Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:12 - ಪರಿಶುದ್ದ ಬೈಬಲ್‌

12 ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ಕಳುಹಿಸುತ್ತಿದ್ದೇನೆ. ಅವನೊಂದಿಗೆ ನನ್ನ ಹೃದಯವನ್ನೇ ಕಳುಹಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನನಗೆ ಪ್ರಾಣ ಪ್ರಿಯನಂತಿರುವ ಅವನನ್ನು ನಿನ್ನ ಬಳಿಗೆ ಕಳುಹಿಸಿ ಕೊಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನನಗಂತೂ ಇವನು ಪ್ರಾಣದಂತಿದ್ದರೂ ಈಗ ನಿನ್ನ ಬಳಿಗೆ ಕಳುಹಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನು ನನಗೆ ಪ್ರಾಣದಂತಿದ್ದರೂ ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ಕಳುಹಿಸಿಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನನಗೆ ಪ್ರಾಣವಾಗಿರುವ ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ನಾನು ಕಳುಹಿಸಿ ಕೊಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತೆಕಾ ಮಿಯಾ ತುಜೆಕ್ಡೆ ಧಾಡುನ್ ದಿವ್ಕ್ ಲಾಗ್ಲಾ, ತಶೆ ಮಟ್ಲ್ಯಾರ್ ಮಾಜ್ಯಾ ಕಾಳ್ಜಾಚೊ ಎಕ್ ಇಸ್ಸೊಚ್ ತುಜೆಕ್ಡೆ ಧಾಡುನ್ ದಿವ್ಕ್ ಲಾಗ್ಲಾ ಮನುನ್ ಚಿಂತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:12
10 ತಿಳಿವುಗಳ ಹೋಲಿಕೆ  

ಒಬ್ಬರಿಗೊಬ್ಬರು ಕರುಣೆ ತೋರಿರಿ. ಒಬ್ಬರನ್ನೊಬ್ಬರು ಪ್ರೀತಿಸಿರಿ. ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆ ನೀವೂ ಒಬ್ಬರನ್ನೊಬ್ಬರು ಕ್ಷಮಿಸಿರಿ.


ಅಂತೆಯೇ ಅವನು ಹೊರಟು ತನ್ನ ತಂದೆಯ ಬಳಿಗೆ ಹೋದನು. “ಮಗನು ಇನ್ನೂ ಬಹುದೂರದಲ್ಲಿ ಬರುತ್ತಿರುವಾಗಲೇ ತಂದೆಯು ಅವನನ್ನು ಗುರುತಿಸಿ ಕನಿಕರದಿಂದ ಅವನ ಬಳಿಗೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು.


ನೀವು ಪ್ರಾರ್ಥಿಸಲು ಸಿದ್ಧರಾಗಿರುವಾಗ, ನೀವು ಇನ್ನೊಬ್ಬನ ವಿಷಯದಲ್ಲಿ ಯಾವುದೇ ಕಾರಣದಿಂದಾಗಲಿ ಕೋಪದಿಂದಿರುವುದು ನಿಮ್ಮ ನೆನಪಿಗೆ ಬಂದರೆ, ಅವನನ್ನು ಕ್ಷಮಿಸಿಬಿಡಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಪಾಪಗಳನ್ನು ಕ್ಷಮಿಸುವನು” ಎಂದು ಉತ್ತರಿಸಿದನು.


ಯೆಹೋವನು ಹೀಗೆನ್ನುತ್ತಾನೆ: “ಎಫ್ರಾಯೀಮ್ ನನ್ನ ಪ್ರೀತಿಯ ಮಗನೆಂಬುದು ನೀನು ಬಲ್ಲೆ. ನಾನು ಆ ಮಗುವನ್ನು ಪ್ರೀತಿಸುತ್ತೇನೆ. ಹೌದು, ನಾನು ಹಲವು ಸಲ ಎಫ್ರಾಯೀಮನ ವಿರುದ್ಧವಾಗಿ ಮಾತನಾಡುತ್ತೇನೆ. ಆದಾಗ್ಯೂ ನಾನು ಅವನನ್ನು ಜ್ಞಾಪಿಸಿಕೊಳ್ಳುತ್ತೇನೆ. ನಾನು ಅವನನ್ನು ತುಂಬಾ ಪ್ರೀತಿಸುತ್ತೇನೆ. ನಾನು ನಿಜವಾಗಿಯೂ ಅವನನ್ನು ಸಂತೈಸಬಯಸುತ್ತೇನೆ.” ಇದು ಯೆಹೋವನ ನುಡಿ.


ದಾವೀದನು ಅಬೀಷೈಗೆ ಮತ್ತು ತನ್ನ ಎಲ್ಲಾ ಸೇವಕರಿಗೆ, “ನೋಡಿ, ನನ್ನ ಸ್ವಂತ ಮಗನೇ ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾನೆ. ಬೆನ್ಯಾಮೀನ್ ಕುಲದ ಇವನು ನನ್ನನ್ನು ಶಪಿಸುವುದು ಯಾವ ದೊಡ್ಡ ಮಾತು; ಅವನು ನನ್ನನ್ನು ಶಪಿಸುತ್ತಲೇ ಇರಲಿ. ಹೀಗೆ ಮಾಡುವಂತೆ ಯೆಹೋವನೇ ಅವನಿಗೆ ತಿಳಿಸಿದ್ದಾನೆ.


“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.


ಹಿಂದೆ ಅವನು ನಿನಗೆ ನಿಷ್ಪ್ರಯೋಜಕನಾಗಿದ್ದನು. ಆದರೆ ಈಗ ಅವನು ನಿನಗೂ ನನಗೂ ಪ್ರಯೋಜನ ಉಳ್ಳವನಾಗಿದ್ದಾನೆ.


ನಾನೀಗ ಸುವಾರ್ತೆಗೋಸ್ಕರ ಸೆರೆಯಲ್ಲಿರುವಾಗ ನನ್ನ ಸಹಾಯಕ್ಕೆ ಅವನನ್ನು ಇರಿಸಿಕೊಳ್ಳಬೇಕೆಂದಿದ್ದೆನು. ಇಲ್ಲಿ ಅವನು ನನಗೆ ಸಹಾಯ ಮಾಡುತ್ತಾ ನಿನ್ನ ಸೇವೆಯನ್ನೂ ಮಾಡಬಹುದಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು