Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:2 - ಪರಿಶುದ್ದ ಬೈಬಲ್‌

2 ಸಹೋದರಿಯಾದ ಅಪ್ಫಿಯಳಿಗೆ, ನಮ್ಮ ಜೊತೆಸೈನಿಕನಾದ ಅರ್ಖಿಪ್ಪನಿಗೆ ಮತ್ತು ಫಿಲೆಮೋನನ ಮನೆಯಲ್ಲಿ ಸೇರಿಬರುವ ಸಭೆಯವರೆಲ್ಲರಿಗೆ ಬರೆಯುವ ಪತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮತ್ತು ಸಹೋದರಿಯಾದ ಅಪ್ಫಿಯಳಿಗೂ, ನಮ್ಮ ಸಹ ಹೋರಾಟಗಾರನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ಬರೆಯುವುದೇನಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸಹೋದರಿಯಾದ ಅಪ್ಫಿಯಳಿಗೂ ನಮ್ಮ ಸಹಭಟನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಕೂಡುವ ಸಭೆಯವರಿಗೂ ಬರೆಯುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಸಹೋದರಿ ಅಪ್ಫಿಯಳಿಗೂ ನಮ್ಮ ಸಹ ಸೈನಿಕನಾದ ಅರ್ಖಿಪ್ಪನಿಗೂ ನಿಮ್ಮ ಮನೆಯಲ್ಲಿ ಸೇರುವ ಸಭೆಯವರಿಗೂ ಬರೆಯುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅನಿ ತುಮ್ಚ್ಯಾ ಘರಾತ್ ಜಮ್ತಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಅನಿ ಅಪ್ಫಿಯಾ ಅಮ್ಚ್ಯಾ ಭೆನಿಕ್ ,ಅನಿ ಅಮ್ಚ್ಯಾ ವಾಂಗುಡ್ಚ್ಯಾ ಸೈನಿಕಾಕ್ ಅರ್ಕಿಪ್ಪಾಕ್ ಲಿವ್ತಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:2
7 ತಿಳಿವುಗಳ ಹೋಲಿಕೆ  

ಅರ್ಖಿಪ್ಪನಿಗೆ, “ಪ್ರಭುವು ನಿನಗೆ ವಹಿಸಿರುವ ಸೇವೆಯನ್ನು ಖಂಡಿತವಾಗಿ ನೆರವೇರಿಸಬೇಕು” ಎಂದು ತಿಳಿಸಿರಿ.


ಎಪಫ್ರೊದೀತನು ಕ್ರಿಸ್ತನಲ್ಲಿ ನನ್ನ ಸಹೋದರನಾಗಿದ್ದಾನೆ. ಕ್ರಿಸ್ತನ ಸೈನ್ಯದಲ್ಲಿ ಅವನು ನನ್ನೊಂದಿಗೆ ಕೆಲಸ ಮಾಡುತ್ತಿದ್ದಾನೆ ಮತ್ತು ಸೇವೆ ಮಾಡುತ್ತಿದ್ದಾನೆ. ನನಗೆ ಸಹಾಯಬೇಕಿದ್ದಾಗ, ನೀವು ಅವನನ್ನು ನನ್ನ ಬಳಿಗೆ ಕಳುಹಿಸಿಕೊಟ್ಟಿರಿ. ಈಗ ನಾನು ಅವನನ್ನು ನಿಮ್ಮ ಬಳಿಗೆ ಮತ್ತೆ ಕಳುಹಿಸಬೇಕೆಂದಿದ್ದೇನೆ.


ಅಲ್ಲದೆ ಅವರ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ನನ್ನ ವಂದನೆಗಳನ್ನು ತಿಳಿಸಿರಿ. ನನ್ನ ಪ್ರಿಯ ಸ್ನೇಹಿತನಾದ ಎಪೈನೆತನಿಗೆ ನನ್ನ ವಂದನೆ ತಿಳಿಸಿರಿ. ಏಷ್ಯಾದಲ್ಲಿ ಕ್ರಿಸ್ತನನ್ನು ಹಿಂಬಾಲಿಸಿದವರಲ್ಲಿ ಅವನೇ ಮೊಟ್ಟಮೊದಲನೆಯವನಾಗಿದ್ದಾನೆ.


ಲವೊದಿಕೀಯದಲ್ಲಿರುವ ಸಹೋದರ ಸಹೋದರಿಯರಿಗೆ ವಂದನೆಗಳನ್ನು ತಿಳಿಸಿರಿ. ನುಂಫಳಿಗೂ ಅವಳ ಮನೆಯಲ್ಲಿ ಸೇರುವ ಸಭೆಯವರಿಗೂ ವಂದನೆಗಳನ್ನು ತಿಳಿಸಿರಿ.


ಏಷ್ಯಾದ ಸಭೆಗಳವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. ಅಕ್ವಿಲನು ಮತ್ತು ಪ್ರಿಸ್ಕಿಲ್ಲಳು ಪ್ರಭುವಿನ ಹೆಸರಿನಲ್ಲಿ ನಿಮಗೆ ಬಹಳ ವಂದನೆಗಳನ್ನು ತಿಳಿಸಿದ್ದಾರೆ. ಅವರ ಮನೆಯಲ್ಲಿ ಸೇರಿಬರುವ ಸಭೆಯವರು ಸಹ ನಿಮಗೆ ವಂದನೆ ತಿಳಿಸಿದ್ದಾರೆ.


ಕ್ರಿಸ್ತನಲ್ಲಿ ನಮ್ಮ ಸಹೋದರಿಯಾದ ಪೊಯಿಬೆಯನ್ನು ನಾನು ನಿಮಗೆ ಶಿಫಾರಸು ಮಾಡಲಿಚ್ಛಿಸುತ್ತೇನೆ. ಈಕೆಯು ಕೆಂಕ್ರೆಯ ಪಟ್ಟಣದ ಸಭೆಯಲ್ಲಿ ವಿಶೇಷ ಸಹಾಯಕಳಾಗಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು