“ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಆ ಒಡಂಬಡಿಕೆಯ ಗುರುತೇ ಸುನ್ನತಿ. ಹೀಗಿರಲು ಅಬ್ರಹಾಮನು ಒಬ್ಬ ಮಗನನ್ನು ಪಡೆದಾಗ, ಆ ಮಗನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು. ಅವನ ಮಗನ ಹೆಸರು ಇಸಾಕ. ಇಸಾಕನು ಸಹ ತನ್ನ ಮಗನಾದ ಯಾಕೋಬನಿಗೆ ಸುನ್ನತಿ ಮಾಡಿದನು. ಮತ್ತು ಯಾಕೋಬನು ತನ್ನ ಗಂಡುಮಕ್ಕಳಿಗೆಲ್ಲಾ ಸುನ್ನತಿ ಮಾಡಿದನು. ಈ ಗಂಡುಮಕ್ಕಳೇ ಮುಂದೆ ಹನ್ನೆರಡು ಮಂದಿ ಪಿತೃಗಳಾದರು.
ಎರಡನೆಯ ಮಗು ಹುಟ್ಟಿದಾಗ ಅದು ಏಸಾವನ ಹಿಮ್ಮಡಿಯನ್ನು ಗಟ್ಟಿಯಾಗಿ ಹಿಡಿದುಕೊಂಡಿತ್ತು. ಆದ್ದರಿಂದ ಆ ಮಗುವಿಗೆ “ಯಾಕೋಬ” ಎಂದು ಹೆಸರಿಡಲಾಯಿತು. ಯಾಕೋಬ ಮತ್ತು ಏಸಾವ ಹುಟ್ಟಿದಾಗ ಇಸಾಕನಿಗೆ ಅರವತ್ತು ವರ್ಷ ವಯಸ್ಸಾಗಿತ್ತು.
ಅಬ್ರಹಾಮನು ಮಕ್ಕಳನ್ನು ಪಡೆಯಲಾಗದಷ್ಟು ವೃದ್ಧನಾಗಿದ್ದನು. ಸಾರಳು ಮಕ್ಕಳನ್ನು ಪಡೆಯಲು ಸಮರ್ಥಳಾಗಿರಲಿಲ್ಲ. ಆದರೆ ಅಬ್ರಹಾಮನಿಗೆ ದೇವರಲ್ಲಿ ನಂಬಿಕೆಯಿದ್ದುದರಿಂದ, ಅವರು ಮಕ್ಕಳನ್ನು ಪಡೆಯಲು ಸಮರ್ಥರಾಗುವಂತೆ ದೇವರು ಮಾಡಿದನು.
ನಿಮ್ಮ ಪಿತೃವಾದ ಅಬ್ರಹಾಮನನ್ನೂ ನಿಮ್ಮ ಮಾತೆಯಾದ ಸಾರಳನ್ನೂ ದೃಷ್ಟಿಸಿರಿ; ನಾನು ಕರೆದಾಗ ಅಬ್ರಹಾಮನು ಒಬ್ಬಂಟಿಗನಾಗಿದ್ದನು. ನಾನು ಅವನನ್ನು ಆಶೀರ್ವದಿಸಿ, ಅವನ ಸಂತಾನವನ್ನು ಅಭಿವೃದ್ಧಿಪಡಿಸಿ, ಅವನನ್ನು ಮಹಾಜನಾಂಗದ ಮೂಲಪುರುಷನನ್ನಾಗಿ ಮಾಡಿದೆನು.”
ಯೆಹೂದನ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿಯೂ ಕುಟುಂಬಗಳಿಗನುಸಾರವಾಗಿಯೂ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.