Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:19 - ಪರಿಶುದ್ದ ಬೈಬಲ್‌

19 ಮನುಷ್ಯಕುಮಾರನು ಬಂದನು. ಆತನು ಬೇರೆ ಜನರಂತೆ ಊಟಮಾಡುತ್ತಾನೆ; ದ್ರಾಕ್ಷಾರಸವನ್ನು ಕುಡಿಯುತ್ತಾನೆ. ಆದರೆ ಜನರು, ‘ನೋಡಿರಿ! ಅವನು ಹೊಟ್ಟೆಬಾಕ, ಅವನು ಕುಡುಕ, ಸುಂಕವಸೂಲಿಗಾರರು ಮತ್ತು ಕೆಟ್ಟ ಜನರು ಅವನ ಸ್ನೇಹಿತರಾಗಿದ್ದಾರೆ’ ಎಂದು ಹೇಳುತ್ತಾರೆ. ಆದರೆ ಜ್ಞಾನವು ತನ್ನ ಕ್ರಿಯೆಗಳಿಂದಲೇ ತನ್ನ ಯೋಗ್ಯತೆಯನ್ನು ತೋರ್ಪಡಿಸುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮನುಷ್ಯಕುಮಾರನು ಬಂದನು, ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನು ತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ. ಆದರೆ ಜ್ಞಾನವು ಅದರ ಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನರಪುತ್ರನು ಬಂದನು; ಅನ್ನಪಾನೀಯಗಳನ್ನು ಸೇವಿಸಿದನು. ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ ಎನ್ನುತ್ತಾರೆ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದರ ಕಾರ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಮನುಷ್ಯಕುಮಾರನು ಬಂದನು, ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ; ಅವರು - ಇಗೋ, ಇವನು ಹೊಟ್ಟೆಬಾಕನು, ಕುಡುಕನು, ಭ್ರಷ್ಟರ ಮತ್ತು ಪಾಪಿಷ್ಠರ ಗೆಳೆಯನು ಅನ್ನುತ್ತಾರೆ. ಆದರೆ ಜ್ಞಾನವು ತನ್ನ ಕೆಲಸಗಳಿಂದ ಜ್ಞಾನವೇ ಎಂದು ಗೊತ್ತಾಗುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮನುಷ್ಯಪುತ್ರನಾದ ನಾನು ಅನ್ನಪಾನ ಸೇವಿಸುವವನಾಗಿ ಬಂದೆನು. ಅದಕ್ಕೆ ಅವರು, ‘ಇಗೋ, ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು,’ ಎಂದು ಹೇಳುತ್ತಾರೆ. ಆದರೆ ಜ್ಞಾನವು ತನ್ನ ಕೃತ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮಾನ್ಸಾಚೊ ಲೆಕ್ ಯೆಲ್ಲ್ಯಾ ತನ್ನಾ ತೆನಿ ಖಾಲ್ಯಾನ್ ಅನಿ ಫಿಲ್ಯಾನ್, ತನ್ನಾ ತೆಕಾ ಲೊಕಾನಿ, ಹ್ಯಾ ಮಾನ್ಸಾಕ್ ಉಲ್ಲೆ ಬಗಾ, ಹ್ಯೊ ಫಿದೊಡೊ ಅನಿ ಬಕಾಸುರ್, ಅನಿ ತೆರ್‍ಗಿ ವಸುಲ್ ಕರ್‍ತಲ್ಯಾಂಚೊ ಅನಿ ಪಾಪಿ ಲೊಕಾಂಚೊ ದೊಸ್ತ್! ಮಟ್ಲ್ಯಾನಿ. ಖರೆ ದೆವಾಚಿ ಬುದ್ವಂತ್ಕಿ ಅಪ್ನಾಚ್ಯಾ ಕಾಮಾನಿಚ್ ಅಪ್ನಾಚೆ ಖರೆಪಾನ್ ದಾಕ್ವುನ್ ದಿತಾ. ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:19
19 ತಿಳಿವುಗಳ ಹೋಲಿಕೆ  

ಜನರೆಲ್ಲರೂ ಇದನ್ನು ನೋಡಿ, “ಯೇಸು ಎಂಥವನ ಮನೆಯಲ್ಲಿ ಇಳಿದುಕೊಳ್ಳುತ್ತಾನೆ. ಜಕ್ಕಾಯನು ಪಾಪಿ!” ಎಂದು ಆಕ್ಷೇಪಣೆ ಮಾಡತೊಡಗಿದರು.


ಒಂದು ಸಬ್ಬತ್ ದಿನದಲ್ಲಿ ಯೇಸು ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದನು. ಅಲ್ಲಿದ್ದ ಜನರೆಲ್ಲರೂ ಯೇಸುವನ್ನೇ ದೃಷ್ಟಿಸಿ ನೋಡುತ್ತಿದ್ದರು.


ಯೋಹಾನನು ಉಪದೇಶಿಸಿದ ದೇವರ ವಾಕ್ಯವನ್ನು ಜನರೆಲ್ಲರೂ ಸ್ವೀಕರಿಸಿಕೊಂಡರು. ಸುಂಕವಸೂಲಿಗಾರರೂ ಸ್ವೀಕರಿಸಿಕೊಂಡರು. ಇವರೆಲ್ಲರೂ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡರು.


ವಿವೇಕಿಯು ಜ್ಞಾನದ ಮೇಲೆ ಮನಸ್ಸಿಡುತ್ತಾನೆ. ಆದರೆ ಮೂಢನು ಬಹುದೂರದ ಸ್ಥಳಗಳ ಬಗ್ಗೆ ಕನಸು ಕಾಣುತ್ತಲೇ ಇರುವನು.


ನಮ್ಮಲ್ಲಿ ಪ್ರತಿಯೊಬ್ಬರು ತಮ್ಮ ನೆರೆಯವರ ಹಿತವನ್ನು ನೋಡಿಕೊಳ್ಳಬೇಕು. ನಂಬಿಕೆಯಲ್ಲಿ ಬಲಹೀನರಾಗಿರುವವರನ್ನು ಬಲಗೊಳಿಸಲು ನೆರವಾಗಿರಬೇಕು.


ಯೇಸು ಮತ್ತು ಆತನ ಶಿಷ್ಯರನ್ನು ಸಹ ಮದುವೆಗೆ ಆಹ್ವಾನಿಸಲಾಗಿತ್ತು.


ಅವರು, “ಆಮೆನ್! ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸುತ್ತಿಯೂ ಗೌರವವೂ ಅಧಿಕಾರವೂ ಮತ್ತು ಬಲವೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್!” ಎಂದರು.


ಕುಡುಕರೂ ಹೊಟ್ಟೆಬಾಕರೂ ಬಡವರಾಗುವರು. ತಿಂದು ಕುಡಿದು ನಿದ್ರಿಸುವುದೇ ಅವರ ಕಾರ್ಯಗಳು. ಅವರು ಬಹು ಬೇಗನೆ ಬಡವರಾಗುವರು.


ನಿಮ್ಮನ್ನು ಪ್ರೀತಿಸುವ ಜನರನ್ನೇ ನೀವು ಪ್ರೀತಿಸಿದರೆ, ಅದರಿಂದ ನಿಮಗೇನು ಪ್ರತಿಫಲ ದೊರೆಯುವುದು? ಸುಂಕದವರು ಸಹ ಹಾಗೆ ಮಾಡುತ್ತಾರೆ.


ನನ್ನ ಶತ್ರುವಿಗೂ ನನ್ನನ್ನು ಕೊಲ್ಲಬೇಕೆಂದಿರುವವರಿಗೂ ಯೆಹೋವನು ಅವುಗಳನ್ನು ಮಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು