ಮತ್ತಾಯ 11:13 - ಪರಿಶುದ್ದ ಬೈಬಲ್13 ಎಲ್ಲಾ ಪ್ರವಾದನೆಗಳು ಮತ್ತು ಮೋಶೆಯ ಧರ್ಮಶಾಸ್ತ್ರವು ಯೋಹಾನನು ಬರುವ ತನಕ ಪರಲೋಕರಾಜ್ಯದ ಕುರಿತಾಗಿ ಮುಂತಿಳಿಸಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಎಲ್ಲಾ ಪ್ರವಾದಿಗಳೂ, ಧರ್ಮಶಾಸ್ತ್ರವು ಯೋಹಾನನ ತನಕ ಪ್ರವಾದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಯೊವಾನ್ನನ ಕಾಲದ ತನಕ ಧರ್ಮಶಾಸ್ತ್ರ ಹಾಗು ಎಲ್ಲ ಪ್ರವಾದಿಗಳು ದೇವರ ಸಾಮ್ರಾಜ್ಯವನ್ನು ಕುರಿತು ಪ್ರವಾದನೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಪ್ರವಾದಿಗಳೆಲ್ಲರೂ ಧರ್ಮಶಾಸ್ತ್ರವೂ ಪ್ರವಾದಿಸುವದು ಯೋಹಾನನ ತನಕ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೋಹಾನನ ಕಾಲದ ತನಕ ಮೋಶೆಯ ನಿಯಮ ಹಾಗು ಎಲ್ಲ ಪ್ರವಾದಿಗಳು ದೇವರ ರಾಜ್ಯವನ್ನು ಕುರಿತು ಪ್ರವಾದನೆ ಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಜುವಾಂವಾಚ್ಯಾ ಕಾಲಾಪತರ್ ಸಗ್ಳ್ಯಾ ಪ್ರವಾದ್ಯಾನಿ ಅನಿ ಮೊಯ್ಜೆಚ್ಯಾ ಖಾಯ್ದ್ಯಾನಿ ದೆವಾಚ್ಯಾ ರಾಜಾಚ್ಯಾ ವಿಶಯಾತುಚ್ ಬೊಲ್ಲ್ಯಾನಾತ್. ಅಧ್ಯಾಯವನ್ನು ನೋಡಿ |
ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಹೂದ್ಯರು ಮತ್ತು ಯೆಹೂದ್ಯನಾಯಕರು ಯೇಸುವೇ ರಕ್ಷಕನೆಂಬುದನ್ನು ಅರ್ಥಮಾಡಿಕೊಳ್ಳಲಿಲ್ಲ. ಪ್ರವಾದಿಗಳು ಯೇಸುವಿನ ಬಗ್ಗೆ ಬರೆದಿದ್ದ ಮಾತುಗಳನ್ನು ಪ್ರತಿ ಸಬ್ಬತ್‌ದಿನದಂದು ಓದಲಾಗುತ್ತಿತ್ತು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಆ ಯೆಹೂದ್ಯರು ಯೇಸುವನ್ನು ಅಪರಾಧಿಯೆಂದು ತೀರ್ಪುಮಾಡಿದರು. ಹೀಗೆ ಮಾಡುವುದರ ಮೂಲಕವಾಗಿ ಅವರು ಪ್ರವಾದಿಗಳ ನುಡಿಗಳನ್ನು ನೆರವೇರಿಸಿದರು!