Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:12 - ಪರಿಶುದ್ದ ಬೈಬಲ್‌

12 ಆ ಮನೆಗೆ ನೀವು ಪ್ರವೇಶಿಸಿದಾಗ, ‘ನಿಮಗೆ ಶುಭವಾಗಲಿ’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಮನೆಯೊಳಗೆ ಹೋಗುವಾಗ ಶುಭವಾಗಲಿ ಅನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀವು ಒಂದು ಮನೆಗೆ ಹೋದಾಗ, “ಈ ಮನೆಗೆ ಶುಭವಾಗಲಿ!” ಎಂದು ಹರಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ಮನೆಯೊಳಕ್ಕೆ ಹೋಗುವಾಗ ಶುಭವಾಗಲಿ ಅನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀವು ಒಂದು ಮನೆಯೊಳಗೆ ಪ್ರವೇಶಿಸಿದಾಗ, ಆ ಮನೆಯವರನ್ನು ಹರಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಎಕ್ ಘರಾತ್ ತುಮಿ ಗೆಲ್ಲ್ಯಾ ತನ್ನಾ “ಶಾಂತಿ ತುಮ್ಚ್ಯಾ ವಾಂಗ್ಡಾ ರ್‍ಹವ್ನದಿತ್” ಮನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:12
10 ತಿಳಿವುಗಳ ಹೋಲಿಕೆ  

ಈ ಸಂದೇಶವನ್ನು ಅವನಿಗೆ ಹೇಳಿರಿ: “ನೀನು ಮತ್ತು ನಿನ್ನ ಕುಟುಂಬದವರು ಕ್ಷೇಮವಾಗಿದ್ದೀರೆಂದು ನಾನು ನಂಬಿದ್ದೇನೆ. ನಿನ್ನ ಸಕಲ ಸಂಪತ್ತು ಚೆನ್ನಾಗಿರುವುದೆಂದು ನಾನು ನಂಬಿದ್ದೇನೆ.


ಆದ್ದರಿಂದ ಕ್ರಿಸ್ತನ ಪರವಾಗಿ ಮಾತಾಡಲು ನಮ್ಮನ್ನು ಕಳುಹಿಸಲಾಗಿದೆ. ಇದು, ದೇವರು ನಮ್ಮ ಮೂಲಕವಾಗಿ ಜನರನ್ನು ಕರೆಯುವಂತಿದೆ. ದೇವರೊಂದಿಗೆ ಸಮಾಧಾನವಾಗಿರಿ ಎಂದು ನಾವು ನಿಮ್ಮನ್ನು ಬೇಡಿಕೊಳ್ಳುವಾಗ ಕ್ರಿಸ್ತನ ಪರವಾಗಿ ಮಾತಾಡುವವರಾಗಿದ್ದೇವೆ.


ದೇವರು ಯೆಹೂದ್ಯ ಜನರೊಂದಿಗೆ ಮಾತಾಡಿದ್ದಾನೆ. ಯೇಸು ಕ್ರಿಸ್ತನ ಮೂಲಕವಾಗಿ ಶಾಂತಿ ಬಂದಿದೆ ಎಂಬ ಸುವಾರ್ತೆಯನ್ನು ದೇವರು ಅವರಿಗೆ ಕಳುಹಿಸಿದನು. ಯೇಸುವು ಎಲ್ಲಾ ಜನರಿಗೆ ಪ್ರಭುವಾಗಿದ್ದಾನೆ!


ನಾನು ನಿನ್ನನ್ನು ನೋಡಲು ಬರಬೇಕೆಂದಿದ್ದೇನೆ. ಆಗ ನಾವಿಬ್ಬರೂ ಒಟ್ಟಿಗೆ ಮಾತನಾಡಬಹುದು.


ನಿನ್ನ ಕೋಟೆಗಳೊಳಗೆ ಶಾಂತಿ ನೆಲಸಿರಲಿ ನಿನ್ನ ಮಹಾ ಕಟ್ಟಡಗಳಲ್ಲಿ ಸುರಕ್ಷತೆಯಿರಲಿ.”


ನನ್ನ ಸಹೋದರರ ಮತ್ತು ನೆರೆಯವರ ಒಳ್ಳೆಯದಕ್ಕಾಗಿ ಅಲ್ಲಿ ಶಾಂತಿ ನೆಲೆಸಿರಲೆಂದು ಪ್ರಾರ್ಥಿಸುವೆನು.


ಜನರು ನಿನ್ನ ಮಾತನ್ನು ಕೇಳಬಹುದು ಅಥವಾ ಕೇಳದಿರಬಹುದು: ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ. ನನ್ನ ಮುಂದೆ ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರು ಯಾವಾಗಲೂ ನನ್ನ ವಿರುದ್ಧ ದಂಗೆ ಏಳುವರು. ಆದ್ದರಿಂದ ನಾನು ತಿಳಿಸಿದ್ದನ್ನೆ ನೀನು ಹೇಳಬೇಕು. ಆಗ ಅವರು ತಮ್ಮ ಮಧ್ಯೆ ಒಬ್ಬ ಪ್ರವಾದಿ ಇದ್ದಾನೆಂದು ಗ್ರಹಿಸಿಕೊಳ್ಳುವರು.


“ನೀವು ಯಾವುದೇ ಊರಿನೊಳಕ್ಕೆ ಅಥವಾ ನಗರಕ್ಕೆ ಪ್ರವೇಶಿಸಿದಾಗ ಅಲ್ಲಿರುವ ಉತ್ತಮ ವ್ಯಕ್ತಿಯನ್ನು ಗುರುತಿಸಿ, ನೀವು ಆ ಊರನ್ನು ಬಿಡುವ ತನಕ ಅವನ ಮನೆಯಲ್ಲೇ ತಂಗಿರಿ.


ಆ ಮನೆಯಲ್ಲಿರುವ ಜನರು ನಿಮ್ಮನ್ನು ಸ್ವಾಗತಿಸಿದರೆ ನಿಮ್ಮ ಆಶೀರ್ವಾದಕ್ಕೆ ಅವರು ಯೋಗ್ಯರಾಗಿರುವುದರಿಂದ ಆ ಆಶೀರ್ವಾದವು ಅವರಿಗೆ ದೊರೆಯಲಿ. ಅವರು ನಿಮ್ಮನ್ನು ಸ್ವಾಗತಿಸದಿದ್ದರೆ, ನಿಮ್ಮ ಆಶೀರ್ವಾದವು ನಿಮಗೇ ಹಿಂತಿರುಗಿಬರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು