ನಿಮ್ಮೆಲ್ಲರ ವಿಷಯದಲ್ಲಿ ಈ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.
ಅವನು ಕ್ರಿಸ್ತನ ಕೆಲಸಕ್ಕಾಗಿ ಬಹುಮಟ್ಟಿಗೆ ತನ್ನ ಪ್ರಾಣವನ್ನೇ ಕೊಟ್ಟದ್ದರಿಂದ ಅವನಿಗೆ ಮಾನ್ಯತೆ ದೊರೆಯಬೇಕು. ನನಗೆ ಸಹಾಯಮಾಡಲು ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಈಡುಮಾಡಿಕೊಂಡನು. ಈ ರೀತಿಯ ಸಹಾಯ ಮಾಡಲು ನಿಮಗೆ ಸಾಧ್ಯವಾಗಲಿಲ್ಲ.
ನಾನು ಪ್ರಭುವಿಗೆ ಸೇರಿದವನಾದ್ದರಿಂದ ಸೆರೆಯಲ್ಲಿದ್ದೇನೆ. ನೀವು ದೇವರಿಂದ ಕರಯಲ್ಪಟ್ಟಿದ್ದೀರಿ. ಆದ್ದರಿಂದ ನಿಮ್ಮ ಕರೆಯುವಿಕೆಗೆ ತಕ್ಕಂತೆ ಯೋಗ್ಯವಾಗಿ ಜೀವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.