ಮತ್ತಾಯ 12:22 - ಪರಿಶುದ್ದ ಬೈಬಲ್22 ಆಗ ಕೆಲವು ಜನರು ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಕುರುಡನಾಗಿದ್ದನು ಮತ್ತು ಮೂಕನಾಗಿದ್ದನು. ಯೇಸು ಆ ಮನುಷ್ಯನನ್ನು ಗುಣಪಡಿಸಿದ್ದರಿಂದ ಮಾತನಾಡುವುದಕ್ಕೂ ನೋಡುವುದಕ್ಕೂ ಸಾಧ್ಯವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ದೆವ್ವ ಹಿಡಿದ ಕುರುಡನೂ, ಮೂಕನೂ ಆಗಿರುವ ಒಬ್ಬನನ್ನು ಯೇಸುವಿನ ಬಳಿಗೆ ಕರೆತಂದರು. ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಮಾತು ಹಾಗೂ ದೃಷ್ಟಿ ಎರಡೂ ಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಬಳಿಕ, ದೆವ್ವಹಿಡಿದು ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಕೆಲವರು ಯೇಸುಸ್ವಾಮಿಯ ಬಳಿಗೆ ಕರೆತಂದರು. ಯೇಸು ಅವನನ್ನು ಗುಣಪಡಿಸಿದರು. ಅವನಿಗೆ ದೃಷ್ಟಿ ಹಾಗೂ ಮಾತು ಎರಡೂ ಬಂದಿತು. ಅಲ್ಲಿದ್ದ ಜನರೆಲ್ಲರೂ ಬೆರಗಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ದೆವ್ವಹಿಡಿದು ಕುರುಡನೂ ಮೂಕನೂ ಆಗಿರುವ ಒಬ್ಬನನ್ನು ಆತನ ಬಳಿಗೆ ಕರತಂದರು; ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಬಾಯಿ ಕಣ್ಣು ಎರಡೂ ಬಂದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ಕೆಲವರು ದೆವ್ವಹಿಡಿದ ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವರು ಅವನನ್ನು ಗುಣಪಡಿಸಿದ್ದರಿಂದ, ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ದೃಷ್ಟಿ ಹೊಂದಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತನ್ನಾ ಉಲ್ಲ್ಯಾ ಲೊಕಾನಿ, ಎಕ್ ಕುಡ್ಡ್ಯಾ ಅನಿ ಮುಕ್ಕ್ಯಾ ಮಾನ್ಸಾಕ್ ಜೆಜುಕ್ಡೆ ಘೆವ್ನ್ ಯೆಲ್ಯಾನಿ. ತೆಕಾ ಗಿರೊಲಾಗಲ್ಲೊ ಹೊತ್ತೊ. ಜೆಜುನ್ ತೆಕಾ ಗುನ್ ಕರ್‍ಲ್ಯಾನ್ ತನ್ನಾ ತೊ ಬೊಲುಕ್‍ಲಾಲೊ ಅನಿ ತೆಕಾ ದಿಸುಕ್‍ಲಾಲೆ. ಅಧ್ಯಾಯವನ್ನು ನೋಡಿ |
ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.