ಮತ್ತಾಯ 10:42 - ಪರಿಶುದ್ದ ಬೈಬಲ್42 ದೀನರಾದ ಇವರಿಗೆ ನನ್ನ ಹಿಂಬಾಲಕರೆಂಬ ನಿಮಿತ್ತ ಸಹಾಯ ಮಾಡುವವನು ಖಂಡಿತವಾಗಿಯೂ ಪ್ರತಿಫಲವನ್ನು ಪಡೆಯುವನು. ನನ್ನ ಹಿಂಬಾಲಕರಿಗೆ ಕೇವಲ ಒಂದು ಬಟ್ಟಲು ತಣ್ಣೀರನ್ನು ಕೊಟ್ಟರೂ ಸಹ ಅದಕ್ಕೆ ಬರತಕ್ಕ ಪ್ರತಿಫಲವು ತಪ್ಪುವುದೇ ಇಲ್ಲ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಮತ್ತು ಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾರಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಮತ್ತು ಈ ಚಿಕ್ಕವರಲ್ಲಿ ಒಬ್ಬನಿಗೆ ಯೇಸುವಿನ ಶಿಷ್ಯನೆಂದು ಯಾವನಾದರೂ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಯಾವನಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಕೇವಲ ಒಂದು ಲೋಟ ತಣ್ಣೀರನ್ನು ಕುಡಿಯುವುದಕ್ಕೆ ಕೊಡುವವನು ತನ್ನ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ಸತ್ಯವಾಗಿ ನಾನು ನಿಮಗೆ ಹೇಳುತ್ತೇನೆ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ತುಮ್ಕಾ ಗೊತ್ತ್ ರ್‍ಹಾಂವ್ದಿ, ಹ್ಯಾ ಮಾಜ್ಯಾ ಫಾಟ್ನಾ ರ್‍ಹಾತಲ್ಯಾತ್ಲ್ಯಾ ಎಕ್ ಬಾರಿಕ್ಲ್ಯಾಕ್ ಸೈತ್ ತೊ ಮಾಜ್ಯಾ ಫಾಟ್ನಾ ರ್‍ಹಾತಲೊ ಮನುನ್ ಗೊತ್ತ್ ರ್‍ಹವ್ನಬಿ ತೆಕಾ ಫಿವ್ಕ್ ಎಕ್ ಘುಟುಕ್ ಬರ್ ಸೈತ್ ಪಾನಿ ದಿಲ್ಯಾರ್, ತೆಕಾ ತೆಚೊ ಭೊಮಾನ್ ಗಾವುನುಚ್ ಗಾವ್ತಾ”. ಮನುನ್ ಸಾಂಗಟ್ಲ್ಯಾನ್, ಅನಿ ತೆಂಕಾ ಧಾಡುನ್ ದಿಲ್ಯಾನ್. ಅಧ್ಯಾಯವನ್ನು ನೋಡಿ |