ಮತ್ತಾಯ 11:23 - ಪರಿಶುದ್ದ ಬೈಬಲ್23 “ಕಪೆರ್ನೌಮೇ, ನೀನು ಪರಲೋಕಕ್ಕೆ ಎತ್ತಲ್ಪಡುವುದಾಗಿ ಯೋಚಿಸುವಿಯೋ? ಇಲ್ಲ! ನೀನು ಪಾತಾಳಕ್ಕೆ ಇಳಿಯುವೆ. ನಾನು ನಿನ್ನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿದೆ. ಸೊದೋಮಿನಲ್ಲಿ ಆ ಅದ್ಭುತಕಾರ್ಯಗಳನ್ನು ನಡೆಸಿದ್ದರೆ ಆ ಜನರು ಪಾಪಮಾಡುವುದನ್ನು ನಿಲ್ಲಿಸಿಬಿಡುತ್ತಿದ್ದರು ಮತ್ತು ಇಂದಿನವರೆಗೂ ಅದು ಪಟ್ಟಣವಾಗಿಯೇ ಉಳಿದಿರುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಎಲೈ ಕಪೆರ್ನೌಮೇ ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಸೊದೋಮಿನಲ್ಲಿ ಮಾಡಿದ್ದರೆ, ಅದು ಇಂದಿನವರೆಗೂ ಅಳಿಯದೆ ಉಳಿಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಎಲಾ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಪಾತಾಳಕ್ಕೇ ಇಳಿಯುವಿ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋವಿುನಲ್ಲಿ ನಡೆದಿದ್ದರೆ ಅದು ಇಂದಿನವರೆಗೂ ಉಳಿಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ. ಏಕೆಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ, ಅದು ಇಂದಿನವರೆಗೂ ಉಳಿಯುತ್ತಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಅನಿ ತಿಯಾ ಕಫರ್‍ನವ್; ತಿಯಾ ತುಕಾಚ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ಕ್ ಬಗುಲೆ ಕಾಯ್? ತಿಯಾ ನರ್‍ಕಾತುಚ್ ಜಾನಾರ್. ಕಶ್ಯಾಕ್ ಮಟ್ಲ್ಯಾರ್, ತುಜ್ಯಾ ಭುತ್ತುರ್ ಕರಲ್ಲಿ ತವ್ಡಿ ವಿಚಿತ್ರ್ ಕಾಮಾ, ಸೊದಾಮಾತ್ ಕರಲ್ಲಿ ರ್‍ಹಾಲ್ಯಾರ್, ತೆ ಶಾರ್ ಆಜ್ ಪತರ್ ತಸೆಚ್ ರ್‍ಹಾಯ್ ಹೊತ್ತೆ ಅಸಿಲ್! ಅಧ್ಯಾಯವನ್ನು ನೋಡಿ |
“ಈಗ ಆ ನೀರಿನ ಬಳಿಯಲ್ಲಿರುವ ಯಾವ ಮರಗಳೂ ಹೆಮ್ಮೆಪಡುವದಿಲ್ಲ. ಅವು ಮುಗಿಲನ್ನು ಮುಟ್ಟಲು ಪ್ರಯತ್ನಿಸುವದಿಲ್ಲ. ಚೆನ್ನಾಗಿ ಬೆಳೆದ ಮರಗಳು ಆ ನೀರನ್ನು ಕುಡಿದು ತಾನು ಉದ್ದವಾಗಿ ಬೆಳೆದಿದ್ದೇನೆ ಎಂದು ಕೊಚ್ಚಿಕೊಳ್ಳುವದಿಲ್ಲ. ಯಾಕೆಂದರೆ ಎಲ್ಲವೂ ಸಾಯುವುದಕ್ಕಾಗಿ ನೇಮಕಗೊಂಡಿವೆ. ಅವುಗಳೆಲ್ಲಾ ಮರಣದ ಸ್ಥಳವನ್ನು ಸೇರುವವು. ಅಲ್ಲಿ ಸತ್ತು, ಮರಣದ ಆ ಸ್ಥಳಕ್ಕೆ ಹೋಗಿ ಪಾತಾಳಕ್ಕೆ ಸೇರಿದವರನ್ನು ಸೇರುವವು.”
ನಾನು ನೋಡಿದಾಗ, ನನ್ನ ಮುಂದೆ ಒಂದು ಬೂದುಬಣ್ಣದ ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲೆ ಕುಳಿತಿದ್ದ ಸವಾರನೇ ಮೃತ್ಯು. ಅವನ ಹಿಂದೆ ಪಾತಾಳ ಎಂಬುವನು ಬಂದನು. ಅವರಿಗೆ ಭೂಮಿಯ ಕಾಲುಭಾಗದ ಮೇಲೆ ಅಧಿಕಾರವನ್ನು ನೀಡಲಾಯಿತು. ಕತ್ತಿಯಿಂದಲೂ ಬರಗಾಲದಿಂದಲೂ ರೋಗಗಳಿಂದಲೂ ಮತ್ತು ಲೋಕದ ಮೇಲಿರುವ ಕಾಡುಮೃಗಗಳಿಂದಲೂ ಜನರನ್ನು ಕೊಲ್ಲುವ ಅಧಿಕಾರವನ್ನು ಅವರಿಗೆ ನೀಡಲಾಯಿತು.