ಮತ್ತಾಯ 10:6 - ಪರಿಶುದ್ದ ಬೈಬಲ್6 ಆದರೆ ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಹೋಗಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲನ ಮನೆತನದವರ ಬಳಿಗೆ ಹೋಗಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ತಪ್ಪಿಹೋದ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತುಮಿ ಇಸ್ರಾಯೆಲಾಚ್ಯಾ ಲೊಕಾನಿಕ್ನಿ ಜಾವಾ, ತೆನಿ ಚುಕುನ್ ಗೆಲ್ಲ್ಯಾ ಬಕ್ರ್ಯಾಂಚ್ಯಾ ಸರ್ಕೆ ಹಾತ್, ಅಧ್ಯಾಯವನ್ನು ನೋಡಿ |
ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.
ಆದರೆ ನೀವು ಬಲಹೀನ ಕುರಿಗಳನ್ನು ಬಲಪಡಿಸಲಿಲ್ಲ. ಕಾಯಿಲೆಯಲ್ಲಿರುವ ಕುರಿಗಳನ್ನು ನೀವು ಪರಾಂಬರಿಸಲಿಲ್ಲ. ಗಾಯಗೊಂಡ ಕುರಿಗಳಿಗೆ ಬಟ್ಟೆ ಸುತ್ತಲಿಲ್ಲ. ಕೆಲವು ಕುರಿಗಳು ದಾರಿತಪ್ಪಿ ದೂರ ಹೋದವು. ಆದರೆ ನೀವು ಅದರ ಬೆನ್ನ ಹಿಂದೆ ಹೋಗಿ ಹಿಂತಿರುಗಿ ಬರುವಂತೆ ಮಾಡಲಿಲ್ಲ. ತಪ್ಪಿಹೋದ ಕುರಿಗಳನ್ನು ನೀವು ಹುಡುಕಲಿಲ್ಲ. ನೀವು ಬಹಳ ಕ್ರೂರಿಗಳೂ ದಯೆ ಇಲ್ಲದವರೂ ಆಗಿದ್ದೀರಿ. ಆ ರೀತಿಯಾಗಿ ನೀವು ನಿಮ್ಮ ಕುರಿಗಳನ್ನು ನಡೆಸಿದಿರಿ.