ಮತ್ತಾಯ 1:11 - ಪರಿಶುದ್ದ ಬೈಬಲ್11 ಯೋಷೀಯನು ಯೆಕೊನ್ಯ ಮತ್ತು ಅವನ ಸಹೋದರರ ತಂದೆ. (ಈ ಸಮಯದಲ್ಲಿಯೇ ಯೆಹೂದ್ಯ ಜನರನ್ನು ಗುಲಾಮಗಿರಿಗಾಗಿ ಬಾಬಿಲೋನಿಗೆ ಕೊಂಡೊಯ್ದದ್ದು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಮೋನ ಮಗನು ಯೋಷೀಯನು. ಬಾಬಿಲೋನಿಗೆ ಸೆರೆಹೋದ ಸಮಯದಲ್ಲಿ ಯೋಷೀಯನಿಗೆ ಯೆಕೊನ್ಯನು, ಅವನ ಅಣ್ಣತಮ್ಮಂದಿರು ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಮೋನನಿಗೆ ಯೋಷೀಯ ಹುಟ್ಟಿದರು. ಯೋಷೀಯನಿಗೆ ಯೆಕೊನ್ಯ ಮತ್ತು ಅವನ ಸಹೋದರರು ಹುಟ್ಟಿದರು. ಈ ಸಮಯದಲ್ಲೇ ಇಸ್ರಯೇಲರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಮೋನನು ಯೋಷೀಯನನ್ನು ಪಡೆದನು. ಪ್ರಜೆಯು ಬಾಬೆಲಿಗೆ ಸೆರೆಹೋದ ಸಮಯದಲ್ಲಿ ಯೋಷೀಯನು ಯೆಕೊನ್ಯನನ್ನೂ ಅವನ ಅಣ್ಣತಮ್ಮಂದಿರನ್ನೂ ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೋಷೀಯನಿಗೆ ಯೆಕೊನ್ಯ ಮತ್ತು ಅವನ ಸಹೋದರರು ಹುಟ್ಟಿದರು, ಈ ಸಮಯದಲ್ಲಿಯೇ ಯೆಹೂದ್ಯರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಯೊಸಿಯಾ ಯೆಕೊನಿಯಾಚೊ ಅನಿ ಭಾವಾಂಚೊ ಬಾಬಾ. ಹೆಂಚ್ಯಾ ಕಾಲಾತ್ ಇಸ್ರಾಯೆಲಾಚ್ಯಾ ಲೊಕಾಕ್ನಿ ಬಾಬಿಲೊನಾಕ್ ಧರುನ್ ಘೆವ್ನ್ ಗೆಲ್ಲ್ಯಾನಿ. ಅಧ್ಯಾಯವನ್ನು ನೋಡಿ |
ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನೆಂಬವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂಧಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನ್ನೂ ಸಹ ನೆಬೂಜರದಾನನು ಬಂಧಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂಧಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು ಹೋದನು.