Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:5 - ಪರಿಶುದ್ದ ಬೈಬಲ್‌

5 ಸಲ್ಮೋನನು ಬೋವಜನ ತಂದೆ. (ಬೋವಜನ ತಾಯಿ ರಹಾಬಳು.) ಬೋವಜನು ಓಬೇದನ ತಂದೆ. (ಓಬೇದನ ತಾಯಿ ರೂತಳು.) ಓಬೇದನು ಇಷಯನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸಲ್ಮೋನನ ಮಗನಾದ ಬೋವಜನು ರಾಹಾಬಳಲ್ಲಿ ಹುಟ್ಟಿದವನು. ಬೋವಜನ ಮಗನು ಓಬೇದನು ರೂತಳಲ್ಲಿ ಹುಟ್ಟಿದವನು. ಓಬೇದನ ಮಗನು ಇಷಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸಲ್ಮೋನನಿಗೆ ರಹಾಬ್ ಎಂಬವಳಿಂದ ಬೋವಜ್, ಬೋವಜನಿಗೆ ರೂತ್ ಎಂಬವಳಿಂದ ಓಬೇದ್, ಓಬೇದನಿಗೆ ಜೆಸ್ಸೆಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸಲ್ಮೋನನು ರಾಹಾಬಳಲ್ಲಿ ಬೋವಜನನ್ನು ಪಡೆದನು. ಬೋವಜನು ರೂತಳಲ್ಲಿ ಓಬೇದನನ್ನು ಪಡೆದನು. ಓಬೇದನು ಇಷಯನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸಲ್ಮೋನನು ಬೋವಜನ ತಂದೆ, ಬೋವಜನ ತಾಯಿ ರಾಹಾಬಳು, ಬೋವಜನು ಓಬೇದನ ತಂದೆ, ಓಬೇದನ ತಾಯಿ ರೂತಳು, ಓಬೇದನು ಇಷಯನ ತಂದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಸಾಲ್ಮೊನ್ ಬೊಆಜಾಚೊ ಬಾಬಾ ಅನಿ ಬೊಆಜಾಚ್ಯಾ ಬಾಯ್ಚೆ ನಾವ್ ರಾಹಾಬ್, ಬೊಆಜ್ ಒಬೆದಾಚೊ ಬಾಬಾ ಅನಿ ರುತ್ ಒಬೆದಾಚಿ ಬಾಯ್, ಒಬೆದ್ ಯೆಸ್ಸೆಚೊ ಬಾಬಾ ಅನಿ ಯೆಸ್ಸೆ ದಾವಿದ್ ರಾಜಾಚೊ ಬಾಬಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:5
13 ತಿಳಿವುಗಳ ಹೋಲಿಕೆ  

ರಹಾಬಳೆಂಬ ವೇಶ್ಯೆಯು ಇಸ್ರೇಲಿನ ಗೂಢಚಾರರನ್ನು ಬರಮಾಡಿಕೊಂಡು, ಅವರನ್ನು ಸ್ನೇಹಿತರಂತೆ ನೋಡಿಕೊಂಡಳು. ನಂಬಲೊಲ್ಲದ ಜನರನ್ನು ಕೊಂದಾಗ ಅವಳನ್ನು ಕೊಲ್ಲದೆ ಹೋದದ್ದು ಅವಳಲ್ಲಿದ್ದ ಆ ನಂಬಿಕೆಯಿಂದಲೇ.


ರಹಾಬಳು ಮತ್ತೊಬ್ಬ ಉದಾಹರಣೆಯಾಗಿದ್ದಾಳೆ. ಆಕೆ ಒಬ್ಬ ವೇಶ್ಯೆ. ಆದರೆ ಅವಳು ತನ್ನ ಕ್ರಿಯೆಗಳಿಂದಲೇ ನೀತಿವಂತಳಾದಳು. ಅವಳು ದೇವರ ಜನರಿಗೋಸ್ಕರ ಗೂಢಚಾರರನ್ನು ತನ್ನ ಮನೆಗೆ ಬರಮಾಡಿಕೊಂಡು, ಬೇರೊಂದು ರಸ್ತೆಯಲ್ಲಿ ತಪ್ಪಿಸಿಕೊಂಡು ಹೋಗಲು ಅವರಿಗೆ ಸಹಾಯ ಮಾಡಿದಳು.


ಹೀಗೆ ನೊವೊಮಿ ಮತ್ತು ಅವಳ ಸೊಸೆ ಮೋವಾಬ್ಯಳಾದ ರೂತಳು ಮೋವಾಬ್ ಬೆಟ್ಟಪ್ರದೇಶದಿಂದ ಹಿಂದಿರುಗಿ ಬಂದರು. ಯೆಹೂದ ದೇಶದ ಬೆತ್ಲೆಹೇಮಿಗೆ ಇವರಿಬ್ಬರೂ ಜವೆಗೋಧಿಯ ಸುಗ್ಗಿಯ ಆರಂಭಕಾಲದಲ್ಲಿ ಬಂದರು.


ಆಕೆಯ ಗಂಡುಮಕ್ಕಳು ಮೋವಾಬ್ ದೇಶದ ಸ್ತ್ರೀಯರನ್ನು ಮದುವೆಯಾದರು. ಒಬ್ಬನ ಹೆಂಡತಿಯ ಹೆಸರು ಒರ್ಫಾ, ಇನ್ನೊಬ್ಬನ ಹೆಂಡತಿಯ ಹೆಸರು ರೂತ್. ಅವರು ಮೋವಾಬ್‌ನಲ್ಲಿ ಸುಮಾರು ಹತ್ತು ವರ್ಷವಿದ್ದರು.


ಸಲ್ಮೋನನು ಬೋವಜನ ತಂದೆ. ಬೋವಜನು ಓಬೇದನ ತಂದೆ.


ದಾವೀದನು ಇಷಯನ ಮಗನು. ಇಷಯನು ಓಬೇದನ ಮಗನು. ಓಬೇದನು ಬೋವಜನ ಮಗನು. ಬೋವಜನು ಸಲ್ಮೋನನ ಮಗನು. ಸಲ್ಮೋನನು ನಹಸ್ಸೋನನ ಮಗನು.


ಅರಾಮನು ಅಮ್ಮಿನಾದಾಬನ ತಂದೆ. ಅಮ್ಮಿನಾದಾಬನು ನಹಶೋನನ ತಂದೆ. ನಹಶೋನನು ಸಲ್ಮೋನನ ತಂದೆ.


ಇಷಯನು ಅರಸನಾದ ದಾವೀದನ ತಂದೆ. ದಾವೀದನು ಸೊಲೊಮೋನನ ತಂದೆ. (ಸೊಲೊಮೋನನ ತಾಯಿ ಊರೀಯನ ಹೆಂಡತಿಯಾಗಿದ್ದಳು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು