Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:12 - ಪರಿಶುದ್ದ ಬೈಬಲ್‌

12 ಮನುಷ್ಯನು ಕುರಿಗಿಂತ ಎಷ್ಟೋ ಬೆಲೆಯುಳ್ಳವನಾಗಿದ್ದಾನೆ. ಆದ್ದರಿಂದ ಸಬ್ಬತ್‌ದಿನದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವುದು ಮೋಶೆಯ ಧರ್ಮಶಾಸ್ತ್ರಕ್ಕೆ ಅನುಸಾರವಾದದ್ದು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕುರಿಗಿಂತ ಮನುಷ್ಯನು ಎಷ್ಟೋ ಮೌಲ್ಯವುಳ್ಳವನು. ಆದಕಾರಣ ಸಬ್ಬತ್ ದಿನದಲ್ಲಿ ಒಳ್ಳೆಯ ಕೆಲಸ ಮಾಡುವುದು ನ್ಯಾಯವಾದದ್ದೆ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕುರಿಗಿಂತ ನರಮಾನವ ಎಷ್ಟೋ ಮೌಲ್ಯವುಳ್ಳವನಲ್ಲವೇ? ಆದುದರಿಂದ ಸಬ್ಬತ್ ದಿನ ಸತ್ಕಾರ್ಯಮಾಡುವುದು ಶಾಸ್ತ್ರಬದ್ಧವಾದುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕುರಿಗಿಂತ ಮನುಷ್ಯನು ಎಷ್ಟೋ ಹೆಚ್ಚು. ಆದಕಾರಣ ಸಬ್ಬತ್ ದಿನದಲ್ಲಿ ಒಳ್ಳೇ ಕೆಲಸ ಮಾಡುವದು ತಕ್ಕದ್ದೇ ಸರಿ ಎಂದು ಉತ್ತರಕೊಟ್ಟು ಆ ಮನುಷ್ಯನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಮೌಲ್ಯವುಳ್ಳವನಾಗಿದ್ದಾನಲ್ಲವೇ? ಆದ್ದರಿಂದ ಸಬ್ಬತ್ ದಿನಗಳಲ್ಲಿ ಒಳ್ಳೆಯದನ್ನು ಮಾಡುವುದು ನ್ಯಾಯಸಮ್ಮತವಾಗಿದೆ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಎಕ್ ಮಾನುಸ್ ಬಕ್ರ್ಯಾಚ್ಯಾನ್ಕಿ ಕವ್ಡೊಕಿ ಕಿಮ್ತಿಚೊ! ತಸೆಹೊಲ್ಯಾರ್, ಅಮ್ಚೊ ಖಾಯ್ದೊ ಅರಾಮ್ ಘೆತಲ್ಯಾ ದಿಸಿ, ಅನಿಎಕ್ಲ್ಯಾಚೆ ಬರೆ ಕರುಚೆ ಮನುನ್ ಮನ್ತಾ ಮನುನ್ ಹೊಲೆ.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:12
6 ತಿಳಿವುಗಳ ಹೋಲಿಕೆ  

ಪಕ್ಷಿಗಳ ಕಡೆಗೆ ನೋಡಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ ಇಲ್ಲವೇ ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ. ಆದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳಿಗೆ ಆಹಾರವನ್ನು ನೀಡುತ್ತಾನೆ. ನೀವು ಆ ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರೆಂಬುದು ನಿಮಗೆ ಗೊತ್ತಿದೆ.


ಆಗ ಯೇಸು ಅವರಿಗೆ, “ಸಬ್ಬತ್‌ದಿನದಲ್ಲಿ ಯಾವ ಕಾರ್ಯವನ್ನು ಮಾಡುವುದು ಸರಿ? ಒಳ್ಳೆಯ ಕಾರ್ಯವನ್ನೋ ಅಥವಾ ಕೆಟ್ಟಕಾರ್ಯವನ್ನೋ? ಜೀವವನ್ನು ಉಳಿಸುವುದೋ? ಅಥವಾ ನಾಶಮಾಡುವುದೋ?” ಎಂದು ಕೇಳಿದನು.


ನಂತರ ಯೇಸು ಜನರಿಗೆ, “ಸಬ್ಬತ್‌ದಿನದಂದು ಯಾವ ಕಾರ್ಯಗಳನ್ನು ಮಾಡಬೇಕು? ಒಳ್ಳೆಯ ಕಾರ್ಯವನ್ನೇ? ಕೆಟ್ಟಕಾರ್ಯವನ್ನೇ? ಒಂದು ಜೀವವನ್ನು ರಕ್ಷಿಸಬೇಕೇ? ಅಥವಾ ನಾಶಪಡಿಸಬೇಕೇ?” ಎಂದು ಕೇಳಿದನು. ಆಗ ಅವರು ಏನೂ ಉತ್ತರ ಕೊಡಲಾರದೆ ಮೌನವಾಗಿದ್ದರು.


ಆದಕಾರಣ ಹೆದರಬೇಡಿ. ನೀವು ಅನೇಕ ಗುಬ್ಬಚ್ಚಿಗಳಿಗಿಂತಲೂ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.


ಪಕ್ಷಿಗಳನ್ನು ನೋಡಿರಿ. ಅವು ಬಿತ್ತುವುದೂ ಇಲ್ಲ, ಕೊಯ್ಯುವುದೂ ಇಲ್ಲ. ಅವು ಆಹಾರವನ್ನು ಮನೆಗಳಲ್ಲಾಗಲಿ ಕಣಜಗಳಲ್ಲಾಗಲಿ ತುಂಬಿಟ್ಟುಕೊಳ್ಳುವುದಿಲ್ಲ. ದೇವರೇ ಅವುಗಳನ್ನು ಪರಿಪಾಲಿಸುತ್ತಾನೆ. ನೀವು ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರಾಗಿದ್ದೀರಿ.


ಒಂದು ಸಬ್ಬತ್ ದಿನದಲ್ಲಿ ಯೇಸು ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದನು. ಅಲ್ಲಿದ್ದ ಜನರೆಲ್ಲರೂ ಯೇಸುವನ್ನೇ ದೃಷ್ಟಿಸಿ ನೋಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು