Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:11 - ಪರಿಶುದ್ದ ಬೈಬಲ್‌

11 “ಸ್ನಾನಿಕ ಯೋಹಾನನು ಹಿಂದೆ ಜೀವಿಸಿದ್ದವರಿಗಿಂತ ದೊಡ್ಡವನು. ಆದರೆ ಪರಲೋಕರಾಜ್ಯದಲ್ಲಿರುವ ಚಿಕ್ಕವನು ಸಹ ಯೋಹಾನನಿಗಿಂತಲೂ ಹೆಚ್ಚಿನವನಾಗಿದ್ದಾನೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮಾನವನಾಗಿ ಜನಿಸಿದ್ದವರಲ್ಲಿ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಾರೂ ಹುಟ್ಟಿಲ್ಲ! ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಆದರೂ ಸ್ವರ್ಗಸಾಮ್ರಾಜ್ಯದಲ್ಲಿ ಕನಿಷ್ಠನಾದವನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕನಾದ ಯೋಹಾನನಿಗಿಂತ ದೊಡ್ಡವನು ಎದ್ದಿಲ್ಲ. ಆದರೂ ಪರಲೋಕರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸ್ತ್ರೀಯರಲ್ಲಿ ಹುಟ್ಟಿದವರಲ್ಲಿ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಹುಟ್ಟಲಿಲ್ಲ; ಆದರೂ ಪರಲೋಕ ರಾಜ್ಯದಲ್ಲಿರುವ ಅತ್ಯಂತ ಚಿಕ್ಕವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಆಜ್ ಸಗೊಳ್ ಜಲ್ಮಲ್ಲ್ಯಾ ಮಾನ್ಸಾತ್ನಿ ಜುವಾಂವಾ ತವ್ಡೊ ಮೊಟೊ ಕೊನ್ ಬಿ ನಾ. ಖರೆ ಸರ್‍ಗಾಚ್ಯಾ ರಾಜಾತ್ ಎಗ್ದಮ್ ಬಾರಿಕ್ ಮನುನ್ ಹೊತ್ತೊಬಿ ಜುವಾಂವ್ ಬಾವ್ತಿಸಾಚ್ಯಾನ್ ಮೊಟೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:11
31 ತಿಳಿವುಗಳ ಹೋಲಿಕೆ  

ಈ ಲೋಕದಲ್ಲಿ ಹುಟ್ಟಿದ ಎಲ್ಲಾ ಮನುಷ್ಯರಲ್ಲಿ ಯೋಹಾನನೇ ದೊಡ್ಡವನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೂ ದೇವರ ರಾಜ್ಯದಲ್ಲಿರುವ ಕನಿಷ್ಠನು ಸಹ ಅವನಿಗಿಂತ ಶ್ರೇಷ್ಠನೇ ಸರಿ” ಎಂದನು.


ದೇವಜನರಲ್ಲಿ ನಾನೇ ಅತ್ಯಲ್ಪನು. ಕ್ರಿಸ್ತನ ಐಶ್ವರ್ಯವನ್ನು ಕುರಿತಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂದು ದೇವರು ನನಗೆ ಈ ಕೃಪಾವರವನ್ನು ಕೊಟ್ಟನು. ಆ ಐಶ್ವರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ.


ಯೋಹಾನನು ಆತನ ಬಗ್ಗೆ ಜನರಿಗೆ ತಿಳಿಸುತ್ತಾ, “‘ನನ್ನ ನಂತರ ಬರುವ ಒಬ್ಬನು ನನಗಿಂತಲೂ ಶ್ರೇಷ್ಠನಾಗಿದ್ದಾನೆ. ಆತನು ನನಗಿಂತ ಮೊದಲೇ ಜೀವಿಸುತ್ತಿದ್ದನು’ ಎಂದು ನಾನು ಹೇಳಿದಾಗ ಈತನ ಬಗ್ಗೆಯೇ ಮಾತಾಡುತ್ತಿದ್ದೆನು” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.


“ಮನುಷ್ಯನು ಪ್ರತಿ ಆಜ್ಞೆಗೂ, ಅಂದರೆ ಸಣ್ಣಸಣ್ಣ ಆಜ್ಞೆಗೂ ವಿಧೇಯನಾಗಿರಬೇಕು. ಒಬ್ಬನು ಯಾವ ಆಜ್ಞೆಗಾದರೂ ಅವಿಧೇಯನಾಗಿ ಜೀವಿಸುತ್ತಾ ಆ ಆಜ್ಞೆಗೆ ಬೇರೆಯವರೂ ಅವಿಧೇಯರಾಗಿರಬೇಕೆಂದು ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅತ್ಯಲ್ಪನಾಗಿರುವನು. ಆದರೆ ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ಜೀವಿಸುತ್ತಾ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ಬೇರೆಯವರಿಗೂ ಬೋಧಿಸುವವನು ಪರಲೋಕರಾಜ್ಯದಲ್ಲಿ ಪ್ರಮುಖನಾಗಿರುವನು.


“ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದಕ್ಕೆ ಗುರುತಾಗಿ ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವೆನು. ಆದರೆ ನನ್ನ ಹಿಂದೆ ಬರುವವನು ನನಗಿಂತ ಹೆಚ್ಚಿನವನು. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು.


ಬಳಿಕ ಯೇಸು ತನ್ನ ಶಿಷ್ಯರಿಗೆ, “ಒಬ್ಬನು ನನ್ನ ಹೆಸರಿನಲ್ಲಿ ಒಂದು ಚಿಕ್ಕ ಮಗುವನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ಒಬ್ಬನು ನನ್ನನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನು ಕಳುಹಿಸಿದಾತನನ್ನೇ (ದೇವರನ್ನು) ಸ್ವೀಕರಿಸಿಕೊಂಡಂತಾಯಿತು. ನಿಮ್ಮಲ್ಲಿ ಯಾವನು ದೀನನಾಗಿದ್ದಾನೋ ಅವನೇ ನಿಮ್ಮಲ್ಲಿ ಪ್ರಮುಖನಾಗಿದ್ದಾನೆ” ಎಂದು ಹೇಳಿದನು.


ಪ್ರವಾದಿಗಳು ಈ ರಕ್ಷಣೆಯನ್ನು ಕುರಿತು ಸೂಕ್ಷ್ಮವಾಗಿ ಹುಡುಕಿ ಪರಿಶೀಲಿಸಲು ಪ್ರಯತ್ನಿಸಿದರು. ನಿಮಗೆ ಮುಂದೆ ಬರಲಿರುವ ಕೃಪೆಯನ್ನು ಕುರಿತು ಅವರು ಮಾತನಾಡಿದರು.


ದೇವರು ನಮಗೆ ಶ್ರೇಷ್ಠವಾದದ್ದನ್ನು ಕೊಡಲು ಯೋಜನೆ ಮಾಡಿದನು. ನಮ್ಮೊಡನೆ ಮಾತ್ರ ಅವರು ಪರಿಪೂರ್ಣರಾಗಬೇಕೆಂಬುದೇ ಆ ಯೋಜನೆ.


ಉಳಿದೆಲ್ಲಾ ಅಪೊಸ್ತಲರು ನನಗಿಂತಲೂ ಶ್ರೇಷ್ಠರಾಗಿದ್ದಾರೆ. ಇದಕ್ಕೆ ಕಾರಣವೇನೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು. ಆದ್ದರಿಂದ ಅಪೊಸ್ತಲನೆಂದು ಕರೆಸಿಕೊಳ್ಳುವುದಕ್ಕೂ ನಾನು ಯೋಗ್ಯನಲ್ಲ.


ಹೀಗಿರಲು, ನಿಮಲ್ಲಿ ಭಿನ್ನಾಭಿಪ್ರಾಯಗಳಿದ್ದು ಅದಕ್ಕೆ ನ್ಯಾಯನಿರ್ಣಯದ ಅಗತ್ಯವಿರುವಾಗ, ಸಭೆಗೆ ಸೇರಿಲ್ಲದ ಜನರ ಬಳಿಗೆ ನೀವು ಆ ಸಂಗತಿಗಳನ್ನು ತೆಗೆದುಕೊಂಡು ಹೋಗುವುದೇಕೆ? ಆ ಜನರಿಗೆ ಸಭೆಯಲ್ಲಿ ಯಾವ ಮಾನ್ಯತೆಯೂ ಇಲ್ಲ.


ಆಗ ಅನೇಕ ಜನರು ಆತನ ಬಳಿಗೆ ಬಂದರು. “ಯೋಹಾನನು ಎಂದೂ ಅದ್ಭುತಕಾರ್ಯವನ್ನು ಮಾಡಲಿಲ್ಲ. ಆದರೆ ಯೋಹಾನನು ಈ ಮನುಷ್ಯನ (ಯೇಸುವಿನ) ಬಗ್ಗೆ ಹೇಳಿದ ಪ್ರತಿಯೊಂದೂ ಸತ್ಯವಾದದ್ದು” ಎಂದು ಅವರು ಮಾತಾಡಿಕೊಂಡರು.


ಆತನು (ಯೇಸು) ವೃದ್ಧಿಯಾಗಬೇಕು ಮತ್ತು ನಾನು ಕಡಿಮೆಯಾಗಬೇಕು.


ಹುಟ್ಟಿದಂದಿನಿಂದ ನಾನು ಪಾಪಿಯೇ. ಮಾತೃಗರ್ಭವನ್ನು ಪ್ರವೇಶಿಸಿದ ದಿನದಿಂದ ನಾನು ದ್ರೋಹಿಯೇ.


“ಮನುಷ್ಯನು ಎಷ್ಟರವನು? ಅವನು ಪರಿಶುದ್ಧನಾಗಿರಲು ಸಾಧ್ಯವೇ? ಸ್ತ್ರೀಯಲ್ಲಿ ಹುಟ್ಟಿದವನು ನೀತಿವಂತನಾಗಿರಲು ಸಾಧ್ಯವೇ?


“ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.


ಯೋಬನು ಹೇಳಿದನು: “ನಾವು ಮನುಷ್ಯರಷ್ಟೇ. ನಮ್ಮ ಅಲ್ಪಜೀವಿತವು ಕಷ್ಟಗಳಿಂದ ತುಂಬಿಕೊಂಡಿದೆ.


ಯೋಹಾನನು ಉರಿಯುವ ದೀಪದಂತೆ ಬೆಳಕನ್ನು ಕೊಟ್ಟನು ಮತ್ತು ನೀವು ಅವನ ಬೆಳಕನ್ನು ಸ್ವಲ್ಪಕಾಲ ಸಂತೋಷದಿಂದ ಅನುಭವಿಸಿದಿರಿ.


ನನ್ನ ನಂತರ ಬರುವವನು ಆತನೇ. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಎಂದು ಹೇಳಿದನು.


ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ಯೆಹೋವನು ಕಾಪಾಡುತ್ತಾನೆ. ಬಲಹೀನ ಮನುಷ್ಯನೂ ದಾವೀದನಂತೆ ಶೂರನಾಗುವನು. ದಾವೀದನ ಸಂತತಿಯ ಜನರು ದೇವರುಗಳಂತಿದ್ದು ದೇವರ ಸ್ವಂತ ದೂತರಂತೆ ತಮ್ಮ ಜನರನ್ನು ನಡಿಸುವರು.


ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮನನ್ನು ಕುರಿತು ಹೇಳಿದನು. ಆತನು ಇನ್ನೂ ತನ್ನ ಮಹಿಮೆಯನ್ನು ಹೊಂದಿಲ್ಲದಿದ್ದ ಕಾರಣ ಪವಿತ್ರಾತ್ಮನು ಇನ್ನೂ ಬಂದಿರಲಿಲ್ಲ.


ಆ ಸಮಯದಲ್ಲಿ ಚಂದ್ರನ ಪ್ರಕಾಶವು ಸೂರ್ಯನಂತಿರುವದು. ಸೂರ್ಯನ ಪ್ರಕಾಶವು ಈಗ ಇರುವದಕ್ಕಿಂತ ಏಳರಷ್ಟು ಹೆಚ್ಚಾಗಿರುವದು. ಸೂರ್ಯನ ಒಂದು ದಿವಸದ ಬೆಳಕು ಒಂದು ವಾರದ ಬೆಳಕಿನಷ್ಟಿರುವದು. ಯೆಹೋವನು ತನ್ನ ಮುರಿದುಹೋದ ಜನರಿಗೆ ಆದ ಗಾಯದ ಪೆಟ್ಟುಗಳನ್ನು ಗುಣಪಡಿಸುವಾಗ ಇವೆಲ್ಲಾ ಸಂಭವಿಸುತ್ತವೆ.


ದೇವರಿಗೆ ಹೋಲಿಸಿದರೆ ಯಾವನೂ ನೀತಿವಂತನಲ್ಲ. ಯಾವ ಮನುಷ್ಯನೂ ಪರಿಶುದ್ಧನಾಗಿರಲು ಸಾಧ್ಯವಿಲ್ಲ.


“ನಿಮ್ಮ ತಂದೆಯ ಕುಟುಂಬವು ಸರ್ವಕಾಲವೂ ಆತನ ಸೇವೆ ಮಾಡುವುದೆಂದು ಇಸ್ರೇಲಿನ ದೇವರಾದ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಈಗ ಯೆಹೋವನು ಹೀಗೆನ್ನುತ್ತಾನೆ: ‘ಅದೆಂದಿಗೂ ಸಾಧ್ಯವಿಲ್ಲ. ನನ್ನನ್ನು ಸನ್ಮಾನಿಸುವವರನ್ನು ನಾನೂ ಸನ್ಮಾನಿಸುತ್ತೇನೆ. ಆದರೆ ನನ್ನನ್ನು ತಿರಸ್ಕರಿಸುವವರನ್ನು ನಾನೂ ತಿರಸ್ಕರಿಸುತ್ತೇನೆ.


ಮೊದಲು ನಾವೆಲ್ಲರೂ ಆ ಜನರಂತೆಯೇ ಜೀವಿಸುತ್ತಿದ್ದೆವು. ಶರೀರಭಾವದ ನಮ್ಮ ಇಚ್ಛೆಗಳನ್ನು ಪೂರೈಸಲು ನಾವು ಪ್ರಯತ್ನಿಸುತ್ತಿದ್ದೆವು. ನಮ್ಮ ದೇಹ, ಮನಸ್ಸುಗಳು ಬಯಸಿದ್ದನ್ನೆಲ್ಲಾ ನಾವು ಮಾಡಿದೆವು. ನಾವು ದುಷ್ಟಜನರಾಗಿದ್ದೆವು. ನಮ್ಮ ಆ ಜೀವಿತದ ದೆಸೆಯಿಂದ ನಾವು ಆಗಲೇ ದೇವರ ಕೋಪಕ್ಕೆ ಗುರಿಯಾಗಬೇಕಿತ್ತು. ನಮಗೂ ಇತರ ಜನರಿಗೂ ಯಾವ ವ್ಯತ್ಯಾಸವೂ ಇರಲಿಲ್ಲ.


ಆ ಕೃಪೆಯನ್ನು ಈವರೆಗೆ ನಮಗೆ ತೋರ್ಪಡಿಸಿರಲಿಲ್ಲ. ನಮ್ಮ ರಕ್ಷಕನಾದ ಕ್ರಿಸ್ತ ಯೇಸು ಪ್ರತ್ಯಕ್ಷನಾದಾಗ ಅದನ್ನು ನಮಗೆ ತೋರಿಸಲಾಯಿತು. ಯೇಸು ಮರಣವನ್ನು ನಾಶಪಡಿಸಿ, ನಮಗೆ ಜೀವಮಾರ್ಗವನ್ನು ಸುವಾರ್ತೆಯ ಮೂಲಕ ತೋರಿದನು.


ಪ್ರಭುವಿನ ದೃಷ್ಟಿಯಲ್ಲಿ ಯೋಹಾನನು ಮಹಾಪುರುಷನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯುವುದಿಲ್ಲ. ಯೋಹಾನನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.


ಆ ಕಾಲದಲ್ಲಿ ಸ್ನಾನಿಕ ಯೋಹಾನನು ಜುದೇಯದ ಅಡವಿಯಲ್ಲಿ ಬೋಧಿಸುವುದಕ್ಕೆ ಪ್ರಾರಂಭಿಸಿದನು.


ಯೋಹಾನನನ್ನು ಕುರಿತು ಪವಿತ್ರ ಗ್ರಂಥದಲ್ಲಿ ಹೀಗೆ ಬರೆದಿದೆ: ‘ಇಗೋ! ನಾನು (ದೇವರು) ನನ್ನ ದೂತನನ್ನು ನಿನಗಿಂತ ಮೊದಲು ಕಳುಹಿಸುತ್ತೇನೆ. ಅವನು ನಿನಗೆ ದಾರಿಯನ್ನು ಸಿದ್ಧಮಾಡುತ್ತಾನೆ.’


ಸ್ನಾನಿಕ ಯೋಹಾನನು ಬಂದ ಸಮಯದಿಂದ ಇಲ್ಲಿಯವರೆಗೂ ಪರಲೋಕರಾಜ್ಯ ಪ್ರಬಲವಾದ ಆಕ್ರಮಣಗಳಿಗೆ ಒಳಗಾಗಿದೆ. ಬಲಾತ್ಕಾರವನ್ನು ಉಪಯೋಗಿಸಿ ಜನರು ರಾಜ್ಯವನ್ನು ಪಡೆದುಕೊಳ್ಳುವುದಕ್ಕಾಗಿ ಪ್ರಯತ್ನಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು