Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:21 - ಪರಿಶುದ್ದ ಬೈಬಲ್‌

21 “ಸಹೋದರರು ಸ್ವಂತ ಸಹೋದರರಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. ತಂದೆಯಂದಿರು ತಮ್ಮ ಸ್ವಂತ ಮಕ್ಕಳಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇದಲ್ಲದೆ ಸಹೋದರನು ಸಹೋದರನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ತಂದೆತಾಯಿಗಳ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸಹೋದರನು ಸಹೋದರನನ್ನೇ ತಂದೆಯು ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇದಲ್ಲದೆ ಅಣ್ಣನು ತಮ್ಮನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಸಹೋದರನು ತನ್ನ ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 “ಭಾವ್ ಅಪ್ನಾಚ್ಯಾ ಭಾವಾಕ್ನಿಚ್ ಜಿವಾನಿ ಮಾರುಕ್ ಮನುನ್ ಧರುನ್ ದಿತ್ಯಾತ್, ಅನಿ ಬಾಬಾ ಅಪ್ನಾಚ್ಯಾ ಪೊರಾಕ್ನಿ ಜಿವಾನಿ ಮಾರುಕ್ ಧರುನ್ ದಿತ್ಯಾತ್; ಪೊರಾ ತೆಂಚ್ಯಾ ಬಾಯ್-ಬಾಬಾಚ್ಯಾ ವರ್‍ತಿ ಹುರ್‍ಪಾಟಿ ಹೊತ್ಯಾತ್ ಅನಿ ತೆಂಕಾ ಜಿವಾನಿ ಮಾರುಕ್ ದಿತ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:21
12 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಅನೇಕ ವಿಶ್ವಾಸಿಗಳು ತಮ್ಮ ನಂಬಿಕೆಯನ್ನು ಕಳೆದುಕೊಳ್ಳುವರು. ಅವರು ಒಬ್ಬರಿಗೊಬ್ಬರಿಗೆ ವಿರೋಧವಾಗಿ ತಿರುಗಿಕೊಂಡು ಒಬ್ಬರನ್ನೊಬ್ಬರು ದ್ವೇಷಿಸುವರು.


ಯಾವನಾದರೂ ಪ್ರವಾದಿಸುವದನ್ನು ಮಂದುವರಿಸಿದರೆ ಅವನು ಶಿಕ್ಷೆಗೆ ಗುರಿಯಾಗುವನು. ‘ನೀನು ಯೆಹೋವನ ಹೆಸರಿನಲ್ಲಿ ಸುಳ್ಳನ್ನು ಹೇಳಿರುವೆ. ಆದ್ದರಿಂದ ನೀನು ಸಾಯಲೇಬೇಕು’ ಎಂದು ಅವನ ಸ್ವಂತ ತಂದೆತಾಯಿಗಳು ಅವನಿಗೆ ಹೇಳುವರು. ಅವನ ಸ್ವಂತ ತಂದೆ ತಾಯಿಗಳು ಅವನು ಸುಳ್ಳು ಪ್ರವಾದನೆ ಹೇಳಿದ್ದಕ್ಕೆ ಅವನನ್ನು ಖಡ್ಗದಿಂದ ಕೊಲ್ಲಿಸುವರು.


ದಾವೀದನು ಅಬೀಷೈಗೆ ಮತ್ತು ತನ್ನ ಎಲ್ಲಾ ಸೇವಕರಿಗೆ, “ನೋಡಿ, ನನ್ನ ಸ್ವಂತ ಮಗನೇ ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾನೆ. ಬೆನ್ಯಾಮೀನ್ ಕುಲದ ಇವನು ನನ್ನನ್ನು ಶಪಿಸುವುದು ಯಾವ ದೊಡ್ಡ ಮಾತು; ಅವನು ನನ್ನನ್ನು ಶಪಿಸುತ್ತಲೇ ಇರಲಿ. ಹೀಗೆ ಮಾಡುವಂತೆ ಯೆಹೋವನೇ ಅವನಿಗೆ ತಿಳಿಸಿದ್ದಾನೆ.


ನನ್ನನ್ನು ನೋಡಿ ನನ್ನ ಆಪ್ತಸ್ನೇಹಿತರೂ ಅಸಹ್ಯಪಡುತ್ತಾರೆ. ನಾನು ಯಾರನ್ನು ಪ್ರೀತಿಸಿದೆನೋ ಅವರೂ ನನಗೆ ವಿರೋಧವಾಗಿ ಎದ್ದಿದ್ದಾರೆ.


ಬೇರೆಯವರ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಕೆಟ್ಟದ್ದನ್ನು ಹೇಳುತ್ತಲೇ ಇರುತ್ತೀರಿ.


ದೇವರು ಹೇಳುವುದೇನೆಂದರೆ: “ನಾನು ಈಜಿಪ್ಟಿನ ಜನರಲ್ಲಿ ಒಳಜಗಳವನ್ನು ಹುಟ್ಟಿಸುವೆನು. ಜನರು ತಮ್ಮ ಸಹೋದರರೊಂದಿಗೆ ಜಗಳವಾಡುವರು. ನೆರೆಹೊರೆಯವರು ಪರಸ್ಪರ ಜಗಳವಾಡುವರು. ನಗರವು ನಗರದೊಂದಿಗೆ ಯುದ್ಧ ಮಾಡುವದು. ಒಂದು ರಾಷ್ಟ್ರವು ಇನ್ನೊಂದು ರಾಷ್ಟ್ರದೊಂದಿಗೆ ಯುದ್ಧಮಾಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು