ಫಿಲೆಮೋನನಿಗೆ 1:9 - ಪರಿಶುದ್ದ ಬೈಬಲ್9 ಆದರೆ ನಾನು ನಿನಗೆ ಆಜ್ಞಾಪಿಸದೆ ಪ್ರೀತಿಯಿಂದ ನಿನ್ನನ್ನು ಕೇಳಿಕೊಳ್ಳುತ್ತಿದ್ದೇನೆ. ಪೌಲನಾದ ನಾನು ಈಗ ವೃದ್ಧನಾಗಿದ್ದೇನೆ ಮತ್ತು ಕ್ರಿಸ್ತ ಯೇಸುವಿನ ನಿಮಿತ್ತ ಸೆರೆಯಲ್ಲಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀನು ಯುಕ್ತವಾದದ್ದನ್ನು ಮಾಡಬೇಕೆಂದು ಆಜ್ಞಾಪಿಸುವುದಕ್ಕೆ ನನಗೆ ಕ್ರಿಸ್ತನಲ್ಲಿ ಪೂರ್ಣ ಅಧಿಕಾರವಿದ್ದರೂ ಹಾಗೆ ಆಜ್ಞಾಪಿಸದೇ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆದರೂ ನಿನ್ನ ಮೇಲಿರುವ ಪ್ರೀತಿಯ ನಿಮಿತ್ತ ನಾನು ನಿನ್ನಲ್ಲಿ ವಿನಂತಿಸುತ್ತೇನೆ: ವೃದ್ಧಪ್ರಾಯನೂ ಮತ್ತು ಕ್ರಿಸ್ತಯೇಸುವಿಗೋಸ್ಕರ ಈಗ ಸೆರೆಯಾಳೂ ಆಗಿರುವ ಪೌಲನೆಂಬ ನಾನು ಒನೇಸಿಮನ ಪರವಾಗಿ ನಿನ್ನಲ್ಲಿ ವಿಜ್ಞಾಪಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹಾಗೆ ಆಜ್ಞಾಪಿಸದೆ ಮುದುಕನೂ ಈಗ ಕ್ರಿಸ್ತ ಯೇಸುವಿನ ನಿವಿುತ್ತ ಸೆರೆಯವನೂ ಆಗಿರುವ ಈ ಪೌಲನೆಂಬ ನಾನು ಪ್ರೀತಿಯ ನಿವಿುತ್ತ ನಿನ್ನನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಹಾಗೆ ಆಜ್ಞಾಪಿಸದೆ, ಈಗ ಕ್ರಿಸ್ತ ಯೇಸುವಿನ ಸೆರೆಯಾಳೂ ಮುದುಕನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಮಿಯಾ ಪಾವ್ಲು, ಕ್ರಿಸ್ತ್ ಜೆಜುಚೊ ಧುತ್, ಕ್ರಿಸ್ತಾಸಾಟ್ನಿ ಬಂಧಿಖಾನ್ಯಾತ್ ಹಾಂವ್, ಜಾಲ್ಯಾರ್ಬಿ ಮಿಯಾ ತುಜೊ ಪ್ರೆಮ್ ಕರ್ತಾ ತಸೆ ಮನುನ್ ತುಜೆಕ್ಡೆ ವಿನಂತಿ ಕರುಕ್ ಲಾಗ್ಲಾ. ಅಧ್ಯಾಯವನ್ನು ನೋಡಿ |
ಆ ಯುವತಿಯರ ತಂದೆಗಳಾಗಲಿ ಸಹೋದರರಾಗಲಿ ನಮ್ಮಲ್ಲಿಗೆ ಬಂದು ದೂರು ಹೇಳುತ್ತಾರೆ. ಆಗ ನಾವು ಅವರಿಗೆ, ‘ಬೆನ್ಯಾಮೀನ್ಯರ ಗಂಡಸರಿಗೆ ದಯೆತೋರಿಸಿರಿ; ಅವರು ಆ ಸ್ತ್ರೀಯರನ್ನು ಮದುವೆಯಾಗಲಿ. ಅವರು ನಿಮ್ಮಿಂದ ನಿಮ್ಮ ಹೆಣ್ಣುಮಕ್ಕಳನ್ನು ತೆಗೆದುಕೊಂಡು ಹೋಗಿರುವರೇ ಹೊರತು ಯುದ್ಧವೇನೂ ಮಾಡಿಲ್ಲ. ಅವರು ಕನ್ಯೆಯರನ್ನು ತೆಗೆದುಕೊಂಡು ಹೋದದ್ದರಿಂದ ನೀವು ದೇವರೆದುರಿಗೆ ಮಾಡಿದ ಪ್ರತಿಜ್ಞೆಯನ್ನು ಮುರಿದಂತಾಗುವುದಿಲ್ಲ. ನಿಮ್ಮ ಕನ್ಯೆಯರನ್ನು ಅವರಿಗೆ ಕೊಡುವುದಿಲ್ಲವೆಂದು ನೀವು ಪ್ರತಿಜ್ಞೆ ಮಾಡಿದ್ದೀರಿ. ನೀವು ಬೆನ್ಯಾಮೀನ್ಯರಿಗೆ ನಿಮ್ಮ ಕನ್ಯೆಯರನ್ನು ಕೊಟ್ಟಿಲ್ಲ. ಆದರೆ ಅವರು ನಿಮ್ಮ ಕನ್ಯೆಯರನ್ನು ತೆಗೆದುಕೊಂಡು ಹೋದರು. ಆದ್ದರಿಂದ ನೀವು ನಿಮ್ಮ ಪ್ರತಿಜ್ಞೆಯನ್ನು ಮುರಿಯಲಿಲ್ಲ’ ಎಂದು ಹೇಳುತ್ತೇವೆ” ಎಂದರು.