ಫಿಲೆಮೋನನಿಗೆ 1:22 - ಪರಿಶುದ್ದ ಬೈಬಲ್22 ನಾನು ಇಳಿದುಕೊಳ್ಳಲು ಒಂದು ಕೊಠಡಿಯನ್ನು ದಯವಿಟ್ಟು ಸಿದ್ಧಗೊಳಿಸು. ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿ ನನ್ನನ್ನು ನಿಮ್ಮ ಬಳಿಗೆ ಬರಲು ಅವಕಾಶ ನೀಡುವನೆಂಬ ಭರವಸೆ ನನಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇದಲ್ಲದೆ ದೇವರು ನಿಮ್ಮ ಪ್ರಾರ್ಥನೆಗಳನ್ನು ಕೇಳಿ ನಾನು ನಿಮ್ಮ ಬಳಿಗೆ ಬರುವುದಕ್ಕೆ ಕೃಪೆ ಮಾಡುವನೆಂಬ ನಿರೀಕ್ಷೆ ನನಗುಂಟು. ಆದಕಾರಣ ನಾನು ಉಳಿದುಕೊಳ್ಳಲು ಒಂದು ಕೊಠಡಿಯನ್ನು ಸಿದ್ಧಪಡಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಇದಲ್ಲದೆ, ನಿಮ್ಮೆಲ್ಲರ ಪ್ರಾರ್ಥನೆಗಳ ಫಲವಾಗಿ ದೇವರು ನನ್ನನ್ನು ಇಲ್ಲಿಂದ ಬಿಡುಗಡೆ ಮಾಡಿ ನಿಮ್ಮ ಬಳಿಗೆ ಕಳುಹಿಸುವರು ಎಂಬ ನಂಬಿಕೆ ನನಗಿದೆ. ಆದ್ದರಿಂದ ನನಗಾಗಿ ಒಂದು ಅತಿಥಿ ಕೊಠಡಿಯನ್ನು ಸಿದ್ಧಪಡಿಸಿಟ್ಟುಕೊಂಡಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇದಲ್ಲದೆ ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿ ನನ್ನನ್ನು ನಿಮ್ಮ ಬಳಿಗೆ ಬರುವದಕ್ಕೆ ಅನುಗ್ರಹಿಸುವನೆಂದು ನನಗೆ ನಿರೀಕ್ಷೆ ಉಂಟು. ಆದಕಾರಣ ನನಗೋಸ್ಕರ ಇಳುಕೊಳ್ಳುವ ಸ್ಥಳವನ್ನು ಸಿದ್ಧಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಇದಲ್ಲದೆ: ನಿಮ್ಮ ಪ್ರಾರ್ಥನೆಯ ದೆಸೆಯಿಂದ ನಾನು ಪುನಃ ನಿಮ್ಮ ಬಳಿಗೆ ಬರುತ್ತೇನೆಂದು ನನಗೆ ನಿರೀಕ್ಷೆ ಇರುವುದು. ಆದಕಾರಣ ನನಗಾಗಿ ಒಂದು ಅತಿಥಿ ಕೊಠಡಿಯನ್ನು ಸಿದ್ಧಮಾಡು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತಸೆಚ್ ಅನಿಎಕ್ ಉಪ್ಕಾರ್ಬಿ ಮಿಯಾ ತುಜೆಕ್ಡೆ ಮಾಗ್ತಾ ಮಾಕಾ ರ್‍ಹಾವ್ನ್ ಎಕ್ ಜಾಗೊ ತಯಾರ್ ಕರುನ್ ಥವ್; ತುಜ್ಯಾ ಮಾಗ್ನಿ ವೈನಾ ದೆವ್ ಮಾಕಾ ಸುಟ್ಕಾ ದಿವ್ನ್ ತುಮ್ಚೆಕ್ಡೆ ಘೆವ್ನ್ ಯೆತಾ ಮನುನ್ ಮಿಯಾ ಬರೊಸೊ ಕರ್ತಾ. ಅಧ್ಯಾಯವನ್ನು ನೋಡಿ |
ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.