Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:10 - ಪರಿಶುದ್ದ ಬೈಬಲ್‌

10 ಯೋಹಾನನನ್ನು ಕುರಿತು ಪವಿತ್ರ ಗ್ರಂಥದಲ್ಲಿ ಹೀಗೆ ಬರೆದಿದೆ: ‘ಇಗೋ! ನಾನು (ದೇವರು) ನನ್ನ ದೂತನನ್ನು ನಿನಗಿಂತ ಮೊದಲು ಕಳುಹಿಸುತ್ತೇನೆ. ಅವನು ನಿನಗೆ ದಾರಿಯನ್ನು ಸಿದ್ಧಮಾಡುತ್ತಾನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ‘ಇಗೋ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವೆನು. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಪಡಿಸುವನು’ ಎಂದು ಯಾರ ವಿಷಯವಾಗಿ ಬರೆದದೆಯೋ ಆತನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ‘ಇಗೋ, ನನ್ನ ದೂತನನ್ನು ನಿನಗೆ ಮುಂದಾಗಿ ಕಳುಹಿಸುವೆನು. ಆತನು ನಿನ್ನ ಮಾರ್ಗವನ್ನು ಮುಂಚಿತವಾಗಿ ಸಿದ್ಧಗೊಳಿಸುವನು’ ಎಂದು ಪವಿತ್ರಗ್ರಂಥದಲ್ಲಿ ಉಲ್ಲೇಖಿಸಿರುವುದು ಈ ಯೊವಾನ್ನನನ್ನು ಕುರಿತೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸರಿಮಾಡುವನು ಎಂದು ಯಾರ ವಿಷಯವಾಗಿ ಬರೆದದೆಯೋ ಆ ಪುರುಷನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೋಹಾನನ ಕುರಿತು ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜುವಾಂವ್ ಕೊನ್ ಕಾಯ್ ಮಟ್ಲ್ಯಾರ್, ಪವಿತ್ರ್ ಪುಸ್ತಕಾತ್ ದೆವ್ ತೆಚ್ಯಾ ವಿಶಯಾತ್ ಮನ್ತಾ, “ತುಜಿ ವಾಟ್ ತಯಾರ್ ಕರುಕ್ ಮಿಯಾ ಮಾಜಿ ಬಾತ್ಮಿ ಸಾಂಗ್ತಲ್ಯಾಕ್ ತುಜ್ಯಾ ಫಿಡೆ-ಫಿಡೆ ಧಾಡುನ್ ದಿತಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:10
10 ತಿಳಿವುಗಳ ಹೋಲಿಕೆ  

ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ.


ಒಬ್ಬ ಮನುಷ್ಯನು ಕೂಗಿಹೇಳುವುದನ್ನು ಕೇಳಿರಿ: “ಯೆಹೋವನಿಗೆ ಅಡವಿಯಲ್ಲಿ ದಾರಿಯನ್ನು ಸಿದ್ಧಮಾಡಿರಿ! ನಮ್ಮ ದೇವರಿಗೆ ಅಲ್ಲಿ ಮಾರ್ಗವನ್ನು ನೆಟ್ಟಗೆಮಾಡಿರಿ!


ಯೆಹೋವನು ಹೀಗೆನ್ನುತ್ತಾನೆ, “ನಾನು ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು. ಅವನು ಯೆಹೋವನಿಂದ ಪ್ರಾಪ್ತಿಯಾಗುವ ಭಯಂಕರವಾದ ಮಹಾ ನ್ಯಾಯತೀರ್ಪಿನ ಕಾಲದಲ್ಲಿ ಬರುವನು.


ಪ್ರವಾದಿಯಾದ ಯೆಶಾಯನು ತನ್ನ ಪ್ರವಾದನೆಯ ಗ್ರಂಥದಲ್ಲಿ ಹೀಗೆ ಬರೆದಿದ್ದಾನೆ. “ಇಗೋ! ನಾನು ನನ್ನ ಸಂದೇಶಕನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ಅವನು ನಿನಗಾಗಿ ಮಾರ್ಗವನ್ನು ಸಿದ್ಧಪಡಿಸುತ್ತಾನೆ.”


ಅದಕ್ಕೆ ಯೋಹಾನನು, “‘ಪ್ರಭುವಿಗಾಗಿ ನೇರವಾದ ದಾರಿಯನ್ನು ಸಿದ್ಧಗೊಳಿಸಿರಿ’ ಎಂದು ಅಡವಿಯಲ್ಲಿ ಕೂಗುವವನ ಸ್ವರವೇ ನಾನು” ಎಂದು ಪ್ರವಾದಿಯಾದ ಯೆಶಾಯನ ಮಾತುಗಳಲ್ಲೇ ಉತ್ತರಕೊಟ್ಟನು.


“‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ’ ಎಂದು ಅಡವಿಯಲ್ಲಿ ಒಬ್ಬನು ಕೂಗುತ್ತಿದ್ದಾನೆ” ಎಂದು ಸ್ನಾನಿಕ ಯೋಹಾನನನ್ನೇ ಕುರಿತು ಪ್ರವಾದಿಯಾದ ಯೆಶಾಯ ಹೇಳಿದ್ದನು.


ಯೋಹಾನನ ಶಿಷ್ಯರು ಯೇಸುವಿಗೆ, “ಯೋಹಾನನು ಹೇಳಿದ್ದಂತೆ ಬರಬೇಕಾಗಿದ್ದವನು ನೀನೋ ಅಥವಾ ಬೇರೊಬ್ಬನಿಗಾಗಿ ನಾವು ಎದುರುನೋಡಬೇಕೋ?” ಎಂದು ಕೇಳಿದರು.


“ಸ್ನಾನಿಕ ಯೋಹಾನನು ಹಿಂದೆ ಜೀವಿಸಿದ್ದವರಿಗಿಂತ ದೊಡ್ಡವನು. ಆದರೆ ಪರಲೋಕರಾಜ್ಯದಲ್ಲಿರುವ ಚಿಕ್ಕವನು ಸಹ ಯೋಹಾನನಿಗಿಂತಲೂ ಹೆಚ್ಚಿನವನಾಗಿದ್ದಾನೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


“ಮಗುವೇ, ನೀನು ಮಹೋನ್ನತನ ಪ್ರವಾದಿ ಎನಿಸಿಕೊಳ್ಳುವೆ. ಪ್ರಭುವಿನ ಮುಂದೆ ಹೋಗಿ ಆತನ ಬರುವಿಕೆಗಾಗಿ ಜನರನ್ನು ಸಿದ್ಧಮಾಡುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು