ಮತ್ತಾಯ 11:5 - ಪರಿಶುದ್ದ ಬೈಬಲ್5 ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ; ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಕುಡ್ಡ್ಯಾಕ್ ದಿಸ್ತಾ ಸೊಟ್ಟೊ ಚಲ್ತಾ, ಜೆ ಕೊನಾಕ್ ಕುಸ್ಟ್ ರೊಗ್ ಹಾಯ್ ತೊ ಪವಿತ್ರ್ ಹೊವ್ಲಾ, ಕಿಂವ್ಡೊ ಆಯ್ಕುಲಾ, ಮರಲ್ಲಿ ಲೊಕಾ ಝಿತ್ತಿ ಹೊವ್ಕ್ ಲಾಗ್ಲ್ಯಾತ್, ಅನಿ ಗರಿಬಾಕ್ನಿ ಬರಿ ಖಬರ್ ಸಾಂಗುನ್ ಹೊವ್ಲಾ. ಅಧ್ಯಾಯವನ್ನು ನೋಡಿ |
ಇಸ್ರೇಲಿನ ರಾಜನು ಪತ್ರವನ್ನು ಓದಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಾನು ದೇವರೇನು? ಇಲ್ಲ! ಹುಟ್ಟು ಮತ್ತು ಸಾವುಗಳ ಮೇಲೆ ನನಗೆ ಯಾವ ಶಕ್ತಿಯೂ ಇಲ್ಲ. ಹೀಗಿರುವಾಗ ಅರಾಮ್ಯರ ರಾಜನು ಕುಷ್ಠರೋಗಪೀಡಿತನಾದ ಮನುಷ್ಯನನ್ನು ನನ್ನ ಬಳಿಗೆ ಗುಣಪಡಿಸಲು ಏಕೆ ಕಳುಹಿಸಿದನು? ಇದರ ಬಗ್ಗೆ ನೀವೇ ಯೋಚಿಸಿರಿ. ಇದು ಒಂದು ಕುತಂತ್ರವೆಂಬುದು ನಿಮಗೇ ತಿಳಿಯುತ್ತದೆ. ಅರಾಮ್ಯರ ರಾಜನು ಯುದ್ಧವನ್ನು ಆರಂಭಿಸಲು ಪ್ರಯತ್ನಿಸುತ್ತಿದ್ದಾನೆ!” ಎಂದು ಹೇಳಿದನು.