ಮತ್ತಾಯ 12:18 - ಪರಿಶುದ್ದ ಬೈಬಲ್18 “ಇಗೋ, ನನ್ನ ಸೇವಕನು. ನಾನು ಆತನನ್ನು ಆರಿಸಿಕೊಂಡಿದ್ದೇನೆ. ಆತನನ್ನು ಪ್ರೀತಿಸುತ್ತೇನೆ, ಆತನನ್ನು ಮೆಚ್ಚಿದ್ದೇನೆ. ಆತನ ಮೇಲೆ ನನ್ನ ಆತ್ಮವನ್ನು ಇರಿಸುವೆನು. ಆತನು ಜನಾಂಗಗಳಿಗೆ ನ್ಯಾಯವಾದ ತೀರ್ಪು ಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು. ಈತನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು. ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಇದಿಗೋ, ನನ್ನ ದಾಸನು, ನನ್ನಿಂದಾಯ್ಕೆಯಾದವನು, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ನೆಲೆಗೊಳಿಸುವೆ ಇವನಲಿ ಎನ್ನಾತ್ಮವನು; ಸಾರುವನಿವನು ಜಗದಲಿ ನನ್ನ ಧರ್ಮವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇಗೋ, ನನ್ನ ಸೇವಕನು; ಈತನನ್ನು ನಾನು ಆರಿಸಿಕೊಂಡೆನು; ಈತನು ನನಗೆ ಇಷ್ಟನು; ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು; ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಈತನು ನಾನು ಆರಿಸಿಕೊಂಡ ನನ್ನ ದಾಸನು, ಈ ನನ್ನ ಪ್ರಿಯನಲ್ಲಿ ನನ್ನ ಪ್ರಾಣವು ಸಂಪೂರ್ಣ ಮೆಚ್ಚಿದೆ. ನಾನು ಈತನ ಮೇಲೆ ನನ್ನ ಆತ್ಮವನ್ನು ಇರಿಸುವೆನು, ಈತನು ಜನಾಂಗಗಳಿಗೆ ನ್ಯಾಯವನ್ನು ಸಾರುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತೆ, ಕಾಯ್ ಮಟ್ಲ್ಯಾರ್, ಹ್ಯೊ, ಮಾಜೊ ಅಪುರ್‍ಬಾಯೆಚೊ ಸೆವಕ್. ತೆಚೊ ಮಿಯಾ ಪ್ರೆಮ್ ಕರ್‍ತಾ, ಅನಿ ತೆಚ್ಯಾ ವಿಶಯಾತ್ ಮಿಯಾ ಖುಶಿ ಹಾವ್, ತೆಚ್ಯಾ ವರ್‍ತಿ ಮಿಯಾ ಮಾಜೊ ಪವಿತ್ರ್ ಆತ್ಮೊ ಧಾಡುನ್ ದಿತಾ. ಅನಿ ತೊ ಸಗ್ಳ್ಯಾ ದೆಶಾಂಚ್ಯಾ ಲೊಕಾಕ್ನಿ ನ್ಯಾಯ್ ಕರುನ್ ದಿತಾ. ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.