Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:20 - ಪರಿಶುದ್ದ ಬೈಬಲ್‌

20 ನನ್ನ ಸಹೋದರನೇ, ಪ್ರಭುವಿನಲ್ಲಿ ನಾನು ನಿನ್ನಿಂದ ಒಂದು ಸಹಾಯವನ್ನು ಹೊಂದಿಕೊಳ್ಳಬಹುದೇ? ಅದೇನೆಂದರೆ ನೀನು ನನ್ನ ಹೃದಯವನ್ನು ಕ್ರಿಸ್ತನಲ್ಲಿ ಸಂತೈಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹೌದು, ಸಹೋದರನೇ, ಕರ್ತನಲ್ಲಿ ನಿನ್ನಿಂದ ನನಗೆ ಪ್ರಯೋಜನವಾಗುವಂತೆ ಮಾಡು. ಕ್ರಿಸ್ತನಲ್ಲಿ ನನ್ನ ಹೃದಯವನ್ನು ಉಲ್ಲಾಸಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹೌದು, ಪ್ರಿಯ ಸಹೋದರನೇ, ಪ್ರಭುವಿನ ಹೆಸರಿನಲ್ಲಿ ಇದೊಂದು ಉಪಕಾರವನ್ನು ನನಗೆ ಮಾಡಿಕೊಡು; ಕ್ರಿಸ್ತಯೇಸುವಿನಲ್ಲಿ ನನ್ನ ಹೃದಯ ಆನಂದಿಸುವಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹೌದು, ಸಹೋದರನೇ, ಕರ್ತನಲ್ಲಿ ನಿನ್ನಿಂದ ನನಗೆ ಪ್ರಯೋಜನವಾಗುವ ಹಾಗೆ ಮಾಡು; ಕ್ರಿಸ್ತನಲ್ಲಿ ನನ್ನ ಹೃದಯವನ್ನು ಸಂತೋಷಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಸಹೋದರನೇ ಹೌದು, ಕರ್ತ ಯೇಸುವಿನಲ್ಲಿ ನಿನ್ನಿಂದ ನನಗೆ ಈ ಸಹಾಯಮಾಡು; ಅದು ಕ್ರಿಸ್ತ ಯೇಸುವಿನಲ್ಲಿ ನನ್ನ ಹೃದಯವನ್ನು ಉತ್ತೇಜನಗೊಳಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಬಗ್ ಮಾಜ್ಯಾ ಭಾವಾ, ಧನಿಯಾಸಾಟ್ನಿ ತಿಯಾಚ್ ಮಾಜ್ಯಾ ಉಪ್ಕಾರಾಕ್ ಪಡಲ್ಲೊ ಹೊವ್ಚೆ ಮನ್ತಲಿ ಮಾಜಿ ಆಶಾ, ತಸೆ ಹೊವ್ನ್ ಕ್ರಿಸ್ತಾತ್ ಮಾಜೊ ಮನ್ ಸಮಾದಾನಾನ್ ಭರಿ ಸಾರ್ಕೊ ಕರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:20
14 ತಿಳಿವುಗಳ ಹೋಲಿಕೆ  

ನನ್ನ ಮಕ್ಕಳು ಸತ್ಯಮಾರ್ಗದಲ್ಲಿ ನಡೆಯುತ್ತಿದ್ದಾರೆ ಎಂಬುದನ್ನು ಕೇಳುವಾಗಲೆಲ್ಲಾ ನನಗೆ ಬಹಳ ಸಂತೋಷವಾಗುತ್ತದೆ.


ನನ್ನ ಸಹೋದರನೇ, ದೇವಜನರಿಗೆ ನೀನು ಪ್ರೀತಿಯನ್ನು ತೋರಿಸಿ ಅವರ ಹೃದಯಗಳನ್ನು ಸಂತೈಸಿರುವೆ. ಇದು ನನಗೆ ಹೆಚ್ಚಿನ ಸಂತಸವನ್ನೂ ನೆಮ್ಮದಿಯನ್ನೂ ತಂದುಕೊಟ್ಟಿದೆ.


ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ಕಳುಹಿಸುತ್ತಿದ್ದೇನೆ. ಅವನೊಂದಿಗೆ ನನ್ನ ಹೃದಯವನ್ನೇ ಕಳುಹಿಸುತ್ತಿದ್ದೇನೆ.


ಈ ಲೋಕದ ಐಶ್ವರ್ಯವನ್ನು ಹೊಂದಿರುವ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿದರೂ ಸಹಾಯ ಮಾಡದೆ ಹೋದರೆ, ಅವನಲ್ಲಿ ದೇವರ ಪ್ರೀತಿಯು ನೆಲೆಗೊಂಡಿಲ್ಲ. ಅವನೇಕೆ ಸಹಾಯ ಮಾಡಲಿಲ್ಲ? ಏಕೆಂದರೆ ಅವನ ಹೃದಯದಲ್ಲಿ ದೇವರ ಮೇಲೆ ಪ್ರೀತಿಯೇ ಇಲ್ಲ.


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ ಮತ್ತು ಅವರ ಅಧಿಕಾರದ ಅಧೀನದಲ್ಲಿರಿ. ಅವರೇ ನಿಮಗೆ ಜವಾಬ್ದಾರರು. ಅವರು ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಈ ಕಾರ್ಯವನ್ನು ವ್ಯಸನದಿಂದ ಮಾಡದೆ ಸಂತೋಷದಿಂದ ಮಾಡಲು ಸಾಧ್ಯವಾಗುವಂತೆ ಅವರಿಗೆ ವಿಧೇಯರಾಗಿರಿ. ಅವರ ಕಾರ್ಯವನ್ನು ಕಷ್ಟಕರವನ್ನಾಗಿ ಮಾಡುವುದರಿಂದ ನಿಮಗೇನೂ ಪ್ರಯೋಜನವಿಲ್ಲ.


ನನ್ನ ಸಹೋದರ ಸಹೋದರಿಯರೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆ ಮತ್ತು ನಿಮ್ಮನ್ನು ನೋಡಬಯಸುತ್ತೇನೆ. ನೀವು ನನಗೆ ಆನಂದವನ್ನು ಉಂಟುಮಾಡಿ, ನಿಮ್ಮ ವಿಷಯದಲ್ಲಿ ನಾನು ಹೆಮ್ಮಪಡುವಂತೆ ಮಾಡಿದ್ದೀರಿ. ನಾನು ನಿಮಗೆ ಹೇಳಿದಂತೆ ಪ್ರಭುವನ್ನು ಅನುಸರಿಸಿರಿ.


ನಾನು ನಿಮ್ಮನ್ನು ನೋಡಲು ಬಹು ತವಕಪಡುತ್ತಿದ್ದೇನೆಂಬುದು ದೇವರಿಗೆ ಗೊತ್ತಿದೆ. ಯೇಸು ಕ್ರಿಸ್ತನಿಂದ ತೋರಿಬಂದ ಪ್ರೀತಿಯಿಂದ ನಾನು ನಿಮ್ಮೆಲ್ಲರನ್ನು ಪ್ರೀತಿಸುತ್ತೇನೆ.


ಆದ್ದರಿಂದಲೇ ನಮಗೆ ಆದರಣೆಯಾಯಿತು. ತೀತನು ಬಹು ಸಂತೋಷವಾಗಿರುವುದನ್ನು ಕಂಡು ನಮಗೆ ಮತ್ತಷ್ಟು ಸಂತೋಷವಾಯಿತು. ನೀವೆಲ್ಲರೂ ಅವನನ್ನು ಸಂತೋಷಗೊಳಿಸಿದಿರಿ.


ನಾನು ನಿಮ್ಮನ್ನು ದುಃಖಗೊಳಿಸಿದರೆ, ನನ್ನನ್ನು ಸಂತೋಷಗೊಳಿಸುವವರು ಯಾರು? ನನ್ನಿಂದ ದುಃಖಿತರಾದ ನೀವು ಮಾತ್ರ ನನ್ನನ್ನು ಸಂತೋಷಪಡಿಸಬಲ್ಲಿರಿ.


ಅವರು ನನ್ನ ಆತ್ಮಕ್ಕೂ ನಿಮ್ಮ ಆತ್ಮಗಳಿಗೂ ವಿಶ್ರಾಂತಿಯನ್ನು ಕೊಟ್ಟಿದ್ದಾರೆ. ಇಂಥ ಜನರ ಮೌಲ್ಯವನ್ನು ನೀವು ಗುರುತಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು