ಫಿಲಿಪ್ಪಿಯವರಿಗೆ 4:7 - ಪರಿಶುದ್ದ ಬೈಬಲ್7 ದೇವಶಾಂತಿಯು ಕ್ರಿಸ್ತ ಯೇಸುವಿನಲ್ಲಿ ನಿಮ್ಮ ಹೃದಯಗಳನ್ನೂ ಮನಸ್ಸುಗಳನ್ನೂ ಕಾಯುವುದು. ದೇವರು ಕೊಡುವ ಆ ಶಾಂತಿಯು ನಾವು ಅರ್ಥಮಾಡಿಕೊಳ್ಳಲಾಗದಷ್ಟು ಅಗಮ್ಯವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಮನುಷ್ಯಗ್ರಹಿಕೆಗೂ ಮೀರಿದ ದೈವಶಾಂತಿಯು ನಿಮ್ಮ ಹೃನ್ಮನಗಳನ್ನು ಕ್ರಿಸ್ತೇಸುವಿನ ಅನ್ಯೋನ್ಯತೆಯಲ್ಲಿ ಸುರಕ್ಷಿತವಾಗಿ ಕಾಪಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವಶಾಂತಿಯು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಎಲ್ಲಾ ಗ್ರಹಿಕೆಯನ್ನೂ ಮೀರುವ ದೇವರ ಸಮಾಧಾನವು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತನ್ನಾ ತುಮಿ ಚಿಂತುನ್ ರಾಯ್ನಾಸಲ್ಯಾ ನಮನಿ ದೆವಾಚೆ ಶಾಂತ್ಪಾನ್ ತುಮ್ಚಿ ಮನಾ ಅನಿ ಕಾಳ್ಜಿ ಕ್ರಿಸ್ತ್ ಜೆಜು ವೈನಾ ರಾಕ್ತಾ. ಅಧ್ಯಾಯವನ್ನು ನೋಡಿ |
ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.
“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.