Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:14 - ಪರಿಶುದ್ದ ಬೈಬಲ್‌

14 ಆದರೆ ಫರಿಸಾಯರು ಹೊರಟುಹೋಗಿ, ಯೇಸುವನ್ನು ಕೊಲ್ಲಲು ಉಪಾಯಗಳನ್ನು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಫರಿಸಾಯರು ಹೊರಕ್ಕೆ ಹೋಗಿ ಇವನನ್ನು ಯಾವ ರೀತಿಯಲ್ಲಿ ಕೊಲ್ಲೋಣ ಎಂದು ಆತನ ವಿರುದ್ಧ ಸಂಚು ಮಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಫರಿಸಾಯರಾದರೋ ಅಲ್ಲಿಂದ ಹೊರಗೆ ಹೋಗಿ ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ಫರಿಸಾಯರು ಹೊರಕ್ಕೆ ಹೋಗಿ ಇವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಆತನಿಗೆ ವಿರೋಧವಾಗಿ ಆಲೋಚನೆಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಫರಿಸಾಯರು ಹೊರಗೆ ಹೋಗಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಅವರ ವಿರೋಧವಾಗಿ ಆಲೋಚನೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತನ್ನಾ ಫಾರಿಜೆವಾ ಥೈತ್ನಾ ಭಾಯ್ರ್ ಗೆಲಿ ಅನಿ ಜೆಜುಕ್ ಕಶೆ ಜಿವಾನಿ ಮಾರ್‍ತಲೆ, ಮನುನ್ ಬೊಲುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:14
15 ತಿಳಿವುಗಳ ಹೋಲಿಕೆ  

ಅಂದಿನಿಂದ ಯೆಹೂದ್ಯನಾಯಕರು ಯೇಸುವನ್ನು ಕೊಲ್ಲಲು ಸಂಚು ಮಾಡಲಾರಂಭಿಸಿದರು.


ಯೇಸುವನ್ನು ಬಂಧಿಸಲು ಯೆಹೂದ್ಯರು ಮತ್ತೆ ಪ್ರಯತ್ನಿಸಿದರು. ಆದರೆ ಯೇಸು ಅವರಿಂದ ತಪ್ಪಿಸಿಕೊಂಡನು.


ಯೇಸು ಸಬ್ಬತ್ತನ್ನು ಉಲ್ಲಂಘಿಸಿದ್ದಲ್ಲದೆ ದೇವರನ್ನು ತನ್ನ ತಂದೆಯೆಂದು ಹೇಳಿಕೊಂಡು ತನ್ನನ್ನು ದೇವರಿಗೆ ಸರಿಸಮಾನನನ್ನಾಗಿ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಆತನನ್ನು ಕೊಲ್ಲಲು ಮತ್ತಷ್ಟು ಪ್ರಯತ್ನಿಸಿದರು.


ಫರಿಸಾಯರು ಮತ್ತು ಧರ್ಮೋಪದೇಶಕರು ಬಹಳವಾಗಿ ಕೋಪಗೊಂಡರು. ಅವರು, “ನಾವು ಯೇಸುವಿಗೆ ಏನು ಮಾಡೋಣ?” ಎಂದು ತಮ್ಮತಮ್ಮೊಳಗೆ ಸಂಚುಮಾಡಿದರು.


ಆಗ ಫರಿಸಾಯರು ಹೊರಗೆ ಹೋಗಿ, ಹೆರೋದ್ಯರನ್ನು ಕೂಡಿಕೊಂಡು ಯೇಸುವನ್ನು ಯಾವ ರೀತಿ ಕೊಲ್ಲಬೇಕೆಂದು ಆಲೋಚಿಸಿದರು.


ಆ ಸಭೆಯಲ್ಲಿ ಅವರು ಯೇಸುವನ್ನು ಉಪಾಯದಿಂದ ಬಂಧಿಸಿ ಕೊಲ್ಲಲು ಸಮಾಲೋಚಿಸಿದರು.


ಆದರೆ ಮಹಾಯಾಜಕರು ಮತ್ತು ಫರಿಸಾಯರು, ಯೇಸು ಎಲ್ಲಿದ್ದಾನೆಂಬುದು ಯಾರಿಗಾದರೂ ತಿಳಿದು ಬಂದರೆ ತಮಗೆ ತಿಳಿಸಬೇಕೆಂದು ವಿಶೇಷ ಆಜ್ಞೆಯನ್ನು ಪ್ರಕಟಿಸಿದ್ದರು. ಅವರು ಆತನನ್ನು ಬಂಧಿಸಬೇಕೆಂದಿದ್ದರು.


ಮರುದಿನ ಮುಂಜಾನೆ, ಮಹಾಯಾಜಕರೆಲ್ಲರೂ ಮತ್ತು ಹಿರಿಯ ನಾಯಕರೆಲ್ಲರೂ ಯೇಸುವನ್ನು ಕೊಲ್ಲಲು ತೀರ್ಮಾನಿಸಿದರು.


ಪಸ್ಕ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬಕ್ಕೆ ಕೇವಲ ಎರಡು ದಿನಗಳಿದ್ದವು. ಮಹಾಯಾಜಕರು ಹಾಗೂ ಧರ್ಮೋಪದೇಶಕರು ಯಾವುದಾದರೊಂದು ಸುಳ್ಳು ಅಪವಾದವನ್ನು ಕಂಡುಹಿಡಿದು ಯೇಸುವನ್ನು ಬಂಧಿಸಿ ಆತನನ್ನು ಕೊಲ್ಲಬೇಕೆಂದಿದ್ದರು.


ಮಹಾಯಾಜಕರು ಮತ್ತು ಧರ್ಮೋಪದೇಶಕರು ಯೇಸುವನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸುತ್ತಾ ಜನರ ಭಯದಿಂದ ತಕ್ಕ ಮಾರ್ಗವನ್ನು ಹುಡುಕತೊಡಗಿದರು.


ಇದನ್ನು ಕೇಳಿ ಜನರು ಆತನನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಯೇಸುವಿನ ಮೇಲೆ ಕೈಹಾಕಲು ಯಾರಿಗೂ ಸಾಧ್ಯವಿರಲಿಲ್ಲ, ಏಕೆಂದರೆ ಯೇಸುವನ್ನು ಕೊಲ್ಲಲು ಇನ್ನೂ ಸರಿಯಾದ ಸಮಯ ಬಂದಿರಲಿಲ್ಲ.


ಯೇಸುವಿನ ಬಗ್ಗೆ ಜನರು ಹೇಳುತ್ತಿದ್ದ ಈ ಸಂಗತಿಗಳನ್ನು ಫರಿಸಾಯರು ಕೇಳಿದರು. ಆದ್ದರಿಂದ ಮಹಾಯಾಜಕರು ಮತ್ತು ಫರಿಸಾಯರು ಯೇಸುವನ್ನು ಬಂಧಿಸುವುದಕ್ಕಾಗಿ ದೇವಾಲಯದ ಸಿಪಾಯಿಗಳಲ್ಲಿ ಕೆಲವರನ್ನು ಕಳುಹಿಸಿದರು.


ಕೆಲವರು ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಬಂಧಿಸಲು ಯಾರೂ ಪ್ರಯತ್ನಿಸಲಿಲ್ಲ.


ಇದನ್ನು ಕೇಳಿದ ಕೂಡಲೇ ಜನರು ಆತನತ್ತ ಬೀರಲು ಕಲ್ಲುಗಳನ್ನು ತೆಗೆದುಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದಿಂದ ಹೊರಟುಹೋದನು.


ಯೆಹೂದ್ಯರು ಯೇಸುವನ್ನು ಕೊಲ್ಲಲು ಮತ್ತೆ ಕಲ್ಲುಗಳನ್ನು ತೆಗೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು