುದಕ್ಕೆ ಸರಿಯಾದ ಸಂದರ್ಭ ಒದಗಿ ಬಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನನ್ನ ಬಗ್ಗೆ ನಿಮಗಿರುವ ಮಮತೆಯು ಇಷ್ಟು ದಿನಗಳಾದ ಮೇಲೆ ಪುನಃ ಅರಳಿದ್ದಕ್ಕೆ ಪ್ರಭುವಿನಲ್ಲಿ ನಾನು ಬಹಳ ಸಂತೋಷಪಡುತ್ತೇನೆ. ಇಂಥ ಮಮತೆ ನಿಮಗೆ ಮೊದಲಿನಿಂದ ಇತ್ತಾದರೂ ಅದನ್ನು ವ್ಯಕ್ತಪಡಿಲು ನಿಮಗೆ ಸೂಕ್ತ ಸಂದರ್ಭ ಒದಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ವಿಷಯವಾದ ನಿಮ್ಮ ಯೋಚನೆಯೆಂಬ ಬಳ್ಳಿಯು ಇಷ್ಟು ದಿವಸಗಳಾದ ಮೇಲೆ ಪುನಃ ಚಿಗುರಿದ್ದಕ್ಕೆ ನಾನು ಕರ್ತನ ನಿವಿುತ್ತ ಬಹಳವಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ನಿಜವಾಗಿ ಇರುತ್ತಿದ್ದರೂ ಇದುವರೆಗೆ ಅದರ ಪ್ರಕಾರ ಮಾಡುವದಕ್ಕೆ ಸಂದರ್ಭ ಸಿಕ್ಕಲಿಲ್ಲವೇನೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅಂತೂ ಕೊನೆಯದಾಗಿ ನನ್ನ ಬಗ್ಗೆ ನಿಮಗಿರುವ ಆಸಕ್ತಿಯು ಪುನಃ ಚಿಗುರಿದ್ದಕ್ಕಾಗಿ ಕರ್ತ ದೇವರಲ್ಲಿ ಬಹಳವಾಗಿ ಆನಂದಿಸುತ್ತೇನೆ. ನೀವು ನನ್ನ ಬಗ್ಗೆ ಆಸಕ್ತಿ ಮೊದಲಿನಿಂದ ಹೊಂದಿದ್ದರೂ ಅದನ್ನು ತೋರಿಸಲು ನಿಮಗೆ ಸೂಕ್ತ ಅವಕಾಶ ಸಿಕ್ಕಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅತ್ತಾ ತರಿಬಿ ಮಾಜ್ಯಾ ವಿಶಯಾತ್ ತುಮಿ ಚಿಂತುಲ್ಲ್ಯಾಸಿ ಮನುನ್ ದಾಕ್ವುನ್ ದಿಲ್ಲ್ಯಾಸಾಟ್ನಿ ಮಿಯಾ ಧನಿಯಾಕ್ಡೆ ಲೈ ಖುಶಿ ಹೊತಾ, ತುಮಿ ಹ್ಯಾ ವಿಶಯಾತ್ ಚಿಂತುನ್ ರ್‍ಹಾಲ್ಯಾರ್‍ಬಿ ತುಮ್ಕಾ ಅವಕಾಸ್ ಗಾವ್ಕ್ ನಸಲ್ಲೊ ಕಾಯ್ಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:10
11 ತಿಳಿವುಗಳ ಹೋಲಿಕೆ  

ನಾನು ನಿಮ್ಮಲ್ಲಿದ್ದಾಗ ನನ್ನ ಯಾವ ಕೊರತೆಯಲ್ಲಿಯೂ ನಿಮಗೆ ತೊಂದರೆ ಕೊಡಲಿಲ್ಲ. ಮಕೆದೋನಿಯದಿಂದ ಬಂದಿದ್ದ ಸಹೋದರರು ನನಗೆ ಬೇಕಾಗಿದ್ದದ್ದನ್ನೆಲ್ಲ ಕೊಟ್ಟರು. ನಾನು ನಿಮಗೆ ಯಾವ ರೀತಿಯಲ್ಲಿಯೂ ಭಾರವಾಗದಂತೆ ನೋಡಿಕೊಂಡೆನು. ಇನ್ನು ಮುಂದೆಯೂ ನಾನು ನಿಮಗೆ ಭಾರವಾಗಿರುವುದಿಲ್ಲ.


ದೇವರ ವಾಕ್ಯವನ್ನು ಕಲಿತುಕೊಳ್ಳುವವನು, (ತನಗೆ) ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಒಳ್ಳೆತನಗಳಲ್ಲಿ ಪಾಲು ಕೊಡತಕ್ಕದ್ದು.


ನಾನು ನಿಮ್ಮನ್ನು ಜ್ಞಾಪಿಸಿಕೊಂಡಾಗಲೆಲ್ಲಾ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.


ಯಾರಿಗಾದರೂ ಒಳ್ಳೆಯದನ್ನು ಮಾಡಲು ಅವಕಾಶವಿರುವಾಗ ನಾವು ಮಾಡಲೇಬೇಕು. ಅದರಲ್ಲೂ ಒಂದೇ ಕುಟುಂಬದವರಂತಿರುವ ವಿಶ್ವಾಸಿಗಳ ಬಗ್ಗೆ ನಾವು ವಿಶೇಷವಾದ ಗಮನ ಕೊಡಬೇಕು.


ಸತ್ಯವನ್ನು ಹೇಳುವುದರಿಂದಲೂ ದೇವರ ಶಕ್ತಿಯಿಂದಲೂ ತೋರ್ಪಡಿಸುತ್ತೇವೆ. ಪ್ರತಿಯೊಂದರ ವಿರೋಧವಾಗಿ ನಮ್ಮನ್ನು ಸಂರಕ್ಷಿಸಿಕೊಳ್ಳಲು ನಮ್ಮ ಒಳ್ಳೆಯ ಜೀವಿತವನ್ನೇ ಉಪಯೋಗಿಸುತ್ತೇವೆ.


ದಯವಿಟ್ಟು ನಮ್ಮನ್ನು ಮತ್ತೆ ಜೀವಿಸಮಾಡು! ನಿನ್ನ ಜನರನ್ನು ಸಂತೋಷಗೊಳಿಸು.


ಅವನು ಕ್ರಿಸ್ತನ ಕೆಲಸಕ್ಕಾಗಿ ಬಹುಮಟ್ಟಿಗೆ ತನ್ನ ಪ್ರಾಣವನ್ನೇ ಕೊಟ್ಟದ್ದರಿಂದ ಅವನಿಗೆ ಮಾನ್ಯತೆ ದೊರೆಯಬೇಕು. ನನಗೆ ಸಹಾಯಮಾಡಲು ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಈಡುಮಾಡಿಕೊಂಡನು. ಈ ರೀತಿಯ ಸಹಾಯ ಮಾಡಲು ನಿಮಗೆ ಸಾಧ್ಯವಾಗಲಿಲ್ಲ.


ಯೇಸು ಕ್ರಿಸ್ತನ ದಾಸರಾದ ಪೌಲನು ತಿಮೊಥೆಯನು ಫಿಲಿಪ್ಪಿಯವರಿಗೆ ಬರೆಯುವ ಪತ್ರ. ಯೇಸು ಕ್ರಿಸ್ತನ ಮೂಲಕ ದೇವರ ಪರಿಶುದ್ಧ ಜನರಾಗಿರುವವರಿಗೂ ಎಲ್ಲಾ ಹಿರಿಯರಿಗೂ ಸಭಾಸೇವಕರಿಗೂ ನಾವು ಈ ಪತ್ರವನ್ನು ಬರೆಯತ್ತಿದ್ದೇವೆ.


ಇಸ್ರೇಲಿನ ಜನರು ಮತ್ತೆ ನನ್ನ ಆಶ್ರಯದಲ್ಲಿ ವಾಸಿಸುವರು. ಧಾನ್ಯದ ಸಸಿಗಳಂತೆ ಬೆಳೆಯುವರು, ದ್ರಾಕ್ಷಾಲತೆಯಿಂದ ಚಿಗುರುವರು. ಲೆಬನೋನಿನ ದ್ರಾಕ್ಷಿಬಳ್ಳಿಯಂತೆ ಅವರು ಇರುವರು.”


ಹಿಜ್ಕೀಯನೂ ಪ್ರಧಾನರೂ ಜನರ ಕಾಣಿಕೆಯ ರಾಶಿಯನ್ನು ನೋಡಿ ಯೆಹೋವನಿಗೆ ಸ್ತೋತ್ರ ಮಾಡಿದರು ಮತ್ತು ಅದನ್ನು ಅರ್ಪಿಸಿದ ಜನರಿಗಾಗಿ ಸ್ತೋತ್ರ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು