Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:19 - ಪರಿಶುದ್ದ ಬೈಬಲ್‌

19 ಪೌಲನಾದ ನಾನು ನನ್ನ ಸ್ವಂತ ಕೈಗಳಿಂದ ಇದನ್ನು ಬರೆಯುತ್ತಿದ್ದೇನೆ. ಒನೇಸಿಮನು ನಿನಗೆ ಏನಾದರೂ ಕೊಡಬೇಕಾಗಿದ್ದರೆ ನಾನು ಅದನ್ನು ಕೊಡುತ್ತೇನೆ. ನಿನ್ನ ಆತ್ಮಿಕ ಜೀವಿತದ ವಿಷಯದಲ್ಲಿ ನೀನು ನಿನಗೆ ನನಗೆಷ್ಟು ಋಣಿಯಾಗಿರುವೆ ಎಂದು ನಾನೇನೂ ಹೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನೇ ನನಗೆ ಹೊಣೆಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದನ್ನು ಪೌಲನೆಂಬ ನಾನೇ ಕೊಟ್ಟು ತೀರಿಸುತ್ತೇನೆ ಎಂದು ನನ್ನ ಹಸ್ತಾಕ್ಷರದಲ್ಲೇ ಬರೆದುಕೊಡುತ್ತಿದ್ದೇನೆ. ಆದರೆ ಈಗ ನೀನು ಏನಾಗಿದ್ದೀಯೋ ಅದು ನನ್ನಿಂದಲೇ. ಹೀಗೆ ನೀನೇ ನನಗೆ ಸಾಲಗಾರನಾಗಿದ್ದೀ ಎಂದು ನಾನು ಹೇಳಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನೇ ನನ್ನ ಸಾಲದಲ್ಲಿದ್ದೀ ಎಂದು ನಾನು ಬೇರೆ ಹೇಳಬೇಕೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ನನ್ನ ಸ್ವಂತ ಕೈಯಲ್ಲಿ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನು ನಿನ್ನ ಪ್ರಾಣವನ್ನೇ ನನಗೆ ಸಾಲಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮಿಯಾ ಪಾವ್ಲು ಖುದ್ದ್ ಮಾಜ್ಯಾ ಹಾತಿನ್ ಲಿವ್ತಾ, ತುಜೆ ರಿನ್ ಮಿಯಾ ಫಾರಿಕ್ ಕರ್ತಾ, ತುಜ್ಯಾ ಜಿವಾಕುಚ್ ತಿಯಾ ಮಾಜೆಸಾಟ್ನಿ ಎಕ್ ಉಪ್ಕಾರಾತ್ ಥವಲ್ಲೆ ಹಾಯ್ ಮನುನ್ ಯಾದ್ ಕರುನ್ ದಿತಲೆ ನಕ್ಕೊ ಮನುನ್ ಮಾಕಾ ದಿಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:19
14 ತಿಳಿವುಗಳ ಹೋಲಿಕೆ  

ಇದನ್ನು ನಾನೇ ಕೈಯಾರೆ ಬರೆಯುತ್ತಿದ್ದೇನೆ. ನಾನು ಎಷ್ಟು ದೊಡ್ಡ ಅಕ್ಷರಗಳಲ್ಲಿ ಬರೆಯುತ್ತಿದ್ದೇನೆಂಬುದನ್ನು ನೋಡಿರಿ.


ಕೇಳಿ, ನಾನೇ ಪೌಲನು. ನೀವು ಸುನ್ನತಿ ಮಾಡಿಸಿಕೊಂಡು ಧರ್ಮಶಾಸ್ತ್ರಕ್ಕೆ ಹಿಂತಿರುಗಿಕೊಳ್ಳುವುದಾದರೆ ಕ್ರಿಸ್ತನಿಂದ ನಿಮಗೇನೂ ಪ್ರಯೋಜನವಿಲ್ಲ.


ನಿಮಗೆ ಕ್ರಿಸ್ತನಲ್ಲಿ ಹತ್ತುಸಾವಿರ ಮಂದಿ ಉಪದೇಶಕರಿರಬಹುದು, ಆದರೆ ಬಹು ಮಂದಿ ತಂದೆಗಳು ಇಲ್ಲ. ಸುವಾರ್ತೆಯ ಮೂಲಕವಾಗಿ ಕ್ರಿಸ್ತ ಯೇಸುವಿನಲ್ಲಿ ನಾನೇ ನಿಮಗೆ ಆತ್ಮಿಕ ತಂದೆಯಾಗಿದ್ದೇನೆ.


ನಾನು ಈ ಪತ್ರವನ್ನು ತೀತನಿಗೆ ಬರೆಯುತ್ತಿದ್ದೇನೆ. ನಮ್ಮೆಲ್ಲರ ನಂಬಿಕೆಯ ಸಂಬಂಧದಲ್ಲಿ ನೀನು ನನಗೆ ನಿಜವಾದ ಮಗನಂತಿರುವೆ. ನಮ್ಮ ತಂದೆಯಾದ ದೇವರಿಂದಲೂ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಶಾಂತಿಯೂ ಲಭಿಸಲಿ.


ನೀನು ನಂಬಿಕೆ ಉಳ್ಳವನಾಗಿರುವುದರಿಂದ ನನಗೆ ನಿಜವಾದ ಮಗನಂತಿರುವೆ. ತಂದೆಯಾದ ದೇವರಿಂದ ಮತ್ತು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಿಂದ ಕೃಪೆಯೂ ಕರುಣೆಯೂ ಶಾಂತಿಯೂ ನಿನಗೆ ಲಭಿಸಲಿ.


ಸ್ವತಃ ನೀವೇ ನಮಗೆ ಯೋಗ್ಯತಾಪತ್ರವಾಗಿದ್ದೀರಿ. ಆ ಪತ್ರಗಳು ನಮ್ಮ ಹೃದಯಗಳಲ್ಲಿ ಬರೆಯಲ್ಪಟ್ಟಿವೆ. ಆ ಪತ್ರವನ್ನು ಎಲ್ಲರೂ ಬಲ್ಲರು, ಎಲ್ಲರೂ ಓದುತ್ತಾರೆ.


ಅವನು ಸುರಕ್ಷಿತವಾಗಿರುವಂತೆ ನಾನು ನೋಡಿಕೊಳ್ಳುವೆನು. ನಾನು ಅವನಿಗೆ ಜವಾಬ್ದಾರನಾಗಿರುತ್ತೇನೆ. ನಾನು ಅವನನ್ನು ನಿನ್ನ ಬಳಿಗೆ ಮತ್ತೆ ಕರೆದುಕೊಂಡು ಬರದಿದ್ದರೆ, ನೀನು ಸದಾಕಾಲ ನನ್ನನ್ನು ದೂಷಿಸಬಹುದು.


ಪೌಲನು ಹೇಳುತ್ತಿರುವ ಸಂಗತಿಗಳನ್ನು ಬರೆಯುತ್ತಿರುವ ತೆರ್ತ್ಯೆನೆಂಬ ನಾನು ನಿಮ್ಮನ್ನು ಪ್ರಭುವಿನಲ್ಲಿ ವಂದಿಸುತ್ತೇನೆ.


ಒಂದುವೇಳೆ ಮಕೆದೋನಿಯದ ಜನರಲ್ಲಿ ಯಾರಾದರೂ ನನ್ನೊಂದಿಗೆ ಬಂದಾಗ ನೀವು ಸಿದ್ಧರಾಗಿಲ್ಲದಿದ್ದರೆ ನಾವು ನಾಚಿಕೆಗೆ ಗುರಿಯಾಗುತ್ತೇವೆ. ನಿಮ್ಮ ವಿಷಯದಲ್ಲಿ ನಾವು ಬಹಳ ಭರವಸೆ ಇಟ್ಟಿದ್ದರಿಂದ ನಾವು ನಾಚಿಕೆಗೆ ಗುರಿಯಾಗುವೆವು (ಮತ್ತು ನೀವೂ ಸಹ ನಾಚಿಕೆಗೆ ಗುರಿಯಾಗುವಿರಿ.)


ಪೌಲನಾದ ನಾನು ಕ್ರಿಸ್ತನ ಮೃದುಸ್ವಭಾವದಿಂದಲೂ ಕನಿಕರದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ. ನಾನು ನಿಮ್ಮೊಂದಿಗಿರುವಾಗ ದೀನನಾಗಿರುತ್ತೇನೆಂದೂ, ನಿಮ್ಮಿಂದ ದೂರದಲ್ಲಿರುವಾಗ ಧೀರನಾಗಿರುತ್ತೇನೆಂದೂ ಕೆಲವರು ಹೇಳುತ್ತಾರೆ.


ಅವನು ನಿನಗೇನಾದರೂ ತಪ್ಪು ಮಾಡಿದ್ದರೆ ಅದನ್ನು ನನ್ನ ಮೇಲೆ ಹೊರಿಸು; ನಿನಗೇನಾದರೂ ಕೊಡಬೇಕಿದ್ದರೆ, ಅದನ್ನು ನನ್ನ ಲೆಕ್ಕಕ್ಕೆ ಹಾಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು