ಫಿಲೆಮೋನನಿಗೆ 1:17 - ಪರಿಶುದ್ದ ಬೈಬಲ್17 ನನ್ನನ್ನು ನಿನ್ನ ಸಹಭಾಗಿಯೆಂದು ನೀನು ಒಪ್ಪಿಕೊಳ್ಳುವುದಾದರೆ, ಒನೇಸಿಮನನ್ನು ಮತ್ತೆ ಸೇರಿಸಿಕೊ. ನೀನು ನನ್ನನ್ನು ಬರಮಾಡಿಕೊಂಡಂತೆ ಅವನನ್ನೂ ಬರಮಾಡಿಕೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೀನು ನನ್ನನ್ನು ಜೊತೆಗಾರನೆಂದು ಭಾವಿಸುವುದಾದರೆ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆದ್ದರಿಂದ ಕ್ರಿಸ್ತಯೇಸುವಿನಲ್ಲಿ ನಿನಗೂ ನನಗೂ ಅನ್ಯೋನ್ಯತೆ ಇದೆಯೆಂದು ನೀನು ಪರಿಗಣಿಸುವುದಾದರೆ ನನ್ನನ್ನು ಹೇಗೆ ಸ್ವಾಗತಿಸುತ್ತಿದ್ದೆಯೋ ಹಾಗೆಯೇ ಇವನನ್ನು ಸ್ವಾಗತಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹಾಗಾದರೆ ನೀನು ನನ್ನನ್ನು ಜೊತೆಗಾರನೆಂದು ಎಣಿಸಿದರೆ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದಕಾರಣ ನಾನು ನಿನಗೆ ಅನ್ಯೋನ್ಯತೆವುಳ್ಳವನೆಂದು ನೀನು ಎಣಿಸುವುದಾದರೆ ನನ್ನನ್ನು ಸ್ವೀಕರಿಸಿಕೊಳ್ಳುವ ಪ್ರಕಾರವೇ ಅವನನ್ನು ಸ್ವೀಕರಿಸು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಎಕುಚ್ ಎಕ್ ವಿಶ್ವಾಸಾತ್ ಮಿಯಾ ತುಜೊ ವಾಂಗ್ಡಿ ಮನುನ್ ತಿಯಾ ಚಿಂತ್ತೆ, ತರ್ ಮಾಕಾ ಕಸೆ ತಿಯಾ ಸ್ವಾಗತ್ ಕರ್ತೆ, ತಸೆಚ್ ತೆಕಾಬಿ ಸ್ವಾಗತ್ ಕರ್. ಅಧ್ಯಾಯವನ್ನು ನೋಡಿ |
ಕೆಲವರಿಗೆ ವಿಶ್ವಾಸಿಗಳಾದ ಯಜಮಾನರಿದ್ದಾರೆ. ಆದ್ದರಿಂದ ಆ ಗುಲಾಮರು ಮತ್ತು ಯಜಮಾನರು ಸಹೋದರರಾಗಿದ್ದಾರೆ. ಆದರೆ ಅವರು ತಮ್ಮ ಯಜಮಾನರಿಗೆ ಕಡಿಮೆ ಗೌರವ ಕೊಡದೆ ತಮ್ಮ ಯಜಮಾನರ ಸೇವೆಯನ್ನು ಇನ್ನೂ ಉತ್ತಮವಾಗಿ ಮಾಡಬೇಕು. ಏಕೆಂದರೆ ಅವರು ಒಳ್ಳೆಯ ಕೆಲಸಗಳಿಗಾಗಿ ತಮ್ಮನ್ನು ಪ್ರತಿಷ್ಠಿಸಿಕೊಳ್ಳುವ ವಿಶ್ವಾಸಿಗಳಾಗಿದ್ದಾರೆ ಮತ್ತು ಸ್ನೇಹಿತರಾಗಿದ್ದಾರೆ. ಈ ಕಾರ್ಯಗಳನ್ನು ಮಾಡುವಂತೆ ನೀನು ಜನರಿಗೆ ಉಪದೇಶಿಸಬೇಕು ಮತ್ತು ತಿಳಿಸಬೇಕು.
ನಿಮ್ಮೆಲ್ಲರ ವಿಷಯದಲ್ಲಿ ಈ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.