ಮತ್ತಾಯ 1:19 - ಪರಿಶುದ್ದ ಬೈಬಲ್19 ಮರಿಯಳನ್ನು ಮದುವೆಯಾಗಲಿದ್ದ ಯೋಸೇಫನು ನೀತಿವಂತನಾಗಿದ್ದನು. ಮರಿಯಳನ್ನು ಜನರ ಮುಂದೆ ನಾಚಿಕೆಪಡಿಸಲು ಅವನು ಇಷ್ಟಪಡಲಿಲ್ಲ. ಆದ್ದರಿಂದ ಅವನು ಗುಟ್ಟಾಗಿ ನಿಶ್ಚಿತಾರ್ಥವನ್ನು ರದ್ದುಗೊಳಿಸಬೇಕೆಂದಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆದರೆ ಆಕೆಯ ಗಂಡನಾದ ಯೋಸೇಫನು ಸಜ್ಜನನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ, ಯಾರಿಗೂ ತಿಳಿಯದಂತೆ ಆಕೆಯನ್ನು ಬಿಟ್ಟುಬಿಡಬೇಕೆಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೋಸೇಫನು ನೀತಿವಂತನಾಗಿದ್ದರಿಂದ, ಆಕೆಯನ್ನು ಬಹಿರಂಗವಾಗಿ ಅವಮಾನ ಮಾಡುವುದಕ್ಕೆ ಮನಸ್ಸಿಲ್ಲದೆ, ಆಕೆಯನ್ನು ರಹಸ್ಯವಾಗಿ ಬಿಟ್ಟು ಬಿಡಬೇಕೆಂದಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಜುಜೆ ಕನ್ನಾಬಿ ಖಲೆ ಸಮಾ ಹಾಯ್ ತೆಚ್ ಕರ್ನಾರೊ ಮಾನುಸ್, ಖರೆ ಮರಿಕ್ ಲೊಕಾಂಚ್ಯಾ ಫಿಡ್ಯಾತ್ ಅವ್ಮಾನ್ ಕರುಕ್ ತೆಕಾ ಮನ್ ನತ್ತೊ, ತಸೆ ಮನುನ್ ಕೊನಾಕ್ಬಿ ಕಳಿನಸ್ತಾನಾ ತಿಕಾ ಸೊಡುನ್ ದಿವ್ಚೆ ಮನುನ್ ತೊ ಯವ್ಜುಕ್ ಲಾಗಲ್ಲೊ, ಅಧ್ಯಾಯವನ್ನು ನೋಡಿ |