Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:5 - ಪರಿಶುದ್ದ ಬೈಬಲ್‌

5 ದೇವರ ಪರಿಶುದ್ಧ ಜನರ ಮೇಲೆ ನಿನಗಿರುವ ಪ್ರೀತಿಯನ್ನು ಮತ್ತು ಪ್ರಭುವಾದ ಯೇಸುವಿನಲ್ಲಿ ನಿನಗಿರುವ ನಂಬಿಕೆಯನ್ನು ಕೇಳಿದ್ದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ನೆನಪು ಮಾಡಿಕೊಂಡು ನಾನು ದೇವರಿಗೆ ಸ್ತೋತ್ರವನ್ನು ಸಲ್ಲಿಸುತ್ತೇನೆ, ನಿನಗಾಗಿ ವಿಜ್ಞಾಪನೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಏಕೆಂದರೆ, ಪ್ರಭು ಯೇಸುವಿನಲ್ಲೂ ದೇವಜನರೆಲ್ಲರಲ್ಲೂ ನಿನಗಿರುವ ಪ್ರೀತಿವಿಶ್ವಾಸದ ಬಗ್ಗೆ ನಾನು ಕೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕರ್ತನಾದ ಯೇಸುವಿನ ಮೇಲೆ ನೀನು ಇಟ್ಟಿರುವ ನಂಬಿಕೆಯನ್ನು ಕುರಿತೂ ದೇವಜನರೆಲ್ಲರ ಮೇಲಿರುವ ನಿನ್ನ ಪ್ರೀತಿಯನ್ನು ಕುರಿತೂ ಕೇಳಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ, ನಮ್ಮ ಕರ್ತ ಆಗಿರುವ ಯೇಸುವಿನಲ್ಲಿ ನಿನಗಿರುವ ವಿಶ್ವಾಸವನ್ನೂ ಪರಿಶುದ್ಧರೆಲ್ಲರಿಗಾಗಿ ನಿನಗಿರುವ ಪ್ರೀತಿಯನ್ನೂ ಕುರಿತು ನಾನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಕಶ್ಯಾಕ್ ಮಟ್ಲ್ಯಾರ್, ದೆವಾಚ್ಯಾ ಲೊಕಾಂಚ್ಯಾ ವರ್ತಿ ತಿಯಾ ಥವಲ್ಲ್ಯಾ ಪ್ರೆಮಾಚ್ಯಾ ಅನಿ ಧನಿಯಾ ಜೆಜು ವರ್ತಿ ತಿಯಾ ಥವಲ್ಲ್ಯಾ ವಿಶ್ವಾಸಾಚ್ಯಾ ವಿಶಯಾತ್ ಮಿಯಾ ಆಯಿಕ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:5
13 ತಿಳಿವುಗಳ ಹೋಲಿಕೆ  

ನಾವು ದೇವರಿಗೆ ಸ್ತೋತ್ರ ಮಾಡಲು ಕಾರಣವೇನೆಂದರೆ ಕ್ರಿಸ್ತ ಯೇಸುವಿನಲ್ಲಿ ನಿಮಗಿರುವ ನಂಬಿಕೆಯ ಬಗ್ಗೆ, ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯ ಬಗ್ಗೆ ಕೇಳಿದ್ದೇವೆ.


ಆದಕಾರಣವೇ ನನ್ನ ಪ್ರಾರ್ಥನೆಗಳಲ್ಲಿ ನಾನು ನಿಮ್ಮನ್ನು ಜ್ಞಾಪಿಸಿಕೊಂಡು ನಿಮ್ಮ ವಿಷಯದಲ್ಲಿ ದೇವರಿಗೆ ಯಾವಾಗಲೂ ಸ್ತೋತ್ರ ಸಲ್ಲಿಸುತ್ತೇನೆ. ಪ್ರಭುವಾದ ಯೇಸುವಿನಲ್ಲಿ ನಿಮಗಿರುವ ನಂಬಿಕೆಯ ಬಗ್ಗೆ ಮತ್ತು ಎಲ್ಲಾ ದೇವಜನರ ಮೇಲೆ ನಿಮಗಿರುವ ಪ್ರೀತಿಯ ಬಗ್ಗೆ ಕೇಳಿದಂದಿನಿಂದ ನಾನು ನಿಮ್ಮ ವಿಷಯದಲ್ಲಿ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.


ದೇವಜನರಿಗೋಸ್ಕರ ಹಣ ಸಂಗ್ರಹಿಸುವುದರ ವಿಷಯವಾಗಿ ಈಗ ನಾನು ಬರೆಯುತ್ತೇನೆ. ನಾನು ಗಲಾತ್ಯ ಸಭೆಗಳಿಗೆ ಹೇಳಿಕೊಟ್ಟಂತೆ ನೀವೂ ಮಾಡಿರಿ.


ಯೆಹೋವನು ಭೂಲೋಕದಲ್ಲಿರುವ ತನ್ನ ಭಕ್ತರಿಗೆ ಅತಿಶಯವಾದವುಗಳನ್ನು ಮಾಡುವನು; ಅವರ ಮೇಲೆ ತನಗಿರುವ ನಿಜವಾದ ಪ್ರೀತಿಯನ್ನು ತೋರ್ಪಡಿಸುವನು.


ದೇವರ ಆಜ್ಞೆ ಏನೆಂದರೆ ಆತನ ಮಗನಾದ ಯೇಸು ಕ್ರಿಸ್ತನಲ್ಲಿ ನಾವು ನಂಬಿಕೆಯಿಟ್ಟು ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬುದೇ.


ನನ್ನ ಸಹೋದರನೇ, ದೇವಜನರಿಗೆ ನೀನು ಪ್ರೀತಿಯನ್ನು ತೋರಿಸಿ ಅವರ ಹೃದಯಗಳನ್ನು ಸಂತೈಸಿರುವೆ. ಇದು ನನಗೆ ಹೆಚ್ಚಿನ ಸಂತಸವನ್ನೂ ನೆಮ್ಮದಿಯನ್ನೂ ತಂದುಕೊಟ್ಟಿದೆ.


ಒಬ್ಬನು ಕ್ರಿಸ್ತ ಯೇಸುವಿನಲ್ಲಿರುವಾಗ ಸುನ್ನತಿ ಹೊಂದಿದ್ದಾನೋ ಇಲ್ಲವೋ ಎಂಬುದು ಮುಖ್ಯವಲ್ಲ. ಮುಖ್ಯವಾದದ್ದೇನೆಂದರೆ ಪ್ರೀತಿಯಿಂದ ಕಾರ್ಯನಡೆಸುವ ನಂಬಿಕೆ.


ಕೊರತೆಯಲ್ಲಿರುವ ದೇವಜನರಿಗೆ ಸಹಾಯ ಮಾಡಿರಿ. ಅತಿಥಿಸತ್ಕಾರದ ಅಗತ್ಯವಿರುವವರನ್ನು ಗುರುತಿಸಿ, ನಿಮ್ಮ ಮನೆಗಳಿಗೆ ಆಹ್ವಾನಿಸಿರಿ.


ನಿಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ನಾನು ಎಲ್ಲಾ ಜನಾಂಗಗಳವರಿಗೆ ಅಂದರೆ ಯೆಹೂದ್ಯರಿಗೂ ಮತ್ತು ಗ್ರೀಕರಿಗೂ ತಿಳಿಸಿದೆನು. ನಮ್ಮ ಪ್ರಭುವಾದ ಯೇಸುವಿನಲ್ಲಿ ನಂಬಿಕೆ ಇಡಬೇಕೆಂದು ನಾನು ಅವರೆಲ್ಲರಿಗೂ ತಿಳಿಸಿದೆನು.


ಆದರೆ ತಿಮೊಥೆಯನು ನಿಮ್ಮಿಂದ ನಮ್ಮ ಬಳಿಗೆ ಹಿಂತಿರುಗಿ ಬಂದಾಗ, ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಬಗ್ಗೆ ಶುಭವಾರ್ತೆಯನ್ನು ನಮಗೆ ಹೇಳಿದನು. ನೀವು ಯಾವಾಗಲೂ ನಮ್ಮನ್ನು ಜ್ಞಾಪಿಸಿಕೊಳ್ಳುವಿರೆಂತಲೂ ನಮ್ಮನ್ನು ಮತ್ತೆ ನೋಡಲು ಅತ್ಯಾಸೆಯಿಂದ ಇದ್ದೀರೆಂತಲೂ ಅವನು ನಮಗೆ ತಿಳಿಸಿದನು. ಅದೇ ರೀತಿಯಲ್ಲಿ ನಾವೂ ನಿಮ್ಮನ್ನು ನೋಡಲು ಅತ್ಯಾಸೆಯಿಂದ ಇದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು