Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:30 - ಪರಿಶುದ್ದ ಬೈಬಲ್‌

30 ನಿಮ್ಮ ತಲೆಯಲ್ಲಿ ಎಷ್ಟು ಕೂದಲುಗಳು ಇವೆ ಎಂಬುದು ಸಹ ದೇವರಿಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಿಮ್ಮ ತಲೆಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅಲ್ಲದೆ ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಿಮ್ಮ ತಲೇಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಿಮ್ಮ ತಲೆಯ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತುಜೆಸಾಟ್ನಿ ಮನುನ್ ತುಜ್ಯಾ ಟಕ್ಲ್ಯಾಚಿ ಕೆಸಾ ಸೈತ್ ಮೆಜುನ್ ಥವಲ್ಲಿ ಹಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:30
6 ತಿಳಿವುಗಳ ಹೋಲಿಕೆ  

ಹೌದು, ನಿಮ್ಮ ತಲೆಯಲ್ಲಿ ಎಷ್ಟು ಕೂದಲುಗಳಿವೆ ಎಂಬುದು ಸಹ ದೇವರಿಗೆ ಗೊತ್ತಿದೆ. ಹೆದರಬೇಡಿರಿ. ನೀವು ಅನೇಕ ಗುಬ್ಬಿಗಳಿಗಿಂತ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.


ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.


ಈಗ ನೀವು ಸ್ವಲ್ಪವಾದರೂ ತಿನ್ನುವಂತೆ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ಜೀವಂತವಾಗಿ ಉಳಿಯಬೇಕಾದರೆ ನಿಮಗೆ ಊಟ ಅವಶ್ಯಕವಾಗಿದೆ. ನಿಮ್ಮಲ್ಲಿರುವ ಯಾರೂ ನಿಮ್ಮ ತಲೆಕೂದಲುಗಳಲ್ಲಿ ಒಂದನ್ನಾದರೂ ಕಳೆದುಕೊಳ್ಳುವುದಿಲ್ಲ” ಎಂದು ಹೇಳಿದನು.


ಆದರೆ ಇವುಗಳಿಂದ ನೀವೇನೂ ನಾಶವಾಗುವುದಿಲ್ಲ.


ಆ ಸ್ತ್ರೀಯು, “ಅವರು ನನಗೆ ತೊಂದರೆ ಕೊಡದಂತೆ ನೀನು ನೋಡಿಕೊಳ್ಳುವುದಾಗಿ ನಿನ್ನ ದೇವರಾದ ಯೆಹೋವನ ಮೇಲೆ ದಯವಿಟ್ಟು ಪ್ರಮಾಣ ಮಾಡು. ಆಗ ಕೊಲೆಗಾರರನ್ನು ದಂಡಿಸಲು ಇಚ್ಛಿಸುವ ಈ ಜನರು, ನನ್ನ ಮಗನನ್ನು ದಂಡಿಸುವುದಿಲ್ಲ” ಎಂದು ಹೇಳಿದಳು. ದಾವೀದನು, “ಯೆಹೋವನಾಣೆ, ನಿನ್ನ ಮಗನನ್ನು ಯಾವ ವ್ಯಕ್ತಿಯೂ ತೊಂದರೆಗೊಳಿಸುವುದಿಲ್ಲ. ನಿನ್ನ ಮಗನ ತಲೆಯ ಮೇಲಿನ ಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ” ಎಂದನು.


ಆದ್ದರಿಂದ ಸೊಲೊಮೋನನು, “ಅದೋನೀಯನು ತಾನು ಒಳ್ಳೆಯ ಮನುಷ್ಯನೆಂದು ನಿರೂಪಿಸಿದರೆ ಅವನ ತಲೆಯ ಒಂದು ಕೂದಲಿಗೂ ತೊಂದರೆಯಾಗುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ಆದರೆ ಅವನೇನಾದರೂ ಕೇಡನ್ನು ಮಾಡಿದರೆ ಸಾಯುವನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು