ಮತ್ತಾಯ 1:12 - ಪರಿಶುದ್ದ ಬೈಬಲ್12 ಯೆಹೂದ್ಯರನ್ನು ಬಾಬಿಲೋನಿಗೆ ಕೊಂಡೊಯ್ದ ನಂತರದ ಕುಟುಂಬದ ಚರಿತ್ರೆ: ಯೆಕೊನ್ಯನು ಶೆಯಲ್ತಿಯೇಲನ ತಂದೆ. ಶೆಯಲ್ತಿಯೇಲನು ಜೆರುಬ್ಬಾಬೆಲನ ತಂದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಬಾಬಿಲೋನಿಗೆ ಸೆರೆಹೋದ ಮೇಲೆ ಯೆಕೊನ್ಯನು ಶೆಯಲ್ತಿಯೇಲನನ್ನು ಪಡೆದನು. ಶೆಯಲ್ತಿಯೇಲನ ಮಗನು ಜೆರುಬ್ಬಾಬೆಲನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಬಾಬಿಲೋನಿಗೆ ಸೆರೆಹೋದ ದಾಸ್ಯದಿನಗಳು ಮುಗಿದ ಮೇಲೆ ಯೆಕೊನ್ಯನಿಗೆ ಸಲಥಿಯೇಲ್, ಸಲಥಿಯೇಲನಿಗೆ ಜೆರುಬಾಬೆಲ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಬಾಬೆಲಿಗೆ ಸೆರೆಹೋದ ಮೇಲೆ ಯೆಕೊನ್ಯನು ಶೆಯಲ್ತಿಯೇಲನನ್ನು ಪಡೆದನು. ಶೆಯಲ್ತಿಯೇಲನು ಜೆರುಬ್ಬಾಬೆಲನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಬಾಬಿಲೋನಿಗೆ ಸೆರೆಹೋದ ಮೇಲೆ: ಯೆಕೊನ್ಯನು ಶೆಯಲ್ತೀಯೇಲನನ್ನು ಪಡೆದನು, ಶೆಯಲ್ತೀಯೇಲನು ಜೆರುಬ್ಬಾಬೆಲನ ತಂದೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಇಸ್ರಾಯೆಲಾಚ್ಯಾ ಲೊಕಾಕ್ನಿ ಬಾಬಿಲೊನಾಕ್ ಧರುನ್ ಘೆವ್ನ್ ಗೆಲ್ಲ್ಯಾಚ್ಯಾ ಮಾನಾಚಿ ವಂಶಾವಳಿ ಹಿ: ಯೆಕೊನಿಯಾ ಶಅಲ್ತಿಯೆಲಾಚೊ ಬಾಬಾ, ಅನಿ ಶೆಅಲ್ತಿಯೆಲ್ ಯೆರುಬಾಬೆಲಾಚೊ ಬಾಬಾ, ಅಧ್ಯಾಯವನ್ನು ನೋಡಿ |
ಬಳಿಕ ದೇವರಾದ ಯೆಹೋವನು ಆಲಯವನ್ನು ಕಟ್ಟುವಂತೆ ಜನರನ್ನು ಪ್ರೇರೇಪಿಸಿದನು. ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು. ಯೆಹೋಚಾದಾಕನ ಮಗನಾದ ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು ಅಲ್ಲದೆ ಯೆಹೋವನು ಆಲಯವನ್ನು ಕಟ್ಟಲು ಎಲ್ಲಾ ಜನರನ್ನು ಪ್ರೋತ್ಸಾಹಿಸಿದನು. ಆದ್ದರಿಂದ ಅವರೆಲ್ಲರೂ ತಮ್ಮ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟಲು ಪ್ರಾರಂಭಿಸಿದರು.